ರಾಜಧಾನಿಯಲ್ಲಿ ಹೆಚ್ಚಿದ ತ್ಯಾಜ್ಯ ರಾಶಿ

Team Udayavani, Oct 9, 2019, 10:45 AM IST

ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಸೃಷ್ಟಿಯಾಗಿದ್ದು, ಎರಡು ದಿನ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಆಗದ ಕಾರಣ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಸೃಷ್ಟಿಯಾಗಿದೆ.

ಹಬ್ಬದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ನಗರದ ಪ್ರಮುಖ ಮಾರುಕಟ್ಟೆಗಳು ಹಾಗೂ ಪ್ರಮುಖ ರಸ್ತೆಗಳ ಬದಿಯಲ್ಲಿ ಅಪಾರ ಪ್ರಮಾಣದ ತ್ಯಾಜ್ಯ ರಾಶಿ ಸಂಗ್ರಹವಾಗಿದ್ದು ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಸಾಮಾನ್ಯ ದಿನಗಳಿಗಿಂತಲೂ ಶೇ. 35ರಿಂದ 40ರಷ್ಟು ಹೆಚ್ಚುವರಿ ತ್ಯಾಜ್ಯ ಸೃಷ್ಟಿಯಾಗಿದ್ದು, ಕೆ.ಆರ್‌. ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರ, ಮಡಿವಾಳ ಹಾಗೂ ಗಾಂಧಿಬಜಾರ್‌, ವಿಲ್ಸನ್‌ ಗಾರ್ಡನ್‌ ಹಾಗೂ ಕೆ.ಆರ್‌.ಪುರ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಟನ್‌ಗಟ್ಟಲೆ ತ್ಯಾಜ್ಯ ಸೃಷ್ಟಿಯಾಗಿದೆ. ನಗರದಲ್ಲಿ ಹೆಚ್ಚು ತ್ಯಾಜ್ಯ ಉತ್ಪತ್ತಿಯಾಗಿರುವ ಹಿನ್ನೆಲೆಯಲ್ಲಿ ತ್ಯಾಜ್ಯ ವಿಲೇವಾರಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಅನಿವಾರ್ಯತೆ ಎದುರಾಗಿದೆ. ಹಸಿ ತ್ಯಾಜ್ಯ ಕೊಳೆಯುವ ಆತಂಕ: ಹಬ್ಬದ ಹಿನ್ನೆಲೆಯಲ್ಲಿ ರೈತರು ಹಾಗೂ ವ್ಯಾಪಾರಿಗಳು ತಂದಿರುವ ಬಾಳೆ ಕಂದು, ಮಾವಿನ ಎಲೆ, ಬೂದು ಕುಂಬಳ ಕಾಯಿಗಳನ್ನು ಅಲ್ಲದೇ ಬಿಟ್ಟು ಹೋಗುತ್ತಿದ್ದು, ಬುಧವಾರದ ವೇಳೆಗೆ ತ್ಯಾಜ್ಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಇದರೊಂದಿಗೆ ವಾಹನಗಳಿಗೆ ಪೂಜೆ ಮಾಡಿದವರು ಬೂದು ಕುಂಬಳಕಾಯಿ, ಬಾಳೆ ಕಂದು ರಸ್ತೆಗಳಲ್ಲೇ ಬಿಟ್ಟು ಹೋಗಿದ್ದಾರೆ.

ಎರಡು ದಿನ ವಿಲೇವಾರಿ ಸ್ಥಗಿತ: ಆಯುಧ ಪೂಜೆಯ ಹಿನ್ನೆಲೆಯಲ್ಲಿ ಗುತ್ತಿಗೆದಾರರು ತಮ್ಮ ಆಟೋ ಟಿಪ್ಪರ್‌ಗಳು ಹಾಗೂ ಕಾಂಪ್ಯಾಕ್ಟರ್‌ಗಳಿಗೆ ಪೂಜೆ ಸಲ್ಲಿಸಿದ್ದಾರೆ. ಪರಿಣಾಮ ನಗರದಲ್ಲಿ ಸೋಮವಾರ ಹಾಗೂ ಮಂಗಳವಾರ ವಾಹನಗಳು ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡಿಲ್ಲ. ಪೌರಕಾರ್ಮಿಕರು ರಜೆ ತೆಗೆದುಕೊಂಡಿರುವುದರಿಂದ ರಸ್ತೆಗಳ ಸ್ವಚ್ಛತಾ ಕಾರ್ಯ, ತ್ಯಾಜ್ಯ ವಿಲೇವಾರಿ ಕಾರ್ಯ ಬಹುತೇಕ ಸ್ಥಗಿತಗೊಂಡಿತ್ತು.

ಪಾಲನೆಯಾಗದ ಆಯುಕ್ತರ ಆದೇಶ: ಆಯುಧ ಪೂಜೆ ಹಾಗೂ ವಿಜಯ ದಶಮಿಯ ಸಂದರ್ಭದಲ್ಲಿ ಸಂಗ್ರಹವಾಗುವ ಬಳಸುವ ಕುಂಬಳಕಾಯಿ, ನಿಂಬೆಹಣ್ಣು, ಬಾಳೆಕಂದು ಸೇರಿದಂತೆ ಹಸಿ ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡಿಸಿಯೇ ನೀಡಬೇಕು. ಎಲ್ಲೆಂದರಲ್ಲಿ ರಸ್ತೆಗಳಲ್ಲಿ ಎಸೆಯುವುದರಿಂದ ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ಕೊಂಡು ಮಳೆ ನೀರು ಸರಾಗವಾಗಿ ಹರಿಯುವುದಕ್ಕೆ ತೊಡಕು ಉಂಟಾಗುತ್ತಿದೆ. ಸಾರ್ವಜನಿಕರು ಸ್ವಚ್ಛತೆ ಕಾಪಾಡುವುದಕ್ಕೆ ಸಹಕಾರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಮನವಿ ಮಾಡಿದ್ದರು. ಕಚೇರಿಗಳ ಮುಂದೆ ಹಾಗೂ ಮನೆ ಮುಂಭಾಗಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಶೇಖರಿಸಿ ವಿಂಗಡಿಸಿಯೇ ನೀಡಬೇಕು. ಈ ರೀತಿ ನೀಡದೆ ನಿರ್ಲಕ್ಷ್ಯ ವಹಿಸುವವರ ಮೇಲೆ ದಂಡ ವಿಧಿಸಲಾಗುವುದು ಎಂದು ಆಯುಕ್ತರು ಹೇಳಿದ್ದರು. ಆದರೆ, ನಗರದಲ್ಲಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದು ಮುಂದುವರೆದಿದ್ದು, ಬಿಬಿಎಂಪಿ ದಂಡ ವಿಧಿಸಿರುವ ಬಗ್ಗೆ ವರದಿಯಾಗಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ