ಪ್ರಬಲ ಕನ್ನಡ ವಿಧೇಯಕ ಮಂಡನೆಗೆ ಅಣಿಯಾದ ರಾಜ್ಯ ಸರಕಾರ

Team Udayavani, Sep 21, 2022, 11:47 AM IST

ಪ್ರಬಲ ಕನ್ನಡ ವಿಧೇಯಕ ಮಂಡನೆಗೆ ಅಣಿಯಾದ ರಾಜ್ಯ ಸರಕಾರ

ಬೆಂಗಳೂರು : ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕಾಗಿ ಪ್ರತ್ಯೇಕ ವಿಧೇಯಕ ಜಾರಿಗೊಳಿಸುವುದಕ್ಕೆ ರಾಜ್ಯ ಸರಕಾರ ಈಗ ಎಲ್ಲ ಸಿದ್ಧತೆ ನಡೆಸಿಕೊಂಡಿದ್ದು, ಈ ವಾರ ಉಭಯ ಸದನಗಳಲ್ಲಿ ಮಂಡನೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಈಗಾಗಲೇ ಈ ಕಾಯಿದೆ ಜಾರಿ ಬಗ್ಗೆ ಮು‌ನ್ಸೂಚನೆ ನೀಡಿದ್ದು, ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್ ಉಭಯ ಸದನಗಳಲ್ಲಿ ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಆಡಳಿತದ ಎಲ್ಲ ಹಂತಗಳಲ್ಲಿ ಕನ್ನಡದ ಸಮರ್ಪಕ ಅನುಷ್ಠಾನದ ಜತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಸನಬದ್ಧ ಅಧಿಕಾರ ನೀಡುವ ಮಹತ್ವದ ಅಂಶವನ್ನು ಈ ವಿಧೇಯಕ ಒಳಗೊಂಡಿದೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಭೂಮಿ, ತೆರಿಗೆ ರಿಯಾಯಿತಿ, ಅನುದಾನ ಹಾಗೂ ಇತರೆ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೆಗಳು, ಕಾರ್ಯ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ಕಾಯಿದೆಯ ಮೇಲ್ವಿಚಾರಣೆಗೂ ಈ ವಿಧೇಯಕ ಬಲ ನೀಡಲಿದೆ.

ಕಾಯಿದೆಯ ಮುಖ್ಯಾಂಶಗಳು ಹೀಗಿವೆ…..

1. ಉನ್ನತ, ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಪರಿಚಯಿಸಿ ಕನ್ನಡ ಕಲಿಕೆಗೆ ಪ್ರೋತ್ಸಾಹಿಸುವುದು.

2. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉನ್ನತ , ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಮೀಸಲು ಸೌಲಭ್ಯ.

3. ರಾಜ್ಯ ಸರ್ಕಾರ, ಸ್ಥಳೀಯ ಪ್ರಾಧಿಕಾರ, ಶಾಸನಬದ್ಧ ಸಂಸ್ಥೆಗಳು, ಸಹಕಾರ ಸಂಘಗಳ ನೇಮಕ ಪ್ರಕ್ರಿಯೆಯಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ.

4. ಅಧೀನ ನ್ಯಾಯಾಲಯ ಹಾಗೂ ನ್ಯಾಯ ಮಂಡಳಿಗಳಲ್ಲಿ ಕನ್ನಡ ಭಾಷಾ ಬಳಕೆ.

5. ಕನ್ನಡದ ಬಳಕೆ ಮತ್ತು ಪ್ರಸಾರಕ್ಕೆ ನೀತಿ.

6. ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶದಲ್ಲಿ ಕನ್ನಡ ಬಳಕೆಗೆ ಕ್ರಮ.

7. ರಾಜ್ಯ ಸರಕಾರದಿಂದ ತೆರಿಗೆ ರಿಯಾಯಿತಿ ಹಾಗೂ ಇತರೆ ಸೌಲಭ್ಯ ಪಡೆದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವುದು.

8. ಉದ್ಯೋಗ ಪೋರ್ಟಲ್ ಸ್ಥಾಪನೆ.

9. ಅನುಷ್ಠಾನಗಳ ಮೇಲ್ವಿಚಾರಣೆಗೆ ಕಾರ್ಯ ವ್ಯವಸ್ಥೆ ಸ್ಥಾಪನೆ.

ಇದನ್ನೂ ಓದಿ : ಬಾಲಿವುಡ್ ನ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ವಿಧಿವಶ

ದಂಡ ವ್ಯವಸ್ಥೆ :
ಇದೆಲ್ಲಕ್ಕಿಂತ ಮುಖ್ಯವಾಗಿ ಕನ್ನಡ ಅನುಷ್ಠಾನ ಉಲ್ಲಂಘನೆ ಮಾಡಿದ ವ್ಯಕ್ತಿ, ಸಂಘ- ಸಂಸ್ಥೆಗಳಿಗೆ ಈ ಕಾಯಿದೆಯ ಮೂಲಕ ದಂಡ ವಿಧಿಸುವ ಉಪಬಂಧವನ್ನು ಈ ಕಾಯಿದೆಯ ಮೂಲಕ ಪರಿಚಯಿಸಲಾಗುತ್ತಿದೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.