ಬಾದಾಮಿಯಿಂದ ಸ್ಪರ್ಧಿಸುವಂತೆ ಸಿಎಂಗೆ ಆಹ್ವಾನ
Team Udayavani, Apr 6, 2018, 6:55 AM IST
ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾದಾಮಿ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಗುರುವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು, ಬಾದಾಮಿ ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅಲ್ಲಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ. ಆದರೆ, ಎರಡು ಕಡೆ ಸ್ಪರ್ಧಿಸುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.