ಬೇಲ್‌ಗೆ ನೆರವಾಗದ್ದಕ್ಕೆ ವಕೀಲರ ಟಾರ್ಗೆಟ್‌; ಜೈಲಿನಲ್ಲಿದ್ದ ವೇಳೆ ಜಾಮೀನು ನೀಡಲು ಸಹಕರಿಸದ್ದಕ್ಕೆ ಪ್ರತೀಕಾರ


Team Udayavani, Dec 8, 2022, 3:22 PM IST

4

ಬೆಂಗಳೂರು: ವಕೀಲರನ್ನು ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ಹಾಗೂ 25ಕ್ಕೂ ಹೆಚ್ಚು ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್‌ ಮಂಜೂರ್‌ ಅಲಿಯಾಸ್‌ ದೂನ್‌ನನ್ನು ಬಂಧಿಸಲಾಗಿದೆ.

ಇದೇ ವೇಳೆ ಕಾನೂನು ಸಂಘರ್ಷಕ್ಕೊಳಗಾದ ಆತನ ಪುತ್ರನನ್ನು ದೇವರ ಜೀವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಘರ್ಷಕ್ಕೊಳಗಾದ ಪುತ್ರನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಆರೋಪಿಗಳಿಂದ 14 ಲಕ್ಷ ರೂ. ಮೌಲ್ಯದ ಕಾರು, ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಇತರೆ ಇಬ್ಬರು ಆರೋಪಿಗಳಾದ ಅಬ್ದುಲ್‌ ಸೇರಿ ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಕಳೆದ ಸೋಮವಾರ ತಡರಾತ್ರಿ 12 ಗಂಟೆ ಸುಮಾರಿಗೆ ದೂರುದಾರ ಶ್ರೀಆಷ್ಪಾಕ್‌ ಅಹಮದ್‌ ಎಂಬುವರು ಕುಟುಂಬ ಸಮೇತ ಕನಕನಗರದಿಂದ ವಾಪಸ್‌ ಜೋಸೇಫ್ ರೆಡ್ಡಿ ಲೇಔಟ್‌ನಲ್ಲಿರುವ ಮನೆಗೆ ಹೋಗುತ್ತಿದ್ದರು. ಆಗ ನಾಲ್ವರು ಆರೋಪಿಗಳು ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ನಂತರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಾರು, ಮೊಬೈಲ್‌ ಕಳವು ಮಾಡಿದ್ದರು. ಈ ಸಂಬಂಧ ಶ್ರೀಆಷ್ಪಾಕ್‌ ದೂರು ನೀಡಿದ್ದರು. ತಡರಾತ್ರಿಯೇ ಠಾಣಾಧಿಕಾರಿ ಪ್ರಕಾಶ್‌ ನೇತೃತ್ವದ ತಂಡ ಆರೋಪಿಗಳ ಪತ್ತೆ ಕಾರ್ಯಕ್ಕೆ ಮುಂದಾದಾಗ, ಮಂಜೂರ್‌ ಮಾಹಿತಿ ಲಭ್ಯವಾಗಿ ಆತನ ಅಡಗಿರುವ ಸ್ಥಳದ ಮೇಲೆ ದಾಳಿ ನಡೆಸಿ ಕಾರು ಪತ್ತೆಯಾ ಗಿದೆ. ಬಳಿಕ ಅಪ್ಪ-ಮಗನನ್ನು ಬಂಧಿಸಲಾಗಿತ್ತು.

ವಕೀಲರೇ ಟಾರ್ಗೆಟ್‌: ಶಿವಾಜಿನಗರದ ರೌಡಿಶೀಟರ್‌ ಆಗಿರುವ ಮಂಜೂರ್‌ ವಿರುದ್ಧ 25ಕ್ಕೂ ಹೆಚ್ಚು ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. “ತಾನೂ ಜೈಲಿಗೆ ಹೋದಾಗ, ಬಿಡುಗಡೆ ಮಾಡಲು ವಕೀಲರು ನೆರವು ನೀಡುತ್ತಿರಲಿಲ್ಲ’. ಹೀಗಾಗಿ ವಕೀಲರನ್ನು ಗುರಿಯಾಗಿಸಿಕೊಂಡು ಅವರ ಕಾರು, ಇತರೆ ವಸ್ತುಗಳನ್ನು ಸುಲಿಗೆ ಮಾಡುತ್ತಿದ್ದಾಗಿ ಹೇಳಿಕೆ ನೀಡಿದ್ದಾನೆ. ಆದರಿಂದ ಆರೋಪಿ, ದೂರುದಾರರಾದ ಶ್ರೀಆಷ್ಪಾಕ್‌ ಸಹ ವಕೀಲರಾಗಿದ್ದರಿಂದ ಅವರನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದರು.

ರಾಜಕೀಯ ಮುಖಂಡರ ಹೆಸರು ಬಳಕೆ: 2018ರಲ್ಲಿ ಕೇಂದ್ರದ ಮಾಜಿ ಸಚಿವ ಜಾಫ‌ರ್‌ ಶರೀಫ್ ಅವರ ಮೊಮ್ಮಗ ರೆಹಮಾನ್‌ ಹೆಸರು ಹೇಳಿಕೊಂಡು ಆರೋಪಿ ಮಂಜೂರ್‌, ಮಾಜಿ ಕಾರ್ಪೋರೆಟರ್‌ ಮುಜಾಫ‌ರ್‌ಗೆ ಕರೆ ಮಾಡಿ, “ಮಂಜೂರ್‌ ನಮ್ಮ ತಾತ ಜಾಫ‌ರ್‌ ಷರೀಫ್ ಅವರಿಗೆ ಸಾಕಷ್ಟು ಕೆಲಸ ಮಾಡಿದ್ದಾನೆ. ಸದ್ಯ ಆತ ಜೈಲು ಸೇರಿದ್ದಾನೆ. ಆತನಿಗೆ ಸಹಾಯ ಮಾಡುವಂತೆ’ ಕೋರಿದ್ದ. ಅದರಿಂದ ಮಾಜಿ ಕಾರ್ಪೋರೆಟರ್‌ ಆರೋಪಿಗೆ 50 ಸಾವಿರ ರೂ. ನಗದು ಮತ್ತು ಚಿನ್ನದ ಸರ ನೀಡಿದ್ದರು. ಹೀಗೆ ರಾಜಕೀಯ ಮುಖಂಡರ ಸಂಬಂಧಿ ಎಂದು ಹೇಳಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ರೌಡಿಶೀಟರ್‌ ಮಂಜೂರ್‌ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹಲವಾರು ಕೇಸ್‌ಗಳಿವೆ. ಕೆಲವರು ಈತನ ಭಯದಿಂದ ದೂರು ನೀಡಿಲ್ಲ. ಇದೀಗ ಆರೋಪಿ ಬಂಧಿಸಲಾಗಿದೆ. ವಂಚನೆ ಅಥವಾ ಸುಲಿಗೆಗೊಳಗಾದ ವ್ಯಕ್ತಿಗಳು ದೂರು ನೀಡಬಹುದು. ●ಭೀಮಾಶಂಕರ್‌ ಗುಳೇದ್‌, ಪೂರ್ವ ವಿಭಾಗ ಡಿಸಿಪಿ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.