ಹೃದಯಾಘಾತದಿಂದ ಐಪಿಎಸ್ ಅಧಿಕಾರಿ ಡಿಐಜಿ ದಿಲೀಪ್ ಸಾವು
Team Udayavani, Dec 31, 2022, 9:32 AM IST
ಬೆಂಗಳೂರು: ಹೃದಯಾಘಾತಕ್ಕೊಳಗಾಗಿ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್ .ದಿಲೀಪ್(53) ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಇತ್ತೀಚೆಗೆ ಲಿವರ್ ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದಾದ ಕೆಲ ದಿನಗಳ ಬಳಿಕ ದಿಲೀಪ್ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಮತ್ತೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾದ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸಿಐಡಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!