ಕಾಲಾ’ ಚಿತ್ರ ವಿವಾದ ಹೈಕೋರ್ಟ್‌ ಅಂಗಳಕ್ಕೆ

Team Udayavani, Jun 5, 2018, 6:30 AM IST

high-court-karnataka-new.jpg

ಬೆಂಗಳೂರು: ನಟ ರಜನಿಕಾಂತ್‌ ನಾಯಕನಾಗಿರುವ “ಕಾಲಾ’ ತಮಿಳು ಚಲನಚಿತ್ರ ರಾಜ್ಯದಲ್ಲಿ ಬಿಡುಗಡೆಗೆ ನಿರ್ಬಂಧ ವಿವಾದ ಹೈಕೋರ್ಟ್‌ ಅಂಗಳ ತಲುಪಿದೆ.

ಜೂನ್‌ 7ರಂದು ಕರ್ನಾಟಕದಲ್ಲಿ “ಕಾಲಾ’ಚಿತ್ರ ಬಿಡುಗಡೆಗೆ ಅಡ್ಡಿಪಡಿಸುವಂತಹ ಯಾವುದೇ ಆದೇಶ ಹೊರಡಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿರ್ದೇಶನ ನೀಡಬೇಕು, ಚಿತ್ರತಂಡಕ್ಕೆ ಸೂಕ್ತ ರಕ್ಷಣೆ ಒದಗಿಸಲು ಮತ್ತು ಚಿತ್ರಪ್ರದರ್ಶನದ ಸೂಕ್ತ ಭದ್ರತೆ ನೀಡುವಂತೆ ಪೊಲೀಸ್‌ ಇಲಾಖೆಗೆ ಆದೇಶಿಸಬೇಕು ಎಂದು ಕೋರಿ ಚಿತ್ರ ನಿರ್ಮಾಣ ಸಂಸ್ಥೆ ವಂಡರ್‌ಬಾರ್‌ ಫಿಲ್ಮ್ ಪ್ರೈ.ಲಿಮೆಟೆಡ್‌ ಹೈಕೋರ್ಟ್‌ನಲ್ಲಿ ಅರ್ದಿ ಸಲ್ಲಿಸಿದೆ.

ಕಂಪೆನಿ ನಿರ್ದೇಶಕರಾದ ನಟ ಧನುಷ್‌ ಹಾಗೂ ಪತ್ನಿ ಐಶ್ವರ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಅರ್ಜಿ ವಿಚಾರಣೆ  ಮಂಗಳವಾರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ. ಅರ್ಜಿಯಲ್ಲಿ ರಾಜ್ಯಸರ್ಕಾರದ ಮುಖ್ಯಕಾರ್ಯದರ್ಶಿ, ಗೃಹ ಇಲಾಖೆ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ನಗರ ಪೊಲೀಸ್‌ ಆಯುಕ್ತರು, ಸಿಬಿಎಫ್ಸಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೀರ್ಪಿಗೆ ಸಂಬಂಧಿಸಿದಂತೆ ನಟ ರಜನಿಕಾಂತ್‌ ಕರ್ನಾಟಕ್ಕೆ ವ್ಯತಿರಿಕ್ತವಾಗುವ ಹೇಳಿಕೆ ನೀಡಿದ್ದಾರೆ ಎಂದು ಆಕ್ಷೇಪಿಸಿ ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಅವರು ರಜನಿಕಾಂತ್‌ ಅಭಿನಯದ “ಕಾಲಾ’ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅದೇರೀತಿ ಕನ್ನಡಪರ ಸಂಘಟನೆಗಳೂ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ನೀಡಿದ್ದಾರೆ. 

ಸಿಬಿಎಫ್ಸಿ ಬೋರ್ಡ್‌ನಿಂದ ಯು/ಎ ಸರ್ಟಿಫಿಕೇಟ್‌ ಪ್ರಾಮಾಣೀಕೃತ “ಕಾಲಾ’ ಚಿತ್ರ ಬಿಡುಗಡೆಗೆ ವಿರೋಧಿಸಿರುವ ಕ್ರಮ ಸರಿಯಲ್ಲ. ಅಲ್ಲದೆ, ಚಿತ್ರ ಬಿಡುಗಡೆಗೆ ನಿರ್ಬಂಧ ವಿಧಿಸುವುದು ಸಂವಿಧಾನದ ಕಲಂ 19(ಎ) ಉಲ್ಲಂಘನೆಯಾಗಲಿದೆ. ಜತೆಗೆ ಚಿತ್ರ ನಿರ್ಬಂಧಿಸುವ ಅಧಿಕಾರ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧಿಕಾರವಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಈ ನಿಟ್ಟಿನಲ್ಲಿ ಜೂನ್‌ 7ರಂದು ಬಿಡುಗಡೆಯಾಗಲಿರುವ “ಕಾಲ’ ಚಿತ್ರದ ಪ್ರದರ್ಶನ ಮಾಡದಂತೆ ಯಾವುದೇ ಆದೇಶ ಹೊರಡಿಸಬಾರದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿರ್ದೇಶಿಸಬೇಕು. ಜತೆಗೆ, ಚಿತ್ರದ ನಿರ್ಮಾಪಕ, ನಿರ್ದೇಶಕ, ಸಿಬ್ಬಂದಿ, ವಿತರಕರಿಗೆ ಹಾಗೂ ಚಿತ್ರಪ್ರದರ್ಶನಕ್ಕೆ ಅಡ್ಡಿಯಾಗದಂತೆ ಸೂಕ್ತ ರಕ್ಷಣೆ ಒದಗಿಸುವಂತೆ ಪೊಲೀಸ್‌ ಇಲಾಖೆಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.