ಹೆಡ್‌ಫೋನ್‌ ವಿಚಾರಕ್ಕೆ ನಶೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಸ್ನೇಹಿತನ ಹತ್ಯೆ  

Team Udayavani, Jan 3, 2023, 9:46 AM IST

ಹೆಡ್‌ಫೋನ್‌ ವಿಚಾರಕ್ಕೆ ನಶೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಸ್ನೇಹಿತನ ಹತ್ಯೆ  

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಹೆಡ್‌ಫೋನ್‌ ವಿಚಾರಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಕಾರ್ತಿಕ್‌(27) ಕೊಲೆಯಾದವ.

ಈ ಸಂಬಂಧ ರಜನೀಶ್‌ ಮತ್ತು ರವಿ ಎಂಬುವರನ್ನು ಬಂಧಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವರಾದ ಕಾರ್ತಿಕ್‌, ರಜನೀಶ್‌ ಮತ್ತು ರವಿ ದೊಡ್ಡನಾಗಮಂಗಲದ ಬಾಲಾಜಿ ಲೇಔಟ್‌ನಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಪೇಟಿಂಗ್‌ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ವಾಸವಾಗಿದ್ದರು. ಡಿ.31ರಂದು ಆರೋಪಿ ರಜನೀಶ್‌ ಹುಟ್ಟುಹಬ್ಬ ಹಾಗೂ ಹೊಸವರ್ಷದ ಸಂಭ್ರಮಾಚರಣೆಗಾಗಿ ನಿರ್ಮಾಣ ಹಂತದ ಕಟ್ಟಡದಲ್ಲೇ ಕಾರ್ತಿಕ್‌, ರವಿ ಹಾಗೂ ಇತರರು ಪಾರ್ಟಿ ಮಾಡಿದ್ದಾರೆ. ಈ ವೇಳೆ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಆಗ ರಜನೀಶ್‌ನ ಹೆಡ್‌ಫೋನ್‌ ಅನ್ನು ಕಾರ್ತಿಕ್‌ ತೆಗೆದುಕೊಂಡಿದ್ದಾನೆ. ಅದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ.

ಈ ವೇಳೆ ರಜನೀಶ್‌ ಸಹಾಯಕ್ಕೆ ಬಂದ ರವಿ ಹಾಗೂ ಇತರರು ಕಾರ್ತಿಕ್‌ ಮೇಲೆ ಹಲ್ಲೆ ನಡೆಸಿದ್ದಾನೆ. ಕೈ ಮತ್ತು ಕಾಲುಗಳಲ್ಲೇ ಕಾರ್ತಿಕ್‌ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ್ದರು. ಜತೆಗೆ ಗಾಜಿನಿಂದಲೂ ಹಲ್ಲೆ ನಡೆಸಿದ್ದಾರೆ. ಅನಂತರ ಎಲ್ಲರೂ ಮಲಗಲು ಹೋಗಿದ್ದಾರೆ. ಮರು ದಿನ ಬೆಳಗ್ಗೆ ಕಾರ್ತಿಕ್‌ ಎಚ್ಚರಗೊಂಡಿಲ್ಲ. ಬಳಿಕ ಇತರೆ ಕಾರ್ಮಿಕರು ಕಾರ್ತಿಕ್‌ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.