ಪ್ರಾಥಮಿಕ ಆರೋಗ್ಯ ಕೇಂದ್ರದ ಕೆಲಸದ ವೇಳೆ ಬದಲು?

Team Udayavani, Jul 8, 2017, 3:40 AM IST

doctor-time.jpg

ಶಿವಮೊಗ್ಗ: ವೈದ್ಯಕೀಯ ಸೇವೆ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಮಸೂದೆ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಅಂಕುಶ ಹಾಕಲು ಹೋಗಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ ಇದೀಗ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೆಲಸದ ವೇಳೆ ಬದಲಾವಣೆಗೆ ಮುಂದಾಗುವ ಮೂಲಕ ಹೊಸದೊಂದು ವಿವಾದಕ್ಕೆ ಕಾರಣವಾಗಿದೆ.

ರೈತರಿಗೆ ಅನುಕೂಲವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೆಲಸದ ಅವಧಿಯನ್ನು ಬೆಳಗ್ಗೆ 8 ರಿಂದ 11ರ ತನಕ ಹಾಗೂ ಸಂಜೆ 5 ರಿಂದ 8ರ ತನಕ ನಿಗದಿಪಡಿಸಲಾಗಿದೆ ಎಂದು ರಾಜ್ಯ ಸರಕಾರಿ ಕಾರ್ಯಕ್ರಮಗಳ ಬಲವರ್ಧನಾ, ಜಾಡೀಕರಣ ಹಾಗೂ ಸರಳೀಕರಣ ಸಮಿತಿಗೆ ಪತ್ರ ಬರೆಯಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಎಸ್‌.ವಿ. ಕಲಾವತಿ ಅವರು ಪ್ರಾ.ಆ.ಕೇಂದ್ರದ ಕೆಲಸದ ಅವಧಿ ಬದಲಾವಣೆ ಸಂಬಂಧ ಕಳೆದ ಜೂ.22 ರಂದು ಇಲಾಖೆಯ ಆಯುಕ್ತರಿಗೆ ಪತ್ರ ಬರೆದು ಸಮಯ ಬದಲಾವಣೆ ಕುರಿತಂತೆ ಸುತ್ತೋಲೆ ಹೊರಡಿಸುವಂತೆ ತಿಳಿಸಿದ್ದಾರೆ.

ಕಾಗೋಡು ತಿಮ್ಮಪ್ಪ ಅವರು ಆರೋಗ್ಯ ಸಚಿವರಾಗುವುದಕ್ಕೆ ಮೊದಲು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬೆಳಗ್ಗೆ 8 ರಿಂದ 12 ಹಾಗೂ ಮಧ್ಯಾಹ್ನ 3 ರಿಂದ 5ರ ತನಕ ಕೆಲಸ ನಿರ್ವಹಿಸುತ್ತಿದ್ದವು. ಇದರಿಂದ ಸಾರ್ವಜನಿಕರು ಹಾಗೂ ರೈತರಿಗೆ ಹೆಚ್ಚಿನ ಪ್ರಯೋಜನ ಆಗದು ಎಂಬ ಕಾರಣಕ್ಕೆ ಕಾಗೋಡು ತಿಮ್ಮಪ್ಪ ಅವರು ಕೆಲಸದ ಅವಧಿಯನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಹಾಗೂ 1.45 ರಿಂದ ಸಂಜೆ 4ರ ತನಕ ನಿಗದಿಪಡಿಸಿದರು. ಅದು ಇಂದಿಗೂ ಮುಂದುವರಿದಿದೆ.

ಅವೈಜಾನಿಕ ಎಂಬ ಅಭಿಪ್ರಾಯ:
ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೆಲಸದ ಅವಧಿಯನ್ನು ಬದಲಾಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಡೆಸಿರುವ ಚಿಂತನೆ ಸಂಪೂರ್ಣ ಅವೈಜ್ಞಾನಿಕ ಎಂಬುದು ಇಲಾಖೆ ಸಿಬ್ಬಂದಿ ಅಭಿಪ್ರಾಯ. ಈ ಹೊಸ ವೇಳಾಪಟ್ಟಿಯಿಂದ ಕೂಲಿ ಕೆಲಸಕ್ಕೆ ಹೋಗುವವರು ಹಾಗೂ ರೈತರು ಆರೋಗ್ಯ ಸೇವೆ ಪಡೆದುಕೊಳ್ಳಲು ಸಾಧ್ಯವಿಲ್ಲ. ಅಷ್ಟು ಬೇಗನೆ ರೈತರು ತಮ್ಮ ದೈನಂದಿನ ಕೆಲಸ ಮುಗಿಸಿ ಆರೋಗ್ಯ ಕೇಂದ್ರಕ್ಕೆ ಬರಲು ಸಾಧ್ಯವಿಲ್ಲ. ಈ ಹಿಂದಿನಂತೆಯೇ ವೇಳಾಪಟ್ಟಿ ಇರಬೇಕು ಎನ್ನುತ್ತಾರೆ ಸಿಬ್ಬಂದಿ.

ಈಗಲೇ ಬಾಗಿಲು ತೆರೆಯಲ್ಲ?
ಇದರೊಂದಿಗೆ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಯಲ್ಲಿ ಹೆಚ್ಚಿನವರು ಪಟ್ಟಣ ಹಾಗೂ ನಗರ ಪ್ರದೇಶದಿಂದ ದಿನವೂ ಹೋಗಿ ಬರುತ್ತಾರೆ. ಹಾಲಿ ಇರುವ ಸಮಯದಲ್ಲೇ ಬಹಳಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿಲ್ಲವೆಂಬ ದೂರುಗಳಿವೆ. ಈಗ ವೇಳೆ ಬದಲಾಯಿಸಿದರೆ ಪರಿಸ್ಥಿತಿ ಏನಾಗಬಹುದು ಎಂಬುದು ಊಹೆಗೂ ನಿಲುಕದಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ಚಿತ್ರಣ:
ರಾಜ್ಯದಲ್ಲಿ ಪ್ರಸ್ತುತ 2,355 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಬಹುತೇಕ ಅಂದರೆ ಶೇ.70 ರಷ್ಟು ಗ್ರಾಮೀಣ ಪ್ರದೇಶದಲ್ಲಿದ್ದರೆ, ಶೇ.30ರಷ್ಟು  ನಗರ ಹಾಗೂ ಪಟ್ಟಣ ಪ್ರದೇಶದಲ್ಲಿವೆ. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 2 ಸಾವಿರ ಸಿಬ್ಬಂದಿ ಎಂದು ಲೆಕ್ಕ ಹಿಡಿದರೂ ರಾಜ್ಯಾದ್ಯಂತ ಸುಮಾರು 60 ರಿಂದ 70 ಸಾವಿರ ಸಿಬ್ಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವೇಳೆ ಬದಲಾವಣೆ ಆದರೆ ಸಿಬ್ಬಂದಿ ಹಾಗೂ ಜನರಿಗೆ ತೊಂದರೆ ಉಂಟಾಗುವುದರಲ್ಲಿ ಸಂಶಯವಿಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯ.

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೆಲಸದ ವೇಳೆ ಬದಲಾವಣೆ ಸಂಬಂಧ ಸರ್ಕಾರ ನಡೆಸಿರುವ ಚಿಂತನೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆ ಬಗ್ಗೆ ಸರಕಾರದ ಉನ್ನತ ಮಟ್ಟದಲ್ಲಿ ಇನ್ನಷ್ಟೇ ಚರ್ಚೆ ನಡೆಯಬೇಕಿದೆ.
– ಎಸ್‌.ವಿ. ಕಲಾವತಿ, ಸರಕಾರದ ಅಧೀನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.

– ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.