ಗುಣಮುಖ ಪ್ರಮಾಣದಲ್ಲಿ ರಾಜಧಾನಿಗೆ ಕೊನೇ ಸ್ಥಾನ

Team Udayavani, Jul 19, 2020, 9:04 AM IST

ಗುಣಮುಖ ಪ್ರಮಾಣದಲ್ಲಿರಾಜಧಾನಿಗೆ ಕೊನೇ ಸ್ಥಾನ

ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಕಟ್ಟಡವೊಂದಕ್ಕೆ ಸೋಂಕು ಅಗ್ನಿಶಾಮಕ ಸಿಬ್ಬಂದಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದರು.

ಬೆಂಗಳೂರು: ನಗರದಲ್ಲಿ ಸೋಂಕಿನಿಂದ ಗುಣಮುಖರಾಗುವ ಪ್ರಮಾಣ ಶೇ. 20 ರಷ್ಟಿದ್ದು, ಈ ಪ್ರಮಾಣ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊನೆಯ ಸ್ಥಾನದಲ್ಲಿದೆ.

ಈವರೆಗೆ 29,621 ಪ್ರಕರಣಗಳು ವರದಿಯಾಗಿದ್ದು, 6,540 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶನಿವಾರ 2,125 ಜನರಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 29,621 ಏರಿಕೆಯಾಗಿದೆ. 49 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 631ಕ್ಕೆ ಏರಿಕೆಯಾಗಿದೆ. 250 ಸೋಂಕಿತರು ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 332 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ನಿಗದಿತ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ 22,449 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ವಾರಿಯರ್ಸ್‌ಗೆ ಸೋಂಕು: ಕೋವಿಡ್‌ ವೈರಸ್‌ ವಾರಿಯರ್ಸ್‌ ಅನ್ನು ಬೆಂಬಿಡದೇ ಕಾಡುತ್ತಿದ್ದು, ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ 20 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈವರೆಗೆ ಒಟ್ಟು 59 ಮಂದಿಯಲ್ಲಿ ದೃಢಪಟ್ಟಿದೆ.

ಪಿಆರ್‌ಒಗಳಿಗೆ ಕೋವಿಡ್‌ :  ಬಿಬಿಎಂಪಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಸೋಂಕು ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಸಾರ್ವಜನಿಕ ಸಂಪರ್ಕ ವಿಭಾಗದ ಕಾರ್ಯಕ್ರಮ ಸಹಾಯಕ ಸಿಬ್ಬಂದಿಗೆಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ, ಸಾರ್ವಜನಿಕ ಸಂಪರ್ಕ ಅಧಿಕಾರಿಯೂ ಸಹ ಕಳೆದ ಐದು ದಿನಗಳಿಂದ ಹೋಂ ಕ್ವಾರಂಟೈನ್‌ ಗೆ ಒಳಗಾಗಿದ್ದರು. ಉಸಿರಾಟದ ಸಮಸ್ಯೆ ಹಾಗೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕು ಪರೀಕ್ಷೆಗೆ ಒಳಗಾಗಿದ್ದು, ದೃಢಪಟ್ಟಿದೆ. ಹೀಗಾಗಿ, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ ಕಚೇರಿಗೆ ಯಾರಾದರೂ ಭೇಟಿ ನೀಡಿದ್ದರೆ, ಕೋವಿಡ್‌ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಪೌರಕಾರ್ಮಿಕರಲಿ ಹೆಚ್ಚಾದ ವೈರಸ್‌ :  ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಸೋಂಕು ದೃಢಪಡುವುದು ಹೆಚ್ಚಾಗಿದೆ. ವಸಂತ ನಗರ ವಾರ್ಡ್‌ನ ಕುಮಾರಪಾರ್ಕ್‌ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ 9 ಜನ ಪೌರಕಾರ್ಮಿಕರಿಗೆ ಸೋಂಕು ದೃಢಪಟ್ಟಿದ್ದು, ಇವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಹಂತ-ಹಂತವಾಗಿ ಪೌರಕಾರ್ಮಿಕರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸುತ್ತಿದ್ದೇವೆ. ಸೋಮವಾರ ಮತ್ತಷ್ಟು ಪೌರಕಾರ್ಮಿಕರನ್ನು ಕೋವಿಡ್‌ ಸೋಂಕು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ವಸಂತನಗರ ವಾರ್ಡ್‌ನ ಪಾಲಿಕೆ ಸದಸ್ಯ ಎಸ್‌. ಸಂಪತ್‌ಕುಮಾರ್‌ ಅವರು ತಿಳಿಸಿದ್ದಾರೆ.

ಯಾವ ವಾರ್ಡ್‌ಗಳಲ್ಲಿ ಅಧಿಕ ಸೋಂಕಿತರು : ಶಾಂತಲಾ ನಗರ 100, ಸುದ್ದುಗುಂಟೆಪಾಳ್ಯ 33, ಚಾಮರಾಜಪೇಟೆ, ಕುಮಾರಸ್ವಾಮಿ ಲೇಔಟ್‌, ಮಲ್ಲೇಶ್ವರ 24, ಶಾಂತಿನಗರ 23, ಹೊಂಬೆಗೌಡ ನಗರ, ಹೊಯ್ಸಳ ನಗರ 21, ಯಡಿಯೂರು, ಮತ್ತಿಕೆರೆ 18, ಜೆ.ಪಿ.ನಗರ, ಜಯನಗರ ಪೂರ್ವ 17, ಎಚ್‌ ಬಿ ಆರ್‌ ಲೇಔಟ್‌, ಬಾಣಸವಾಡಿ 16 ಸೋಂಕಿತರು 24 ಗಂಟೆಯಲ್ಲಿ ದೃಢಪಟ್ಟಿದ್ದಾರೆ. 198 ವಾರ್ಡ್‌ಗಳ ಪೈಕಿ 142 ವಾರ್ಡ್‌ಗಳಲ್ಲಿ 50 ಕ್ಕೂ ಅಧಿಕ ಸೋಮಕಿತರು ಇದ್ದಾರೆ.

ಮಾರ್ಷಲ್‌ಗ‌ಳಿಗೂ ಸೋಂಕು :  ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದಕೊಳ್ಳದವರ ಮೇಲೆ ಮಾರ್ಷಲ್‌ಗ‌ಳು ತಲಾ 200 ರೂ. ದಂಡ ವಿಧಿಸುತ್ತಿದ್ದಾರೆ. ಹೆಚ್ಚು ಜನ ಸಂಪರ್ಕದಲ್ಲಿರುವ ಹಿನ್ನೆಲೆಯಲ್ಲಿ ಈಗ ಮಾರ್ಷಲ್‌ಗ‌ಳಿಗೂ ಸೋಂಕು ಹಬ್ಬುತ್ತಿದೆ. ಇತ್ತೀಚೆಗೆ ರಾಜಮಹಲ್‌ಗ‌ುಟ್ಟಹಳ್ಳಿ, ಕಾಡುಗೋಡಿ ಗಂಗೇನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಲಾ ಒಬ್ಬರು ಮಾರ್ಷಲ್‌ ಹಾಗೂ ಕೃಷ್ಣರಾಜೇಂದ್ರ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಮೂರು ಜನ ಮಾರ್ಷಲ್‌ಗ‌ಳಿಗೆ ಕೋವಿಡ್‌ ದೃಢಪಟ್ಟಿದ್ದು, ಕೋವಿಡ್‌ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢಪಟ್ಟ ಮಾರ್ಷಲ್‌ಗ‌ಳ ಸಂಪರ್ಕದಲ್ಲಿದ್ದ ಮಾರ್ಷಲ್‌ಗ‌ಳು ಸಹ ಕ್ವಾಂಟೈನ್‌ಗೆ ಒಳಪಡಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.