ಬೆಂ.ಕೇಂದ್ರದಲ್ಲಿ ಖುಷ್ಬು ಮತಯಾಚನೆ
Team Udayavani, Apr 11, 2019, 6:40 AM IST
ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಸಿ.ವಿ.ರಾಮನ್ನಗರದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ನಟಿ, ಎಐಸಿಸಿ ವಕ್ತಾರೆ ಖುಷ್ಬು ಮತಯಾಚಿಸಿದರು.
ಹೊಯ್ಸಳ ನಗರದಲ್ಲಿ ಬುಧವಾರ ಬೆಳಗ್ಗೆ ನಡೆದ ರೋಡ್ ಶೋನಲ್ಲಿ ನಟಿ ಖುಷ್ಬು, ಅಭ್ಯರ್ಥಿ ರಿಜ್ವಾನ್ ಅರ್ಷದ್ ಜತೆ ಸಚಿವ ಕೆ.ಜೆ.ಜಾರ್ಜ್, ಶಾಸಕ ಎನ್.ಎ.ಹ್ಯಾರಿಸ್ ಭಾಗವಹಿಸಿದ್ದರು. ಸಿ.ವಿ.ರಾಮನ್ನಗರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಖುಷ್ಬು, ಮುಖ್ಯವಾಗಿ ಯಾರು ಕೆಲಸ ಮಾಡುವರೋ ಅವರಿಗೆ ಮತ ಹಾಕಿ. ಪ್ರಧಾನಿ ಮೋದಿ ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ಈ ಬಾರಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಬೇಕು ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ