ಇಂದಿನಿಂದ ಲಾಲ್ಬಾಗ್ ಪ್ರವೇಶ ನಿಷಿದ್ಧ
Team Udayavani, Mar 21, 2020, 10:28 AM IST
ಬೆಂಗಳೂರು: ಕೋವಿಡ್ 19 ವೈರಸ್ ಭೀತಿ ಹಿನ್ನೆಲೆಯಲ್ಲಿ ಸಸ್ಯಕಾಶಿ ಲಾಲ್ಬಾಗ್ಗೆ ಇಂದಿನಿಂದ (ಶನಿವಾರದಿಂದ) ವಾಯು ವಿಹಾರಿಗಳು ಹಾಗೂ ಪ್ರವಾಸಿಗರಿಗೆ ಪ್ರವೇಶವಿಲ್ಲ. ಕೋವಿಡ್ 19 ಹರಡುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ಲಾಲ್ಬಾಗ್ಗೆ ಎಲ್ಲಾ ಬಗೆ ಸಾರ್ವಜನಿಕರಿಗೆ, ವೀಕ್ಷಕರಿಗೆ, ವಾಯುವಿಹಾರಿಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆ ಹಿನ್ನಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ರಾಜ್ಯ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ. ಎಂ. ಜಗದೀಶ್ ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿಯ ವೇಳೆಗೆ ಲಾಲ್ ಬಾಗ್ನ ಎಲ್ಲಾ ಪ್ರವೇಶ ದ್ವಾರಗಳನ್ನು ಮುಚ್ಚಲಾಗುವುದು. ಈ ಸಂಬಂಧ ಎಲ್ಲಾ ಪ್ರವೇಶ ದ್ವಾರಗಳಲ್ಲೂ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು. ಲಾಲ್ ಬಾಗ್ಗೆ ನಿತ್ಯ ಸುಮಾರು 7-10 ಸಾವಿರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಲಾಲ್ ಬಾಗ್ ಪ್ರವೇಶವನ್ನು ರದ್ದುಪಡಿಸುವಂತೆ ಶುಕ್ರವಾರ ರಾತ್ರಿ ಆರೋಗ್ಯ ಇಲಾಖೆ ಅಧಿಕಾರಿಗಳು
ಸೂಚನೆ ನೀಡಿದ್ದರಿಂದ ತಕ್ಷಣ ಕಾರ್ಯಪ್ರವೃತ್ತರಾಗಿದ್ದೇವೆ. ಆ ಹಿನ್ನೆಲೆಯಲ್ಲಿ ಸರಕಾರದ ಮುಂದಿನ ಆದೇಶದವರೆಗೆ ಲಾಲ್ ಬಾಗ್ ಗೆ ಪ್ರವೇಶವನ್ನು ನಿಷೇಧಿಸಲಾಗುವುದೆಂದು ಜಗದೀಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ