ಇನ್ಫೋಸಿಸ್‌ಗೆ ಮೂರನೇ ತ್ತೈಮಾಸಿಕದಲ್ಲಿ 5,129 ಕೋಟಿ ರೂ. ನಿವ್ವಳ ಲಾಭ

Team Udayavani, Jan 14, 2018, 6:15 AM IST

INFOSIS-2018-14.jpg

ಬೆಂಗಳೂರು: ಪ್ರತಿಷ್ಠಿತ ಇನ್ಫೋಸಿಸ್‌ ಸಂಸ್ಥೆಯು ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ತೈಮಾಸಿಕದಲ್ಲಿ 5,129 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಕಳೆದ ವರ್ಷ ಇದೇ ಅವಧಿಯ ನಿವ್ವಳ ಲಾಭಕ್ಕೆ ಹೋಲಿಸಿದರೆ ಶೇ.38.3ರಷ್ಟು (3,708 ಕೋಟಿ ರೂ.) ಏರಿಕೆ ಕಂಡುಬಂದಿದೆ.

ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್‌ ರಫ್ತು ಸೇವಾ ಸಂಸ್ಥೆ ಎಂಬ ಹೆಗ್ಗಳಿಕೆಯ ಇನ್ಫೋಸಿಸ್‌ ಸಂಸ್ಥೆ ಕಳೆದ ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ಅವಧಿಯಲ್ಲಿ 17,794 ಕೋಟಿ ರೂ. ವರಮಾನ ಗಳಿಸಿದ್ದು, ಹಿಂದಿನ ವರ್ಷ ಇದೇ ಅವಧಿಯ ವರಮಾನಕ್ಕೆ ಹೋಲಿಸಿದರೆ ಶೇ.3ರಷ್ಟು ಹೆಚ್ಚಳವಾಗಿದೆ. ಒಟ್ಟಾರೆ 2017-18ನೇ ಸಾಲಿನ ವಹಿವಾಟು ಬೆಳವಣಿಗೆಯ ಮುನ್ನೋಟವು ಶೇ.5.5ರಿಂದ ಶೇ.6.5ರಷ್ಟಿರುವ ಸಾಧ್ಯತೆ ಇದೆ ಎಂದು ಸಂಸ್ಥೆ ನಿರೀಕ್ಷಿಸಿದೆ.

ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿರುವ ಸಿಇಒ ಸಲೀಲ್‌ ಪಾರೇಖ್‌ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮೂರನೇ ತ್ತೈಮಾಸಿಕ ಅವಧಿಯಲ್ಲಿ ಸಂಸ್ಥೆಯು ನಿರೀಕ್ಷೆಗಿಂತ ಹೆಚ್ಚು ನಿವ್ವಳ ಲಾಭ ಗಳಿಸಿದೆ. ಅಮೆರಿಕದ ಟ್ರಂಪ್‌ ಆಡಳಿತದೊಂದಿಗಿನ ಒಪ್ಪಂದದಿಂದಾಗಿ ಕಾಯ್ದಿರಿಸಲಾಗಿದ್ದ 1,434 ಕೋಟಿ ರೂ. ತೆರಿಗೆ ಹಣ ಸಂಸ್ಥೆಗೆ ವಾಪಸ್‌ ಬಂದಿದೆ. ಇದರಿಂದಾಗಿ ಪ್ರತಿ ಷೇರಿನ ಮೂಲ ಗಳಿಕೆ 6.29 ರೂ.ಗೆ ಏರಿಕೆಯಾಗಿದೆ ಎಂದು ಹೇಳಿದರು.

ಮೂರನೇ ತ್ತೈಮಾಸಿಕದಲ್ಲಿ ಸಂಸ್ಥೆಯ ಸಾಧನೆ ಉತ್ತಮವಾಗಿದ್ದು, ಸ್ಥಿರತೆಯನ್ನು ಕಾಯ್ದುಕೊಳ್ಳುವತ್ತ ಸಾಗಿದೆ. ಆ ಮೂಲಕ ಸಂಸ್ಥೆಯ ಗ್ರಾಹಕರ ಹೊಸ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ಸಮರ್ಥವಾದಂತಾಗಿದೆ. ಸಂಸ್ಥೆಯ ಗ್ರಾಹಕರು ಎಲ್ಲೆಡೆ ಡಿಜಿಟಲ್‌ ಅಡಚಣೆ ಎದುರಿಸುತ್ತಿದ್ದು, ಇದರಿಂದ ವಹಿವಾಟು ವಿಸ್ತರಣೆಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ಮುಂದಿನ ಮೂರು ತಿಂಗಳಲ್ಲಿ ಹಲವರೊಂದಿಗೆ ಚರ್ಚಿಸಿ ಸಂಸ್ಥೆ ಮುಂದಿರುವ ಸವಾಲುಗಳ ಕುರಿತು ಸ್ಪಷ್ಟ ನಿಲುವು ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಏಪ್ರಿಲ್‌ನಲ್ಲಿ ಮುನ್ನೋಟ ಪ್ರಕಟ
ಸಂಸ್ಥೆಯ ಗ್ರಾಹಕರು ಹಾಗೂ ಉದ್ಯೋಗಿಗಳೊಂದಿಗೆ ಸಂವಹನ ನಡೆಸಲು ಆದ್ಯತೆ ನೀಡಲಾಗುವುದು. ಹಾಗೆಯೇ ಸಂಸ್ಥೆಯ ವಹಿವಾಟಿನ ಆದ್ಯತೆ ಸೇರಿದಂತೆ ಭವಿಷ್ಯದ ಮುನ್ನೊಟವನ್ನು ಪ್ರಕಟಿಸಲಾಗುವುದು ಎಂದು ಸಲೀಲ್‌ ಪಾರೇಖ್‌ ತಿಳಿಸಿದರು. ಸಂಸ್ಥೆಯ ಕಾರ್ಯನಿರ್ವಾಹಕೇತರ ಅಧ್ಯಕ್ಷ ನಂದನ್‌ ನಿಲೇಕಣಿ ಉಪಸ್ಥಿತರಿದ್ದರು.

ಅಧ್ಯಕ್ಷ ಹುದ್ದೆಗೆ ರಾಜೀನಾಮೆ
ಸಂಸ್ಥೆಯ ಅಧ್ಯಕ್ಷರಾಗಿದ್ದ ರಾಜೇಶ್‌ ಕೆ. ಮೂರ್ತಿ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಅವರು ಜ.31ರವರೆಗೆ ಹುದ್ದೆಯಲ್ಲಿರುತ್ತಾರೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.