ಬೆಂಗಳೂರು – ಹಾಸನ ರೈಲಿಗೆ ಹಸಿರು ನಿಶಾನೆ

Team Udayavani, Mar 27, 2017, 3:00 AM IST

Rail-26-3.jpg

ಬೆಂಗಳೂರು: ಅಂತೂ ಶ್ರವಣಬೆಳಗೊಳದ ಗೊಮ್ಮಟೇಶ್ವರ ಮೂರ್ತಿಯ ಮಹಾಮಜ್ಜನಕ್ಕೆ ವರ್ಷವಿರುವಾಗಲೇ ಬೆಂಗಳೂರು – ಹಾಸನ ರೈಲು ಮಾರ್ಗಕ್ಕೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ರವಿವಾರ ರೈಲ್ವೇ ಸಚಿವ ಸುರೇಶ್‌ ಪ್ರಭು, ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈಲಿಗೆ ಹಸಿರು ಬಾವುಟ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ವರ್ಷ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕೆ ದೇಶದ ಎಲ್ಲ ಕಡೆಗಳಿಂದಲೂ ಹಾಸನ – ಶ್ರವಣಬೆಳಗೊಳಕ್ಕೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಬೇಕು ಎಂದು ರೈಲ್ವೇ ಸಚಿವರಲ್ಲಿ ಮನವಿ ಮಾಡಿದರು.

ಹಾಸನ – ಮಂಗಳೂರು ರೈಲು ಮಾರ್ಗವನ್ನು ಆದಷ್ಟು ಬೇಗ ಬ್ರಾಡ್‌ಗೇಜ್‌ ಆಗಿ ಪರಿವರ್ತಿಸಬೇಕು. ಬೆಂಗಳೂರು -ಮಂಗಳೂರು ಹೊಸ ರೈಲಿಗೆ ‘ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌’ ಎಂದು ನಾಮಕರಣ ಮಾಡಿರುವುದು ಸ್ವಾಗತಾರ್ಹ. ಅಲ್ಲದೆ, ಬೆಂಗಳೂರು-ಹಾಸನ ರೈಲಿಗೂ ‘ಹಾಸನಾಂಬೆ’ ಎಂದು ಹೆಸರಿಡಬೇಕು. ಈ ನಡುವೆ, ಬೆಂಗಳೂರಿನಲ್ಲಿ ಸಬ್‌ ಅರ್ಬನ್‌ ರೈಲು ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ರೈಲ್ವೇ ಸಚಿವರು ಭರವಸೆ ನೀಡಿದ್ದಾರೆ.  ಈ ಯೋಜನೆಗೆ ಬಜೆಟ್‌ನಲ್ಲಿ ಈಗಾಗಲೇ 370 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.

ಬೆಂಗಳೂರು-ಹಾಸನ ಮಾರ್ಗದ ಕಾಮಗಾರಿ ಪೂರ್ಣಗೊಳಿಸುವುದಕ್ಕೆ 21 ವರ್ಷ ಬೇಕಾಯಿತು. ಈ ಮಾರ್ಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ವಿಳಂಬ ಹಾಗೂ ಯೋಜನೆಗೆ ಹಣಕಾಸಿನ ಕೊರತೆ ಉಂಟಾಗಿದ್ದ ಕಾರಣದಿಂದ ಕಾಮಗಾರಿ ಬಹಳಷ್ಟು ವಿಳಂಬವಾಗಿದೆ. 2010ರ ಬಳಿಕ ಯೋಜನೆಯ ಒಟ್ಟು ವೆಚ್ಚದ ಶೇ.50ರಷ್ಟು ಹಣವನ್ನು ರಾಜ್ಯ ಸರಕಾರ ಭರಿಸಲು ಶುರು ಮಾಡಿದ ಅನಂತರವಷ್ಟೇ ಕಾಮಗಾರಿ ಚುರುಕುಗೊಳಿಸಲು ಸಾಧ್ಯವಾಯಿತು. ಅದರೆ, ಮಾರ್ಗ ಮಂಜೂರು ಮಾಡಿದ್ದ ಮಾಜಿ ಪ್ರಧಾನಿ ದೇವೇಗೌಡರ ಸಮ್ಮುಖದಲ್ಲೇ ಈಗ ರೈಲು ಸೇವೆಗೆ ಚಾಲನೆ ದೊರೆತಿರುವುದು ಸಂತಸ ತಂದಿದೆ ಎಂದರು.

ಪ್ರಧಾನಿ ಮೋದಿ ನೆರವು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮಾತನಾಡಿ, ನಾನು ಪ್ರಧಾನಿಯಾದಾಗ ಬೆಂಗಳೂರು – ಹಾಸನ ಸಹಿತ ಕರ್ನಾಟಕದಲ್ಲಿ ಒಟ್ಟು 14 ಹೊಸ ರೈಲು ಯೋಜನೆಗಳಿಗೆ ಮಂಜೂರಾತಿ ನೀಡಿದ್ದೆ. ಬೆಂಗಳೂರು – ಹಾಸನ ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಅನಂತರ ಬಂದ ಎಲ್ಲ ರೈಲ್ವೇ ಸಚಿವರು, ಪ್ರಧಾನಿಗಳನ್ನು ಭೇಟಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ, 2014ರಲ್ಲಿ ಮೋದಿ ಪ್ರಧಾನಿಯಾದ ಬಳಿಕ ಬಹಳ ಆಸಕ್ತಿ ವಹಿಸಿ ಈ ಯೋಜನೆ ಪೂರ್ಣಗೊಳಿಸುವುದಕ್ಕೆ ಎಲ್ಲ ರೀತಿಯ ನೆರವು ಕೊಟ್ಟಿದ್ದಾರೆ ಎಂದರು. ಬೆಂಗಳೂರು – ಹಾಸನ ಮಾರ್ಗದಲ್ಲಿ ಆದಷ್ಟು ಬೇಗ ಮಂಗಳೂರಿಗೂ ಹೊಸ ರೈಲು ಸಂಚಾರ ಪ್ರಾರಂಭಿಸಬೇಕು. ಬೆಂಗಳೂರು-ಹಾಸನ-ಮಂಗಳೂರು ರೈಲಿಗೆ ‘ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌’ ಎಂದು ನಾಮಕರಣ ಮಾಡಬೇಕು. ಬೆಂಗಳೂರು – ಶ್ರವಣಬೆಳಗೊಳ – ಹಾಸನ – ಬೇಲೂರು – ಶೃಂಗೇರಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹೊಸ ರೈಲು ಮಾರ್ಗ ನಿರ್ಮಿಸಬೇಕು ಎಂದು ರೈಲ್ವೇ ಸಚಿವರಲ್ಲಿ ಮನವಿ ಮಾಡಿದರು.

ಮೇಯಲ್ಲಿ ಸಬ್‌ ಅರ್ಬನ್‌ ರೈಲಿಗೆ ಚಾಲನೆ
ಬೆಂಗಳೂರಿನಲ್ಲಿ ಆರಂಭಿಸಲು ಉದ್ದೇಶಿಸಿರುವ ಸಬ್‌ ಅರ್ಬನ್‌ ರೈಲು ಯೋಜನೆ (ಉಪನಗರ ರೈಲು ಯೋಜನೆ) ಕಾಮಗಾರಿಗೆ ಮೇ ತಿಂಗಳಲ್ಲಿ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದು ರೈಲೇ ಸಚಿವ  ಪ್ರಭು ಹೇಳಿದರು. ಮುಂದಿನ 3 ವರ್ಷಗಳೊಳಗೆ ಬೆಂಗಳೂರು – ಮುಂಬಯಿ ಜೋಡಿ ರೈಲುಮಾರ್ಗದ ಕಾಮಗಾರಿ ಪೂರ್ಣಗೊಳಿಸಲಾಗುವುದು. ಹೂಡಿ, ಯಲಹಂಕದ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಕರ್ನಾಟಕದಲ್ಲಿ ನನೆಗುದಿಗೆ ಬಿದ್ದಿರುವ ರೈಲು ಯೋಜನೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಗೊಂಡು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಾಗುವುದು. ರಾಜ್ಯದಲ್ಲಿ ಸುಮಾರು 220 ಕಿ.ಮೀ. ರೈಲು ಮಾರ್ಗವನ್ನೂ ಜೋಡಿ ಮಾರ್ಗವಾಗಿ ಪರಿವರ್ತಿಸಲಾಗುತ್ತಿದೆ ಎಂದರು.

ಮೊದಲೇ ಹೆಸರು ಘೋಷಣೆ ! 
ರೈಲ್ವೇ ಮಂಡಳಿಯು ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಮಂಗಳೂರಿಗೆ ಇನ್ನೂ ಹೊಸ ರೈಲು ಸಂಚಾರ ಪ್ರಾರಂಭಿಸಿಲ್ಲ. ಆದರೆ ಹೊಸ ರೈಲು ಪ್ರಾರಂಭಿಸುವುದಕ್ಕೂ ಮೊದಲೇ ಬೆಂಗಳೂರು – ಹಾಸನ-ಮಂಗಳೂರು ಇಂಟರ್‌ ಸಿಟಿ ರೈಲಿಗೆ ರೈಲ್ವೇ ಸಚಿವರು ‘ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌’ ಎಂದು ಹೆಸರು ಘೋಷಣೆ ಮಾಡಿ ಗೊಂದಲಕ್ಕೆ ಎಡೆ ಮಾಡಿದ್ದಾರೆ. ಸಚಿವರ ಈ ಘೋಷಣೆಯು ರೈಲ್ವೇ ಅಧಿಕಾರಿಗಳಲ್ಲಿ ಗೊಂದಲ ಮೂಡಿಸಿದೆ. ಅದಕ್ಕೆ ಸಮಜಾಯಿಷಿ ನೀಡಿರುವ ರೈಲ್ವೇ ಅಧಿಕಾರಿಗಳು, ಆದಷ್ಟು ಬೇಗ ಬೆಂಗಳೂರು-ಹಾಸನ-ಮಂಗಳೂರು ರೈಲು ಸಂಚಾರ ಪ್ರಾರಂಭಿಸುವುದಾಗಿ ಹೇಳಿದ್ದಾರೆ.

ವಾಸ್ತವದಲ್ಲಿ ಬೆಂಗಳೂರು – ಹಾಸನ ರೈಲಿನ ಜತೆಗೆ, ಬೆಂಗಳೂರು – ಹಾಸನ – ಮಂಗಳೂರು ಹೊಸ ರೈಲು ಸಂಚಾರಕ್ಕೂ ಚಾಲನೆ ದೊರೆಯಬೇಕಿತ್ತು. ಆದರೆ, ಕೇರಳದ ವ್ಯಾಪ್ತಿಯಲ್ಲಿರುವ ದಕ್ಷಿಣ ರೈಲ್ವೇ ವಲಯದ ಮಲತಾಯಿ ಧೋರಣೆಯಿಂದಾಗಿ ಹಾಸನ ಮಾರ್ಗವಾಗಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸಬೇಕಾಗಿದ್ದ ಈ ಹೊಸ ರೈಲು ಅಂತಿಮ ಕ್ಷಣದಲ್ಲಿ ರದ್ದುಗೊಂಡಿದೆ. ದಕ್ಷಿಣ ರೈಲ್ವೇ ವಲಯವು ಮಂಗಳೂರಿನಲ್ಲಿ ಈ ರೈಲು ನಿಲುಗಡೆಗೆ ಜಾಗದ ಕೊರತೆ ಕಾರಣ ನೀಡಿರುವುದರಿಂದ ಸದ್ಯಕ್ಕೆ ಅದು ರದ್ದುಗೊಂಡಿದೆ. ಅದಕ್ಕೆ ಕರಾವಳಿ ಭಾಗದ ರೈಲು ಪ್ರಯಾಣಿಕರು ಈಗಾಗಲೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಸನ ಮಾರ್ಗದ ಮುಖ್ಯ ಉದ್ದೇಶವೇ ಬೆಂಗಳೂರಿನಿಂದ ಮಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸುವುದು ಆಗಿದೆ. ಆದರೆ ಈಗ ರೈಲ್ವೇ ಮಂಡಳಿಯು ಕೇವಲ ಹಾಸನದವರೆಗೆ ಮಾತ್ರ ರೈಲು ಓಡಿಸುತ್ತಿರುವುದಕ್ಕೆ ಅನುಮತಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ಹೀಗಿರುವಾಗ ರೈಲ್ವೇ ಸಚಿವರು, ಮಂಗಳೂರಿಗೆ ಹೊಸ ರೈಲು ಮಂಜೂರು ಮಾಡದೆ ಅದಕ್ಕೆ ಏಕಾಏಕಿ ‘ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌’ ಎಂದು ಹೆಸರು ಘೋಷಿಸಿರುವುದು ಗಮನಾರ್ಹ. 

ಕಾಮಗಾರಿಗೆ 21 ವರ್ಷ
ಹಾಸನ – ಬೆಂಗಳೂರು ರೈಲು ಮಾರ್ಗ ಮಂಜೂರಾಗಿದ್ದು ಎಚ್‌.ಡಿ. ದೇವೇಗೌಡ ಅವರು ಪ್ರಧಾನಿಯಾಗಿದ್ದ 1996-97ನೇ ಸಾಲಿನಲ್ಲಿ. ಭೂಸ್ವಾಧೀನ ವಿವಾದದಿಂದಾಗಿ ಕಾಮಗಾರಿ  ಕಷ್ಟು ವಿಳಂಬವಾಗಿ 21 ವರ್ಷದ ಬಳಿಕ ಪೂರ್ಣಗೊಂಡಿದೆ. ಇದರಿಂದಾಗಿ ಸುಮಾರು 300ರಿಂದ 400 ಕೋಟಿ ರೂ. ವೆಚ್ಚದ ಈ ಯೋಜನೆಗೆ ಕಾಮಗಾರಿ ಪೂರ್ಣಗೊಳ್ಳುವ ವೇಳೆ ಸುಮಾರು 1,290 ಕೋಟಿ ರೂ. ವೆಚ್ಚವಾಗಿದೆ. ಈ ಪೈಕಿ ರೈಲ್ವೇ ಇಲಾಖೆ 823 ಕೋಟಿ ರೂ. ನೀಡಿದರೆ, ರಾಜ್ಯ ಸರಕಾರ 467 ಕೋಟಿ ರೂ. ವೆಚ್ಚ ಮಾಡಿದೆ. ರೈಲು ಸಂಚಾರ ಆರಂಭವಾಗಿರುವುದರಿಂದ ಇನ್ನು ಮುಂದೆ ಮಂಗಳೂರಿನಿಂದ ಬೆಂಗಳೂರಿಗೆ ಬರುವ ರೈಲುಗಳು ಮೈಸೂರು ಸುತ್ತಿ ಬರಬೇಕಾದ ಅನಿವಾರ್ಯತೆ ಇಲ್ಲದಂತಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.