ಕಾಶಿನಾಥ್‌ ಚಿರಸ್ಥಾಯಿ;ಚಂದನವನದ ಅನುಭವಿ ನಟ,ನಿರ್ದೇಶಕ ತೆರೆಮರೆಗೆ


Team Udayavani, Jan 19, 2018, 6:00 AM IST

18BNP-(33).jpg

ಬೆಂಗಳೂರು: ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ಕಾಶಿನಾಥ್‌ ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೆಂಡತಿ, ಮಗ, ಮಗಳು ಮತ್ತು ಸಾವಿರಾರು ಅಭಿಮಾನಿಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ನಾಲ್ಕು ದಶಕಗಳಿಂದ ನಟ, ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾಶಿನಾಥ್‌ ಅವರು ಚಿತ್ರರಂಗಕ್ಕೆ ಬಂದಿದ್ದು 1976ರಲ್ಲಿ  ಬಿಡುಗಡೆಯಾದ “ಅಪರೂಪದ ಅತಿಥಿಗಳು’ ಚಿತ್ರದ ಮೂಲಕ. ಈ ಚಿತ್ರದಲ್ಲಿ ನಟ-ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡ ಅವರು, ನಂತರ “ಅಪರಿಚಿತ’ ಎಂಬ ಚಿತ್ರದಲ್ಲಿ ನಟಿಸಿದರು. ಈ ಚಿತ್ರ ಯಶಸ್ವಿಯಾದ ಬೆನ್ನಲ್ಲೇ, ಹಿಂದಿಯಲ್ಲೂ “ಬೇಶಕ್‌’ ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದರು. ಈ ಚಿತ್ರದ ಸೋಲಿನ ನಂತರ ಕನ್ನಡಕ್ಕೆ ಮರಳಿದ ಕಾಶಿನಾಥ್‌, “ಅನುಭವ’ ಚಿತ್ರವನ್ನು ನಿರ್ದೇಶಿಸಿ, ನಟಿಸಿದರು. ಆ ಕಾಲಕ್ಕೆ ಕ್ರಾಂತಿಕಾರಕ ಚಿತ್ರ ಎನಿಸಿಕೊಂಡಿತು. 

ತದನಂತರ ಕಾಶಿನಾಥ್‌ ಮತ್ತೆಂದೂ ತಿರುಗಿ ನೋಡಲೇ ಇಲ್ಲ. ಒಂದು ಕಡೆ “ಅವಳೇ ನನ್ನ ಹೆಂಡ್ತಿ’, “ಅವನೇ ನನ್ನ ಗಂಡ’, “ಲವ್‌ ಮಾಡಿ ನೋಡು’, “ತಾಯಿಗೊಬ್ಬ ತರೆಲ ಮಗ’ದಂತಹ ಯಶಸ್ವಿ ಚಿತ್ರಗಳಲ್ಲಿ ನಟಿಸಿದರು. “ಅನಂತನ ಅವಾಂತರ’, “ಅಜಗಜಾಂತರ’ ಮುಂತಾದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದರು. ಹೀಗೆ ಸತತವಾಗಿ ನಟನೆ, ನಿರ್ದೇಶಿಸಿಕೊಂಡಿದ್ದ ಅವರು, ಒಂದು ಹಂತದಲ್ಲಿ ಸ್ವಲ್ಪ ಬಿಡುವು ಪಡೆದಿದ್ದರು. ನಂತರ ಗಣೇಶ್‌  ಅಭಿನಯದ “ಜೂಮ್‌’ ಚಿತ್ರದಿಂದ ಮತ್ತೆ ನಟನೆಗೆ ವಾಪಸ್ಸಾದರು. ಕಳೆದ ವರ್ಷ ಬಿಡುಗಡೆಯಾದ “ಚೌಕ’ ಚಿತ್ರದಲ್ಲೂ ನಟಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

ಸಾಂಪ್ರದಾಯಿಕ ಚೌಕಟ್ಟನ್ನು ಮೀರಿದ ಕ್ರಾಂತಿಕಾರಕ ಚಿತ್ರಗಳನ್ನು ನಿರ್ದೇಶಿಸುವುದರಲ್ಲಿ ಹೆಸರಾಗಿದ್ದ ಕಾಶಿನಾಥ್‌, “ಅನುಭವ’, “ಅನಂತನ ಅವಾಂತರ’ ಸೇರಿ ಕೆಲವು ವಿಭಿನ್ನ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿದ್ದರು. ಆಗಿನ ಕಾಲಕ್ಕೆ ಈ ಚಿತ್ರಗಳ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾದರೂ, ಜನ ಆ ಚಿತ್ರಗಳನ್ನು ನೋಡಿ ಯಶಸ್ವಿಗೊಳಿಸಿದ್ದು ಸುಳ್ಳಲ್ಲ. ಇದಲ್ಲದೆ ವರದಕ್ಷಿಣೆ, ವಿಧವಾ ವಿವಾಹದಂತಹ ಸಾಮಾಜಿಕ ಪಿಡುಗುಗಳಿರುವ ಚಿತ್ರಗಳಲ್ಲೂ ಕಾಶಿನಾಥ್‌ ಕಾಣಿಸಿಕೊಂಡಿದ್ದರು. ಆದರೂ ಕಾಶಿನಾಥ್‌ ಎಂದರೆ ಥಟ್ಟನೆ ನೆನಪಾಗುತ್ತಿದ್ದುದು ಕಾಮಿಡಿ ಚಿತ್ರಗಳೇ ಎನ್ನುವಷ್ಟರ ಮಟ್ಟಿಗೆ ಅವರು ಹಾಸ್ಯಮಯ ಚಿತ್ರಗಳಲ್ಲಿ ನಟಿಸಿದ್ದರು.

ದಾರಿತೋರಿಸಿದ್ದ ಕಾಶಿನಾಥ್‌:
ಹೌದು, ಸ್ಯಾಂಡಲ್‌ವುಡ್‌ನ‌ ಅದೆಷ್ಟೋ ಕಲಾವಿದರಿಗೆ ಕಾಶಿನಾಥ್‌ ನಂದಾದೀಪ. ಹಲವು ಪ್ರತಿಭಾವಂತರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆ ಅವರಿಗಿದೆ. ಉಪೇಂದ್ರ, ವಿ. ಮನೋಹರ್‌, ಸುನೀಲ್‌ ಕುಮಾರ್‌ ದೇಸಾಯಿ, ಸುಂದರನಾಥ ಸುವರ್ಣ ಮುಂತಾದ ಹಲವು ಪ್ರತಿಭಾವಂತರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದವರೇ ಕಾಶಿನಾಥ್‌.

ಕಾಡಿದ ಅನಾರೋಗ್ಯ:
ಕಾಶಿನಾಥ್‌ ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಅದಕ್ಕಾಗಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ನಗರದ ಶಂಕರ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ಸಾರ್ವಜನಿಕ ದರ್ಶನಕ್ಕಾಗಿ ಅವರ ದೇಹವನ್ನು ನರಸಿಂಹರಾಜ ಕಾಲೋನಿಯ ಎ.ಪಿ.ಎಸ್‌. ಮೈದಾನದಲ್ಲಿ ಇಡಲಾಗಿತ್ತು. ನಂತರ ಚಾಮರಾಜಪೇಟೆಯ ಟಿ.ಆರ್‌.ಮಿಲ್‌ ರುದ್ರಭೂಮಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

ಚಿತ್ರೀಕರಣ ಸ್ಥಗಿತ:
ಕಾಶಿನಾಥ್‌ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆಯೇ “ದಿ ವಿಲನ್‌’ ಸೇರಿದಂತೆ ಇತರೆ ಚಿತ್ರತಂಡಗಳು ಚಿತ್ರೀಕರಣ ಚಟುವಟಿಕೆಗಳನ್ನು ನಿಲ್ಲಿಸಿದವು. ಕಲಾವಿದರಾದ ಶಿವರಾಜಕುಮಾರ್‌, ಸುದೀಪ್‌, ದರ್ಶನ್‌, ಲೀಲಾವತಿ, ವಿನೋದ್‌ ರಾಜ್‌, ಸಾ.ರಾ. ಗೋವಿಂದು, ಅಭಿನಯ, ತಾರಾ, ಚಿರಂಜೀವಿ ಸರ್ಜಾ, ಶ್ರೀನಗರ ಕಿಟ್ಟಿ, ಸುಂದರ್‌ರಾಜ್‌ ಸೇರಿದಂತೆ ಹಲವಾರು ಗಣ್ಯರು ಕಾಶಿನಾಥ್‌ ಅವರ ಅಂತಿಮ ದರ್ಶನ ಪಡೆದರು. ಹಲವು ಕಲಾವಿದರು ಮತ್ತು ತಂತ್ರಜ್ಞರು ಸಾಮಾಜಿಕ ಜಾಲತಾಣಗಳ ಮೂಲಕ ಕಾಶಿನಾಥ್‌ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಪ್ರತಿಭಾವಂತ ಕಲಾವಿದರಾಗಿದ್ದ ಹಿರಿಯ ನಟ ಕಾಶಿನಾಥ್‌ ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಇನ್ನೂ ಚಿಕ್ಕ ವಯಸ್ಸು, ಇಷ್ಟು ಬೇಗ ಅವರು ಸಾವನ್ನಪ್ಪಬಾರದಿತ್ತು. ಹಾಸ್ಯನಟರಾಗಿದ್ದರು. ನಾನೂ ಕೂಡ ಅವರ ಎರಡು ಚಿತ್ರಗಳನ್ನು ನೋಡಿದ್ದೇನೆ. ಕಾಶಿನಾಥ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.