ನಿವೃತ್ತ ಪೊಲೀಸ್ ಅಧಿಕಾರಿ ಮನೆ ಮೇಲೆ ಐಟಿ ದಾಳಿ
Team Udayavani, Apr 16, 2019, 3:00 AM IST
ಬೆಂಗಳೂರು: ಕಾಂಗ್ರೆಸ್ ಮುಖಂಡ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಆರ್.ಟಿ.ನಗರದಲ್ಲಿರುವ ಬಾವ ಅವರ ಮನೆ ಮೇಲೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ದಾಳಿ ನಡೆಸಿರುವ ಸುಮಾರು ಎಂಟು ಮಂದಿ ಐಟಿ ಅಧಿಕಾರಿಗಳ ತಂಡ ನಾಲ್ಕೈದು ಗಂಟೆಗಳ ಪರಿಶೀಲನೆ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಮತ್ತೂಂದೆಡೆ ರಾಜ್ಯದ ಸಚಿವರೊಬ್ಬರ ಇಬ್ಬರು ಆಪ್ತರ ಮನೆಗಳ ಮೇಲೂ ಐಟಿ ದಾಳಿ ನಡೆಸಿದೆ. ಫ್ರೆಜರ್ಟೌನ್ನ ಸೈಯದ್ ಮುಜಾಹಿದ್ ಮತ್ತು ಟ್ಯಾನರಿ ರಸ್ತೆಯಲ್ಲಿರುವ ಜ್ಯುವೆಲ್ಲರಿ ಅಂಗಡಿ ಮಾಲೀಕ ರೋಹನ್ ಎಂಬುವರ ಮನೆಗಳ ಮೇಲೆ ದಾಲಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಖಚಿತ ಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ