ಬಾಲಕನ ಕೋಮಾಕ್ಕೆ ಜಾರಿಸಿದ ವೈದ್ಯನಿಗೆ ಜೈಲು

ವೈದ್ಯರು ಬಾಲಕನನ್ನು ಪರೀಕ್ಷಿಸಿ ಪ್ಲಾಸ್ಟಿಕ್‌ ಸರ್ಜರಿ ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾಗಿದ್ದರು

Team Udayavani, Oct 21, 2022, 2:14 PM IST

ಬಾಲಕನ ಕೋಮಾಕ್ಕೆ ಜಾರಿಸಿದ ವೈದ್ಯನಿಗೆ ಜೈಲು

ಬೆಂಗಳೂರು: ಗಾಯಗೊಂಡಿದ್ದ ಐದೂವರೆ ವರ್ಷದ ಯುಕೆಜಿ ಬಾಲಕನ ಬೆರಳುಗಳಿಗೆ ಪ್ಲಾಸ್ಟಿಕ್‌ ಸರ್ಜರಿ ಶಸ್ತ್ರಚಿಕಿತ್ಸೆ ಮಾಡುವ ಮುನ್ನ ನಿರ್ಲಕ್ಷ್ಯದಿಂದ ಅರಿವಳಿಕೆ ಔಷಧಿ ನೀಡಿ ಆತ ಕೋಮಾ ಸ್ಥಿತಿಗೆ ತಲುಪಲು ಕಾರಣಾನಾಗಿದ್ದ ಅರಿವಳಿಕೆ ತಜ್ಞ ವೈದ್ಯನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞನಾಗಿದ್ದ ಖ್ಯಾತ ವೈದ್ಯ ಚಂದ್ರಶೇಖರ್‌ ಅಪರಾಧಿ. ಲಕ್ಷಯ್‌ (5.6) ಕೋಮಾ ಸ್ಥಿತಿಗೆ ತಲುಪಿದ ಬಾಲಕ. ಯುಕೆಜಿ ವ್ಯಾಸಂಗ ಮಾಡುತ್ತಿದ್ದ ಲಕ್ಷಯ್‌ಗೆ 2016ರ ಜೂ.10ರಂದು ಶಾಲೆಯಲ್ಲಿ ಆಟವಾಡುತ್ತಿದ್ದಾಗ ಎಡಗೈ ಮಧ್ಯದ ಬೆರಳು ಹಾಗೂ ಉಂಗುರ ಬೆರಳು ಜಜ್ಜಿ ಹೋಗಿದ್ದವು. ಕೂಡಲೇ ಶಾಲಾ ಸಿಬ್ಬಂದಿ ಸ್ಥಳೀಯ ಪ್ರತಿಷ್ಠಿತ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದರು.

ವೈದ್ಯರು ಬಾಲಕನನ್ನು ಪರೀಕ್ಷಿಸಿ ಪ್ಲಾಸ್ಟಿಕ್‌ ಸರ್ಜರಿ ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾಗಿದ್ದರು. ಶಸ್ತ್ರ ಚಿಕಿತ್ಸೆಗೂ ಮುನ್ನ ಅರಿವಳಿಕೆ ತಜ್ಞ ಚಂದ್ರಶೇಖರ್‌ ಬಾಲಕನಿಗೆ ಅರಿವಳಿಕೆ ಔಷಧ ನೀಡಿದ್ದರು. ಅಧಿಕ ಡೋಸ್‌ ಅರಿವಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಬಾಲಕನ ಶ್ವಾಸಕೋಶ ಪಂಚರಾಗಿದ್ದು, ಆತನಿಗೆ ಉಸಿರಾಟದ ಸಮಸ್ಯೆ ಎದುರಾಗಿ ಕೋಮಾ ಸ್ಥಿತಿಗೆ ತಲುಪಿದ್ದ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಕೂಲಂಕಷ ವಾಗಿ ಪರಿಶೀಲಿಸಿದಾಗ “ಬಾಲಕನಿಗೆ ಅರಿವಳಿಕೆ ನೀಡುವ ವಿಚಾರದಲ್ಲಿ ನಿರ್ಲಕ್ಷ್ಯತೆ ವಹಿಸಿರುವುದೇ ಇದಕ್ಕೆ ಕಾರಣ’ ಎಂಬ ಸಂಗತಿ ಬೆಳಕಿಗೆ ಬಂದಿತ್ತು.

ಈ ವಿಚಾರ ತಿಳಿದು ಪಾಲಕರು ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. 2017ರಲ್ಲಿ ಪೊಲೀಸರು 8ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕಳೆದ 5 ವರ್ಷಗಳಿಂದ ಪ್ರಕರಣದ ತನಿಖೆ ನಡೆಸಿದ ನ್ಯಾಯಾಲಯವು ಅರಿವಳಿಕೆ ತಜ್ಞ ಚಂದ್ರಶೇಖರ್‌ನನ್ನು ಅಪರಾಧಿ ಎಂದು ಪರಿಗಣಿಸಿ 6 ತಿಂಗಳು ಜೈಲು ಶಿಕ್ಷೆ ಹಾಗೂ ಸಾವಿರ ರೂ. ದಂಡ ವಿಧಿಸಿದೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.