ಜುಲೈ 26ಕ್ಕೆ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ
Team Udayavani, Jul 24, 2018, 6:40 AM IST
ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಜುಲೈ 26ರಂದು ಹೊರ ಬೀಳಲಿದೆ.ಜೂನ್ 29ರಿಂದ ಜುಲೈ 10ರ ವರೆಗೆ ನಡೆದ ಪೂರಕ ಪರೀಕ್ಷೆಯಲ್ಲಿ ಸರ್ಕಾರಿ, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿ 2.25 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಜುಲೈ 26ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್ಸೈಟ್ http://www.pue.kar.nic.in ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ಜುಲೈ 27ರಂದು ಎಲ್ಲ ಪಿಯು ಕಾಲೇಜಿನಲ್ಲೂ ಫಲಿತಾಂಶ ಸಿಗಲಿದೆ ಎಂದು ಪಿಯು ಇಲಾಖೆ ನಿರ್ದೇಶಕಿ ಸಿ.ಶಿಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಿ.ಎ, ಬಿ.ಕಾಂ. ಬಿಬಿಎಂ, ಬಿಬಿಎ, ಬಿಸಿಎ. ಬಿ.ಎಸ್ಸಿ ಸೇರಿದಂತೆ ವಿವಿಧ ಕೋಸ್ ಸೇರಿಕೊಳ್ಳಲು ಅವಕಾಶ ಇರುತ್ತದೆ. ಅಲ್ಲದೇ ಎಂಜಿನಿಯರಿಂಗ್ ಮತ್ತು ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್ಗಳಿಗೂ ಸೇರಿಕೊಳ್ಳಬಹುದು. ವೃತ್ತಿಪರ ಕೋರ್ಸ್ಗಳ ಸಿಇಟಿ ಕೌನ್ಸೆಲಿಂಗ್ ಈಗಾಗಲೇ ಆರಂಭವಾಗಿದೆ. ಎರಡು ಅಥವಾ ಮೂರನೇ ಸುತ್ತಿನಲ್ಲಿ ಸೀಟು ಪಡೆಯಲು ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ