ಜೈನ “ಮಹಾಪುರಾಣ’ವೂ ಶ್ರೇಷ್ಠ ಗ್ರಂಥ

Team Udayavani, Dec 23, 2018, 3:15 PM IST

blore-6.jpg

ಬೆಂಗಳೂರು: ವಾಲ್ಮೀಕಿಯ ರಾಮಾಯಣ, ವ್ಯಾಸನ ಮಹಾಭಾರತದಂತೆಯೇ ಆಚಾರ್ಯ ಜಿನಸೇನ ಮತ್ತು ಗುಣಭದ್ರರು ರಚಿಸಿದ “ಮಹಾಪುರಾಣ’ ಕೂಡ ದೇಶದ ಶ್ರೇಷ್ಠ ಗ್ರಂಥವಾಗಿದೆ ಎಂದು ನಾಡೋಜ ಡಾ.ಹಂಪ ನಾಗರಾಜಯ್ಯ ವಿಶ್ಲೇಷಿಸಿದರು.

ನಗರದ ಕರ್ನಾಟಕ ಜೈನ ಭವನದಲ್ಲಿ ಶನಿವಾರ ಕರ್ನಾಟಕ ಜೈನ ಅಸೋಸಿಯೇಷನ್‌ ಹಮ್ಮಿಕೊಂಡಿದ್ದ “ಮಹಾಪುರಾಣ’ ಗ್ರಂಥದ ನಾಲ್ಕನೇ ಆವೃತ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿಯ ರಾಮಾಯಣ ಮತ್ತು ವ್ಯಾಸನ ಮಹಾಭಾರತ ದೇಶದ ಎರಡು ಮಹಾ ಗ್ರಂಥಗಳು. ಇವುಗಳಷ್ಟೇ ಶ್ರೇಷ್ಠ ಗ್ರಂಥ ಮಹಾಪುರಾಣ. ಅದನ್ನು ದೇವರ ಮನೆಯಲ್ಲಿಟ್ಟು ಪೂಜೆ ಮಾಡುವುದಕ್ಕಿಂತ ನಿತ್ಯ ಪಾರಾಯಣ
ಮಾಡುವುದೇ ಆ ಗ್ರಂಥಕ್ಕೆ ನಾವು ಕೊಡುವ ದೊಡ್ಡ ಗೌರವ ಎಂದು ತಿಳಿಸಿದರು.

ಮುಸ್ಲಿಮರಿಗೆ ಕುರಾನ್‌, ಕ್ರಿಶ್ಚಿಯನ್ನರಿಗೆ ಬೈಬಲ್‌ ಇದ್ದಂತೆ ಜೈನರಿಗೆ ತತ್ವರ್ಥಸೂತ್ರ ಮತ್ತು ಮಹಾಪುರಾಣ ಗ್ರಂಥಗಳಿವೆ ಡಾ.ಹಂಪ ನಾಗರಾಜಯ್ಯ, ಮೂಲತಃ ಪ್ರಾಕೃತ ಭಾಷೆಯಲ್ಲಿದ್ದ ಗ್ರಂಥವನ್ನು ಆಚಾರ್ಯ ಜಿನಸೇನ ಮತ್ತು ಗುಣಭದ್ರರು ಸಂಸ್ಕೃತಕ್ಕೆ ತಂದರು. ಆಮೇಲೆ ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರೀ ಕನ್ನಡದಲ್ಲಿ ಮರುಸೃಷ್ಟಿ ಮಾಡಿದರು ಎಂದು ಹೇಳಿದರು.

ಪರಿಷತ್ತಿನಿಂದ 10 ಪ್ರತಿ ಖರೀದಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌ ಮಾತನಾಡಿ, ಕನ್ನಡದ ಬುನಾದಿಯೇ ಜೈನ ಕಾವ್ಯ. ಶತಮಾನದ ಹಿಂದೆಯೇ ಎರ್ತೂರು ಶಾಂತಿರಾಜ ಶಾಸ್ತ್ರೀಗಳು ಹೊರತಂದ ಮಹಾಪುರಾಣ ಕನ್ನಡಿಗರ ಜ್ಞಾನದ ಬೆಳಕಾಗಿ ಬೆಳಗುತ್ತಿದೆ. ಪರಿಷತ್ತಿನ ವತಿಯಿಂದ ಮಹಾಪುರಾಣದ 10 ಪ್ರತಿಗಳನ್ನು ಖರೀದಿಸಲಾಗುವುದು ಎಂದು ಹೇಳಿದರು. ಎನ್‌.ಆರ್‌.ಪುರ ಜೈನ ಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಈ ಹಿಂದೆ ಅನೇಕರು ಮಹಾಪುರಾಣವನ್ನು ಕನ್ನಡಕ್ಕೆ ತರುವ ಪ್ರಯತ್ನ ಮಾಡಿದ್ದರು. ಆದರೆ, ಅವರಿಗೆಲ್ಲಾ
ಅನೇಕ ಅಡ್ಡಿ-ಆತಂಕಗಳು ಎದುರಾಗಿದ್ದವು.

ಸಮಾಜದಲ್ಲಿ ಒಳ್ಳೆಯವರ ಕಾಲೆಳೆಯುವವರೇ ಹೆಚ್ಚು. ಸಮಾಜದ ಸಾಧಕರು ಮರಣ ಹೊಂದಿದ ನಂತರ ಅವರ ಮೂರ್ತಿಗಳನ್ನು ವೃತ್ತಗಳಲ್ಲಿ ಪ್ರತಿಷ್ಠಾಪಿಸಿ ಪೂಜೆ ಮಾಡುವುದಲ್ಲ; ಅವರ ಜೀವಿತಾವಧಿ ಯಲ್ಲೇ ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡಬೇಕು ಎಂದು ಸೂಚ್ಯವಾಗಿ
ಹೇಳಿದರು.

ಹೊಂಬುಜ ಜೈನಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಮಾತನಾಡಿದರು. ಪಂಡಿತರತ್ನ ಎ. ಶಾಂತಿರಾಜಶಾಸ್ತ್ರೀ ಟ್ರಸ್ಟ್‌ ಧರ್ಮದರ್ಶಿ ಎಸ್‌. ಜಿತೇಂದ್ರ ಕುಮಾರ್‌, ಎಂ.ಜೆ.ಇಂದ್ರಕುಮಾರ್‌, ಎ.ಸಿ.ವಿದ್ಯಾಧರ್‌ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.