ಐಟಿಯಿಂದ ಸಚಿವ ಡಿಕೆಶಿ ವಿಚಾರಣೆ
Team Udayavani, Jan 4, 2019, 12:30 AM IST
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣ ಸಂಬಂಧ ಐಟಿ ಅಧಿಕಾರಿಗಳು ಸಚಿವ ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ಮುಂದುವರಿಸಿದ್ದಾರೆ.
ಐಟಿ ಅಧಿಕಾರಿಗಳು ಬುಧವಾರ ನೀಡಿದ್ದ ನೋಟಿಸ್ ಮೇರೆಗೆ ಶಿವಕುಮಾರ್ ಅವರು ಗುರುವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಎದುರು ಖುದ್ದು ವಿಚಾರಣೆಗೆ ಹಾಜರಾಗಿದ್ದರು. ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆದಾಯ ತೆರಿಗೆ ಕಚೇರಿಗೆ ಆಗಮಿಸಿದ ಶಿವಕುಮಾರ್ ಅವರನ್ನು ಸಂಜೆ 4 ಗಂಟೆವರೆಗೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಹೊರ ಬಂದ ಸಚಿವ ಶಿವಕುಮಾರ್, ಯಾವುದೇ ಪ್ರತಿಕ್ರಿಯೆ ನೀಡದೆ ಕೈ ಮುಗಿದು ತೆರಳಿದರು.