ಕ್ಷುಲ್ಲಕ ವಿಚಾರಕ್ಕೆ ಕಾರ್ಮಿಕನ ಕೊಲೆ
Team Udayavani, Nov 16, 2021, 1:18 PM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ದುಷ್ಕರ್ಮಿಗಳು ಕಟ್ಟಡ ಕಾರ್ಮಿಕನೊಬ್ಬನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮಧ್ಯಪ್ರದೇಶ ಮೂಲದ ಭೂಪತ್‌ಸಿಂಗ್ (25) ಕೊಲೆ ಯಾದ ಕಾರ್ಮಿಕ. ಕೊಲೆಗೈದ ಇಬ್ಬರು ದುಷ್ಕರ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀ ಸರು ಹೇಳಿದರು. ಮೂರು ತಿಂಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದ ಭೂಪತ್ ಸಿಂಗ್ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ. ಬೈಯಪ್ಪನಹಳ್ಳಿಯ ಅಯ್ಯಪ್ಪ ಸ್ವಾಮಿ ದೇವಾಲ ಯ ಸಮೀಪದ ಕಟ್ಟಡವೊಂದರಲ್ಲಿ ಡ್ರಿಲ್ಲಿಂಗ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ನಿರ್ಮಾಣ ಹಂತದ ಕಟ್ಟಡ ಸಮೀಪದಲ್ಲಿ ಶೆಡ್‌ವೊಂದರಲ್ಲಿ ಸ್ನೇಹಿತರ ಜತೆ ವಾಸವಾಗಿದ್ದ.
ಎಂದಿನಂತೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಶೆಡ್ ಸಮೀಪದಲ್ಲಿರುವ ಬೇಕರಿಗೆ ಸ್ನೇಹಿತರ ಜತೆ ಹೋಗುತ್ತಿದ್ದ. ಈ ವೇಳೆ ಮಾರ್ಗ ಮಧ್ಯೆ ಐವರು ಆರೋಪಿಗಳು, ಭೂಪತ್ ಸಿಂಗ್ ಮತ್ತು ಆತನ ಸ್ನೇಹಿತನಿಗೆ ಮಧ್ಯೆ ರಸ್ತೆಯಲ್ಲಿ ತಡೆದು ಮುಂದೆ ಹೋಗದ್ದಂತೆ ಎಚ್ಚರಿಕೆ ನೀಡಿದ್ದಾರೆ.
ಆದರೂ ಭೂಪತ್ ಸಿಂಗ್ ಮುಂದೆ ಹೋಗಿದ್ದಾನೆ. ಬೇಕರಿಯಿಂದ ವಾಪಸ್ ಬರುವಾಗ ಮತ್ತೆ ಅಡ್ಡಗಟ್ಟಿದ ಆರೋ ಪಿಗಳ ಪೈಕಿ ಇಬ್ಬರು ಭೂಪತ್ ಸಿಂಗ್ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದಾರೆ. ಬಳಿಕ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಸದ್ಯ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾ ಗಿದೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದಿರಾ ಕ್ಯಾಂಟೀನ್ಗೆ ಇಸ್ಕಾನ್ ಊಟ; ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ
ತಾಜಾ ಮಾವು, ಹಲಸು ಬೇಕಾ?ಮೇಳಕ್ಕೆ ಬನ್ನಿ;ಲಾಲ್ಬಾಗ್ನಲ್ಲಿ ಜೂ.13ರವರೆಗೆ ಪ್ರದರ್ಶನ, ಮಾರಾಟ
ಸ್ತ್ರೀಯರ ವೇಷದಲ್ಲಿ ಫೈನಾನ್ಸ್ನಲ್ಲಿ ಕಳವಿಗೆ ಯತ್ನ: ಸೈರನ್ ಶಬ್ದ ಕೇಳಿ ಆರೋಪಿಗಳು ಪರಾರಿ
ಮೆಡಿಕಲ್ ಸೀಟ್ ನೆಪದಲ್ಲಿ ವಂಚನೆ: ವಂಚಿಸಿದ ಹಣ ಕೇಳಿದ್ದಕ್ಕೆ ಹನಿಟ್ರ್ಯಾಪ್
ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ