ಜ.5ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ
Team Udayavani, Jan 3, 2023, 9:49 PM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.
5ರಂದು ಮಧ್ಯಾಹ್ನ ಅವರು ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ. ಸಂಜೆ ಅವರು ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಎಸ್ಸಿ, ಎಸ್ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿಯ ನಂತರ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸುವರು.
6ರಂದು ಬೆಳಿಗ್ಗೆ ಅವರು ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ