ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಭಾರತೀಯತೆ ನಾಶ


Team Udayavani, Feb 10, 2019, 6:34 AM IST

pashmima.jpg

ಬೆಂಗಳೂರು: ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವಜನತೆ ಭಾರತೀಯತೆಯನ್ನು ಮರೆಯುತ್ತಿದ್ದಾರೆ ಎಂದು ಯಕ್ಷಗುರು, ಹಿರಿಯ ಕಲಾವಿದ ಬನ್ನಂಜೆ ಸಂಜೀವ ಸುವರ್ಣ ಕಳವಳ ವ್ಯಕ್ತಪಡಿಸಿದರು.

ಅಭಿನಂದನಾ ಸಾಂಸ್ಕೃತಿಕ ಟ್ರಸ್ಟ್‌ವತಿಯಿಂದ ಶನಿವಾರ ಹೊಸಕೆರೆಹಳ್ಳಿಯ ನಂದಿ ಲಿಂಕ್ಸ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕರಾವಳಿಯ ಖಾದ್ಯ ಮತ್ತು ಕ್ರೀಡಾ ಉತ್ಸವ “ನಮ್ಮೂರ ಹಬ್ಬ’ಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ಹಿಂದಿನ ತಲೆಮಾರಿನವರಿಂದ ಬಳುವಳಿಯಾಗಿ ಬಂದ ಕಲೆ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಮುಂದಿನ ಜನಾಂಗಕ್ಕೆ ದಾಟಿಸುವ ಬಹುದೊಡ್ಡ ಕೆಲಸ ಆಗಬೇಕಿದೆ ಎಂದು ಹೇಳಿದರು.

ಪಾಲಿಕೆ ಸದಸ್ಯೆ ನಳಿನಿ ಮಂಜುನಾಥ್‌ ಮಾತನಾಡಿ, ನಮ್ಮೂರ ಹಬ್ಬದ ಮೂಲಕ ಹಳ್ಳಿಯ ಸೊಗಡನ್ನು ಬೆಂಗಳೂರಿನಲ್ಲಿ ಪುನರ್‌ಸೃಷ್ಟಿಸಿರುವುದು ನಿಜಕ್ಕೂ ಆನಂದ ತಂದಿದೆ ಎಂದು ತಿಳಿಸಿದರು. ಮಾಜಿ ಉಪಮೇಯರ್‌ ಎಂ.ಲಕ್ಷ್ಮೀ ನಾರಾಯಣ, ನಿರ್ದೇಶಕ ಸಿ.ಕೆ.ಚಂದ್ರಶೇಖರ್‌, ಅಭಿನಂದನಾ ಸಾಂಸ್ಕೃತಿಕ ಟ್ರಸ್ಟಿನ ಶಂಕರ್‌ಕುಂದರ್‌, ರಾಘವೇಂದ್ರ ಕಾಂಚನ್‌ ಮೊದಲಾದವರು ಇದ್ದರು.

ಸಾಂಸ್ಕೃತಿಕ ವೈಭವ: ಕರಾವಳಿಯಿಂದ ತಂದ ತಾಜಾ ತರಕಾರಿಗಳು, ಅಪರೂಪದ ಗೃಹೋಪಯೋಗಿ ವಸ್ತುಗಳಿಗೆ ಉತ್ತಮ ಜನಸ್ಪಂದನೆ ವ್ಯಕ್ತವಾಯಿತು. ಕರಾವಳಿಯಿಂದ ಬಂದ ನುರಿತ ಬಾಣಸಿಗರು ಸ್ಥಳದಲ್ಲೇ ತಯಾರಿಸಿದ ನೀರು ದೋಸೆ, ಹಾಲುಬಾಯಿ, ಕಡುಬು, ಗೋಲಿಬಜೆ, ಪತ್ರೊಡೆ, ಕೋರಿ ರೊಟ್ಟಿ, ಮೀನು ಹಾಗೂ ಸಿಗಡಿ ಬಳಸಿ ತಯಾರಿಸಿದ ಅಪರೂಪದ ಖಾದ್ಯಗಳನ್ನು ಆಹ್ವಾದಿಸಿದ ಜನ ಖುಷಿಪಟ್ಟರು.

ಉಡುಪಿ ಯಕ್ಷಕೇಂದ್ರದಿಂದ ಯಕ್ಷ ಪದ ಧ್ವನಿ, ಪ್ರಶಾಂತ್‌ ಗ್ರೂಪ್‌ ಕಡಿಯಾಳಿ ಇವರಿಂದ ನೃತ್ಯೋತ್ಸವ, ಸಂಗೀತ ನಿರ್ದೇಶಕ ಪ್ರವೀಣ್‌ ಡಿ.ರಾವ್‌ ನೇತೃತ್ವದಲ್ಲಿ ಜನಪ್ರಿಯ ಭಾವಗೀತೆ ಹಾಗೂ ಸಿನಿಮಾ ಹಾಡುಗಳನ್ನು ಹಾಡುವುದರ ಮೂಲಕ ರಂಜಿಸಿದರು.

ಜಯಂತ್‌ ಕಾಯ್ಕಿಣಿಗೆ ಕಿರೀಟ ಪ್ರಶಸ್ತಿ: ಇಂದು(ಭಾನುವಾರ) ನಮ್ಮೂರು ಹಬ್ಬದಲ್ಲಿ ಖ್ಯಾತ ಸಾಹಿತಿ ಜಯಂತ್‌ ಕಾಯ್ಕಿಣಿಯವರಿಗೆ ಕಿರೀಟ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಬಯಲಾಟದಲ್ಲಿ ಕಂಬಳದ ಓಟ, ದೋಣಿ ಓಟ ಇನ್ನಿತರ ಕರಾವಳಿಯ ಅಪರೂಪದ ಗ್ರಾಮೀಣ ಕ್ರೀಡೆಗಳು, ವಯಸ್ಕರರಿಗಾಗಿ ಹಗ್ಗ ಜಗ್ಗಾಟ, ದಂಪತಿಗಳಿಗಾಗಿ ಪ್ರತ್ಯೇಕ ಕ್ರೀಡೆಗಳು ನಡೆಯಲಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.