ಚಿತ್ರನಟಿ ಜಯಂತಿಗೆ ಕಸಾಪ ದತ್ತಿ ಪ್ರಶಸ್ತಿ

Team Udayavani, May 15, 2019, 3:03 AM IST

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಈ ಸಾಲಿನ “ಡಾ.ರಾಜ್‌ಕುಮಾರ್‌ ಸಂಸ್ಕೃತಿ ದತ್ತಿ’ ಪ್ರಶಸ್ತಿಗೆ ಹಿರಿಯ ಚಿತ್ರನಟಿ ಜಯಂತಿ ಆಯ್ಕೆಯಾಗಿದ್ದಾರೆ.

ಮೇ 24 ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಿತ್ರನಟ ಶಿವರಾಜ್‌ಕುಮಾರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ ಭಾಗವಹಿಸಲಿದ್ದಾರೆ.

ಬಣ್ಣದ ಲೋಕಕ್ಕೆ ಹಿರಿಯ ಕಲಾವಿದೆ ಜಯಂತಿ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ