ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ ಸೇವೆ


Team Udayavani, Oct 14, 2017, 6:15 AM IST

KSRTC-VUS.jpg

ಬೆಂಗಳೂರು: ಬೆಳಕಿನಹಬ್ಬ ದೀಪಾವಳಿ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ, ಅ. 17ರಿಂದ 19ರವರೆಗೆ ಸುಮಾರು 1,300ರಿಂದ 1,500 ವಿಶೇಷ ಬಸ್‌ಗಳ ಸೇವೆ ಕಲ್ಪಿಸಿದೆ.

ಹಬ್ಬಕ್ಕೆ ನಗರದಿಂದ ರಾಜ್ಯದ ವಿವಿಧೆಡೆ ಮತ್ತು ಅಂತರರಾಜ್ಯಗಳಿಗೆ ತೆರಳುವವರಿಗಾಗಿ ಈ ಹೆಚ್ಚುವರಿ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾಮಾನ್ಯ, ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ, ಐರಾವತ ಕ್ಲಬ್‌ಕ್ಲಾಸ್‌ ಹಾಗೂ ಡೈಮಂಡ್‌ ಕ್ಲಾಸ್‌ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

ಈ ಬಸ್‌ಗಳು ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಟಿಟಿಎಂಸಿ ಬಸ್‌ ನಿಲ್ದಾಣದಿಂದ ಆಚರಣೆ ಮಾಡಲಿವೆ. ಅದೇ ರೀತಿ, ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರುವವರಿಗಾಗಿ ಅಕ್ಟೋಬರ್‌ 22ರಂದು ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್‌ಗಳ ಸೇವೆ ಇರಲಿದೆ.

ಮೆಜೆಸ್ಟಿಕ್‌, ಮೈಸೂರು ರಸ್ತೆ ಬಸ್‌ ನಿಲ್ದಾಣ, ಶಾಂತಿನಗರ, ವಿಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡರಸ್ತೆ, ಕೆಂಗೇರಿ ಉಪನಗರ ನಗರದ ಮತ್ತಿತರ ಸ್ಥಳಗಳಿಂದ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

ನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ಹೈದರಾಬಾದ್‌, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಮುಂಬೈ, ಎರ್ನಾಕುಲಂ, ಪಾಲ್ಗಾಟ್‌, ತಿರುವನಂತಪುರ ಸೇರಿದಂತೆ ಮತ್ತಿತರ ನೆರೆ ರಾಜ್ಯಗಳ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇ-ಟಿಕೆಟ್‌ ಬುಕಿಂಗ್‌ಗೆ www.ksrtc.in ಸಂಪರ್ಕಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇ. 5ರಷ್ಟು ಮತ್ತು ಹೋಗುವ-ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ, ಬರುವ‌ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.