ಉತ್ಪಾದನೆಯಲ್ಲಿ ವಿಶ್ವ ಮಟ್ಟದ ಚಿಂತನೆ ಅಗತ್ಯ

Team Udayavani, Feb 14, 2017, 12:09 PM IST

make-in-induia.jpg

ಬೆಂಗಳೂರು: ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆ ಯಶಸ್ವಿಯಾಗಬೇಕಾದರೆ ಭಾರತವು ಜಾಗತಿಕಮಟ್ಟದಲ್ಲಿ ಚಿಂತನೆ ನಡೆಸಬೇಕಿದೆ. ವೈಮಾನಿಕ ಮತ್ತು ರಕ್ಷಣಾ ವಲಯದ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದಲ್ಲಿ ಡಿಜಟಲ್‌ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.
 
ಸೋಮವಾರ ಪ್ರಾರಂಭಗೊಂಡ ಮೇಕ್‌ ಇನ್‌ ಇಂಡಿಯಾ-ಕರ್ನಾಟಕ ಸಮ್ಮೇಳನದಲ್ಲಿ “ವೈಮಾನಿಕ ಮತ್ತು ರಕ್ಷಣಾ ವಲಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಉದ್ಯಮಿಗಳು, “”ಯಾವುದೇ ಕ್ಷೇತ್ರದ ಉತ್ಪನ್ನಗಳು ನಮ್ಮಲ್ಲಿಗೆ ಮಾತ್ರ ಸೀಮಿತವಾಗದೇ ಜಾಗತಿಕ ಮಾರುಕಟ್ಟೆ ಪ್ರವೇಶಿಸಬೇಕು. ದೇಶೀಯ ಉತ್ಪನ್ನಗಳು ಯಶಸ್ವಿಯಾಗಬೇಕಾದರೆ ವಿಶ್ವಮಟ್ಟಕ್ಕೆ ತಲುಪಬೇಕು. ಆಗ ಮಾತ್ರ ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಗೆ ಮೌಲ್ಯ ಸಿಗಲಿದೆ,” ಎಂದು ಪ್ರತಿಪಾದಿಸಿದರು. 

ಭರತ್‌ ಫೋರ್ಜ್‌ ಲಿ.ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಬಾಬಾ ಕಲ್ಯಾಣಿ ಮಾತನಾಡಿ, “ತಂತ್ರಜ್ಞಾನಗಳ ಬಳಕೆಯಲ್ಲಿ ಬದಲಾವಣೆಗಳಾಗುತ್ತಿವೆ. ಹೊಸ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ವೈಮಾನಿಕ ಮತ್ತು ರಕ್ಷಣಾ ವಲಯ ಸದೃಢಗೊಳಲು ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ ಅಗತ್ಯವಿದೆ. ತಂತ್ರಜ್ಞಾನಗಳ ಅಳವಡಿಕೆಯಲ್ಲಿ ತಡವಾಗಬಾರದು. ಇದಕ್ಕೆ ಯಾವುದೇ ರೀತಿಯಲ್ಲಿಯೂ ವಿನಾಯಿತಿ ನೀಡಲು ಸಾಧ್ಯವಿಲ್ಲ. ನಾವು ತಡ ಮಾಡಿದರೆ ಮತ್ತೂಂದು ರಾಷ್ಟ್ರ ಅದನ್ನು ಅಳವಡಿಸಿಕೊಂಡು ಮುನ್ನಡೆಯುತ್ತದೆ,” ಎಂದು ಹೇಳಿದರು. 

ಕರ್ನಾಟಕ ಪ್ರಶಸ್ತ ಸ್ಥಳ
ಬೆಂಗಳೂರು: “ಆರೋಗ್ಯ, ಜೈವಿಕ ತಂತ್ರಜ್ಞಾನ ಮತ್ತು ಔಷಧ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಿಮ್ಹಾನ್ಸ್‌, ಐಐಎಸ್‌ಸಿಯಂತಹ ಮೇರು ಸಂಶೋಧನಾ ಕೇಂದ್ರಗಳಿವೆ. ಹೀಗಾಗಿ ಈ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಉದ್ಯಮಿಗಳಿಗೆ ಅನುಕೂಲವೇ ಹೆಚ್ಚು. ಅಲ್ಲದೇ, ಹೊಸ ಹೊಸ ಅವಿಷ್ಕಾರಕ್ಕೆ ಉತ್ತೇಜನ ನೀಡಿದಂತಾಗುತ್ತದೆ,” ಎಂದು ,” ಎಂದು ಬಯೋಕಾನ್‌ ಅಧ್ಯಕ್ಷೆ ಕಿರಣ್‌ ಮಜುಂದಾರ್‌ ಅಭಿಪ್ರಾಯಪಟ್ಟಿದ್ದಾರೆ. 

Ad

ಟಾಪ್ ನ್ಯೂಸ್

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

ಬಿ.ಟಿ.ಲಲಿತಾ ನಾಯಕ್‌ ಕಾಂಗ್ರೆಸ್‌ಗೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ವಂದೇ ಭಾರತ್‌ ರೈಲಿನಲ್ಲಿ ಕಳ್ಳತನ: ಆರೋಪಿ ಸೆರೆ, 49 ಮೊಬೈಲ್‌ ಜಪ್ತಿ

9-police

Bengaluru: ಪೊಲೀಸರ ಎಡವಟ್ಟು: ಗ್ಯಾಂಗ್‌ ಸ್ಟರ್‌ ಬಿಷ್ಣೋಯ್‌ ಸಹಚರರು ಪರಾರಿ!

8-fruad

Bengaluru: 2 ಫ್ಲ್ಯಾಟ್‌ ಸೇಲ್‌ ನೆಪದಲ್ಲಿ ಸಿಸ್ಟರ್‌ ಗೆ ಭಾರೀ ವಂಚನೆ!

7-bng

Bengaluru: ಪ್ರಸಿದ್ದ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಸರ್ಕಾರದ ವಶಕ್ಕೆ

4-bng

Bengaluru: ಮಹಿಳೆಯರ ಫೋಟೋ, ವಿಡಿಯೋ ಜಾಲತಾಣದಲ್ಲಿ ಹಾಕುತ್ತಿದ್ದವನ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

ಬಿ.ಟಿ.ಲಲಿತಾ ನಾಯಕ್‌ ಕಾಂಗ್ರೆಸ್‌ಗೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.