ಅಂತಾರಾಜ್ಯ ಆನ್‌ಲೈನ್‌ ವಂಚಕ ಬಂಧನ

Team Udayavani, May 29, 2018, 2:32 PM IST

antarajya.jpg

ಬೆಂಗಳೂರು: ಆನ್‌ಲೈನ್‌ನಲ್ಲೇ ಬಾಡಿಗೆಗೆ ಪಡೆದ ಕ್ಯಾಮೆರಾ, ಲೆನ್ಸ್‌ಗಳನ್ನು ಓಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿ ಮೋಜಿನ ಜೀವನ ನಡೆಸುತ್ತಿದ್ದ ಹೈಟೆಕ್‌ ವಂಚಕ ಈಗ ಜೈಲು ಪಾಲಾಗಿದ್ದಾನೆ. ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ವಿವಿಧ ನಗರದಲ್ಲಿ ವಂಚಿಸಿ ತಲೆ ಮರೆಸಿಕೊಂಡಿದ್ದ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಿವಾಸಿ ಕಾರ್ತಿಕ್‌ ಅಡ್ಡಗರ್ಲ (27) ಸಂಪಿಗೆ ಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಎಂಜಿನಿಯರಿಂಗ್‌ ಪದವೀಧರನಾಗಿರುವ ಕಾರ್ತಿಕ್‌, ಮೂರು ವರ್ಷಗಳಿಂದ ಆನ್‌ಲೈನ್‌ ವಂಚನೆಯಲ್ಲೇ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ. ಮುಂಬೈ, ಬೆಂಗಳೂರು, ಹೈದರಾಬಾದ್‌ ಸೇರಿ ಪ್ರಮುಖ ನಗರಗಳಲ್ಲಿ ಹಲವರಿಗೆ ವಂಚಿಸಿ ಲಕ್ಷಾಂತರ ರೂ. ಲಪಟಾಯಿಸಿದ್ದ. ವಂಚನೆ ಪ್ರಕರಣವೊಂದರ ಬೆನ್ನತ್ತಿದ್ದ ಸಂಪಿಗೆಹಳ್ಳಿ ಪೊಲೀಸರು, ಕಾರ್ತಿಕ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಜತೆಗೆ ಆರೋಪಿಯಿಂದ 12 ಲಕ್ಷ ರೂ. ಮೌಲ್ಯದ ಕ್ಯಾಮೆರಾ, ಲೆನ್ಸ್‌ಗಳನ್ನು ಜಪ್ತಿ ಮಾಡಿದ್ದಾರೆ.

ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ಆನ್‌ಲೈನ್‌ ಬೆಟ್ಟಿಂಗ್‌ ದಂಧೆಗೆ ಮಾರುಹೋಗಿದ್ದ ಕಾರ್ತಿಕ್‌, ಸುಲಭವಾಗಿ ಹಣ ಗಳಿಸಲು ಹಾಗೂ ವಿಲಾಸಿ ಜೀವನ ನಡೆಸಲು ಆನ್‌ಲೈನ್‌ ವಂಚನೆಗಿಳಿದಿದ್ದ. ಆನ್‌ಲೈನ್‌ನಲ್ಲೇ ಸರಕುಗಳನ್ನು ಬಾಡಿಗೆಗೆ ನೀಡುವ ಜಾಲತಾಣಗಳಲ್ಲಿ ಬಾಡಿಗೆ ಪಡೆದುಕೊಳ್ಳುತ್ತಿದ್ದ ವಸ್ತುಗಳನ್ನು ಇತರರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ.

ಒಂದೇ ನಗರದಲ್ಲಿದ್ದರೆ ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಮುಂಬೈ, ಹೈದರಾಬಾದ್‌, ಬೆಂಗಳೂರು, ಚೆನ್ನೈ, ದೆಹಲಿ, ಕೊಲ್ಕತ್ತಾಗಳಲ್ಲಿ ವಾಸ್ತವ್ಯ ಹೂಡುತ್ತಿದ್ದ. ಪ್ರತಿಬಾರಿ ವಿಮಾನ ಪ್ರಯಾಣ, ಪ್ರತಿಷ್ಠಿತ ತಾರಾ ಹೋಟೆಲ್‌ಗ‌ಳಲ್ಲೇ ವಾಸ್ತವ್ಯ ಹೂಡುತ್ತಿದ್ದ. ವಂಚನೆಯ ಮೊತ್ತ ಎರಡು- ಮೂರು ಲಕ್ಷ ರೂ. ಮೀರುತ್ತಿದ್ದಂತೆ ಜಾಗ ಖಾಲಿ ಮಾಡುತ್ತಿದ್ದ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಇತ್ತೀಚೆಗೆ ನಗರದ ಲೋಹಿತ್‌ ಸೋಲಂಕಿ ಎಂಬುವವರು ‘rಛಿnಠಿsಜಚrಛಿ.cಟಞ’ ತಾಣದಲ್ಲಿ ತಮ್ಮ ಬಳಿಯಿದ್ದ 2.76 ಲಕ್ಷ ರೂ.ಮೌಲ್ಯದ ಕೆನಾನ್‌ ಎಸ್‌ಎಲ್‌ಆರ್‌ ಡಿಜಿಟಲ್‌ ಕ್ಯಾಮೆರಾ ಹಾಗೂ 1.38 ಲಕ್ಷ ರೂ. ಬೆಲೆಯ ಜೂಮ್‌ ಲೆನ್ಸ್‌ ಬಾಡಿಗೆಗೆ ನೀಡುವುದಾಗಿ ಪ್ರಕಟಿಸಿದ್ದರು. ಅದರಂತೆ ಕೆಲದಿನಗಳ ಮಟ್ಟಿಗೆ ಬಾಡಿಗೆಗೆ ಪಡೆದ ಕಾರ್ತಿಕ್‌ ಹಿಂತಿರುಗಿಸಿರಲಿಲ್ಲ. ಪೋನ್‌ ಕರೆ ಮಾಡಿದರೆ ಕಾರ್ತಿಕ್‌ ನೀಡಿದ್ದ ಮೊಬೈಲ್‌ ನಂಬರ್‌ ಸ್ವಿಚ್‌ ಆಫ್ ಆಗಿತ್ತು.

ಹೀಗಾಗಿ ಲೋಹಿತ್‌ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ, ಆರೋಪಿ ಗಾಂಧಿನಗರದ ಸ್ಟಾರ್‌ ಹೋಟೆಲ್‌ನಲ್ಲಿ ತಂಗಿದ್ದ ಬಗ್ಗೆ ಮಾಹಿತಿ ಗೊತ್ತಾಯಿತು. ಕೂಡಲೇ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈತ ಅಂತಾರಾಜ್ಯ ಆನ್‌ಲೈನ್‌ ವಂಚಕ ಎಂಬುದು ಬೆಳಕಿಗೆ ಬಂದಿತು ಎಂದು ಅಧಿಕಾರಿ  ವಿವರಿಸಿದರು. 

ಬಾಡಿ ವಾರೆಂಟ್‌ ಅರ್ಜಿ: ಆರೋಪಿ ಕಾರ್ತಿಕ್‌ ಈ ಹಿಂದೆಯೂ ನಗರದಲ್ಲಿ ಹಲವರಿಗೆ ವಂಚಿಸಿದ್ದು, ದೂರು ನೀಡುತ್ತಾರೆ ಎಂದು ಗೊತ್ತಾದ ಕೂಡಲೇ ಸೆಟಲ್‌ಮೆಂಟ್‌ ಮಾಡಿಕೊಂಡಿದ್ದಾನೆ. ನಗರ ಪೊಲೀಸರು ವಿಚಾರಣೆ ಮುಗಿದಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಹಲವು ದೇಶದ ಹಲವು ನಗರಗಳಲ್ಲಿ ವಂಚನೆ ಎಸಗಿದ್ದಾನೆ. ಹೀಗಾಗಿ ಮಾಹಿತಿ ತಿಳಿದ ಕೂಡಲೇ ಮುಂಬೈ ಹಾಗೂ ಆಂಧ್ರ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆಯಲು ನ್ಯಾಯಾಲಯದಲ್ಲಿ ಬಾಡಿವಾರೆಂಟ್‌ ಅರ್ಜಿ ಸಲ್ಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.