ನಗರದ ಸ್ತ್ರೀಯರಲ್ಲಿ ಹೆಚ್ಚಾದ ಎಂಡೊಮೆಟ್ರಿಯಲ್‌ ಕ್ಯಾನ್ಸರ್‌

Team Udayavani, Apr 21, 2019, 3:00 AM IST

ಬೆಂಗಳೂರು: ನಗರ ಭಾಗದಲ್ಲಿ ಒಂದು ಲಕ್ಷ ಮಹಿಳೆಯರಲ್ಲಿ ಶೇ.11ರಿಂದ 12ರಷ್ಟು ಮಂದಿಯಲ್ಲಿ ಗರ್ಭಕೋಶದ ಒಳ ಭಾಗಕ್ಕೆ ಸಂಬಂಧಿಸಿದ ಕ್ಯಾನ್ಸರ್‌ (ಎಂಡೊ ಮೆಟ್ರಿಯಲ್‌) ಕಾಣಿಸಿಕೊಳ್ಳುತ್ತಿದ್ದು, ನಿರ್ಲಕ್ಷ ತೋರದೆ ಕಡ್ಡಾಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಸ್ಪತ್ರೆಯ ಗೈನಿಕಾಲಾಜಿಕಲ್‌ ಅಂಕಾಲಜಿ ವಿಭಾಗದ ಮುಖ್ಯಸ್ಥೆ ಡಾ.ಪಲ್ಲವಿ ತಿಳಿಸಿದ್ದಾರೆ.

ನಗರದ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಶನಿವಾರ ಕರಳು ಮತ್ತು ಗರ್ಭಕೋಶದ ಕ್ಯಾನ್ಸರ್‌ಗೆ ರೊಬೊಟಿಕ್ಸ್‌ ತಂತ್ರಜ್ಞಾನದ ಮೂಲಕ ಶಸ್ತ್ರಚಿಕಿತ್ಸೆ ನೀಡುವ ಕುರಿತು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಾತನಾಡಿದರು.

ಪಾಶ್ಚಿಮಾತ್ಯ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಎಂಡೊ ಮೆಟ್ರಿಯಲ್‌ ಸದ್ಯ ಭಾರತಕ್ಕೂ ಕಾಲಿಟ್ಟಿದ್ದು, ಮಕ್ಕಳಾಗದಿರುವ ಮಹಿಳೆಯರು, ಮಕ್ಕಳಾಗಲು ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿದೆ.

ಅಧ್ಯಯನದ ಪ್ರಕಾರ ನಗರ ಭಾಗದಲ್ಲಿರುವ 1ಲಕ್ಷ ಮಹಿಳೆಯರಲ್ಲಿ ಶೇ.11ರಿಂದ 12 ರಷ್ಟು ಮಂದಿಗೆ ಹಾಗೂ ಗ್ರಾಮಿಣ ಪ್ರದೇಶದಲ್ಲಿ ಶೇ.3 ರಿಂದ 4 ರಷ್ಟು ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿರುವುದು ಆಘಾತಕಾರಿ ಅಂಶವಾಗಿದೆ ಎಂದು ಹೇಳಿದರು.

ಹೀಗಾಗಿ, 40 ರಿಂದ 50 ವರ್ಷ ವಯೋಮಿತಿಯ ಮಹಿಳೆಯರಲ್ಲಿ ಮುಟ್ಟು ನಿಂತು ಸುಮಾರು ವರ್ಷಗಳ ನಂತರ ಮುಟ್ಟು ಕಾಣಿಸಿಕೊಳ್ಳುವುದು, ಅಧಿಕ ರಕ್ತಸ್ರಾವ ಕಂಡ ಕೂಡಲೇ ನಿರ್ಲಕ್ಷ್ಯತೊರದೆ ತಪಾಸಣೆ ಮಾಡಿಸಿಕೊಳ್ಳಬೇಕು.

ಈ ಕಾಯಿಲೆ ಪ್ರಮುಖ ಕಾರಣ ಬದಲಾಗುತ್ತಿರುವ ಆಹಾರ ಪದ್ಧತಿ, ಪಾಶ್ಚಿಮಾತ್ಯ ಜೀವನ ಶೈಲಿ, ಸ್ಥೂಲಕಾಯ ಹೊಂದಿರುವವರು, ಮೊದಲ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಶೇ.90 ಮಂದಿಗೆ ಸಂಪೂರ್ಣ ಗುಣಮುಖರಾಗಬಹುದು ಎಂದು ಸಲಹೆ ನೀಡಿದರು.


ಈ ವಿಭಾಗದಿಂದ ಇನ್ನಷ್ಟು

 • ಬೆಂಗಳೂರು: ಸಮಸ್ಯೆಗೆ ಸೂಚಿಸಿದ ಪರಿಹಾರವೇ ಸಮಸ್ಯೆಯಾಗಿ ಪರಿಣಮಿಸಿದರೆ ಏನಾಗಬಹುದು? ಇದನ್ನು ತಿಳಿಯಲು ನೀವು ಒಮ್ಮೆ ಕೆ.ಆರ್‌.ಪುರದ ಟಿನ್‌ ಫ್ಯಾಕ್ಟರಿ ರಸ್ತೆಯಲ್ಲಿ...

 • ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ಒಂದು ತಿಂಗಳಲ್ಲಿ 203 ಮಂದಿಯಲ್ಲಿ ರೋಗ ದೃಢಪಟ್ಟಿದೆ. ಇದಕ್ಕೆ ಸಾಂಕ್ರಾಮಿಕ...

 • ಬೆಂಗಳೂರು: ರೈತರ ಸಮಸ್ಯೆ, ನೆಲ, ಜಲಕ್ಕೆ ಸಂಬಂಧಿಸಿದ ಕನ್ನಡ ಪರ ಹೋರಾಟಗಳ ಸಂದರ್ಭದಲ್ಲಿ ಚಿತ್ರರಂಗ ಒಂದಾಗುತ್ತದೆ ಎಂದು ಚಿತ್ರನಟ ಶಿವರಾಜ್‌ಕುಮಾರ್‌ ಹೇಳಿದರು. ಕನ್ನಡ...

 • ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ರಾಜ್ಯದಲ್ಲೂ ಪಕ್ಷ ಇಟ್ಟುಕೊಂಡಿದ್ದ ಗುರಿ ತಲುಪಲು ಶ್ರಮಿಸಿದ...

 • ಬೆಂಗಳೂರು: ಪ್ರಧಾನಿ ಮೋದಿಯವರ ಪ್ರಚಂಡ ಬಹುಮತಕ್ಕಾಗಿ ಬಿಜೆಪಿ ನಾಯಕರು, ಕಾಯಕರ್ತರಂತೆ ಮೋದಿ ಅಭಿಮಾನಿಗಳು, ಅಭಿಮಾನಿ ಸಂಘಟನೆಗಳು ತೆರೆ ಮರೆಯಲ್ಲಿ ಮಾಡಿದ್ದ...

ಹೊಸ ಸೇರ್ಪಡೆ

 • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

 • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

 • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

 • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

 • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

 • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...