ಜೀವ ಹೀರಿದ ಲಾಸ್ಟ್‌ ಪೆಗ್‌

Team Udayavani, Jul 17, 2018, 11:15 AM IST

last-peg.jpg

ಬೆಂಗಳೂರು: ಬಾಟಲಿಯಲ್ಲಿ ಉಳಿದಿದ್ದ ಕೊನೆಯ ಪೆಗ್‌ ಹಂಚಿಕೊಳ್ಳುವ ವಿಚಾರದಲ್ಲಿ ಜಗಳವಾಗಿ, ಮದ್ಯದ ಅಮಲಿನಲ್ಲಿ ಸ್ನೇಹಿತನನ್ನೇ ಕೊಲೆಗೈದು ಪರಾರಿಯಾಗಿದ್ದ ಇಬ್ಬರನ್ನು ನಂದಿನಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಲ್ಲಿಕಾರ್ಜುನ ಅಲಿಯಾಸ್‌ ಮಲ್ಲಿ ಮತ್ತು ಮಹಾಲಿಂಗ ಬಂಧಿತ ಆರೋಪಿಗಳು. ಎರಡು ತಿಂಗಳ ಹಿಂದೆ ಓಲಾ ಕ್ಯಾಬ್‌ ಚಾಲಕ ಕಪಿನಿಗೌಡ ಅಲಿಯಾಸ್‌ ಕುಮಾರ್‌(35) ಎಂಬಾತನನ್ನು ಕೊಲೆಗೈದು ನಾಪತ್ತೆಯಾಗಿದ್ದರು. ಕೊಲೆಯಾದ ಕಪಿನಿಗೌಡ ಆರೋಪಿಗಳ ಸ್ನೇಹಿತನೇ ಆಗಿದ್ದು, ಮೇ 18ರಂದು ಆರೋಪಿಗಳು ಆತನನ್ನು ಉಸಿರುಗಟ್ಟಿಸಿ ಸಾಯಿಸಿದ್ದರು. ಕಾರಿನಲ್ಲಿಯೇ ಶವ ಇಟ್ಟು
ಪರಾರಿಯಾಗಿದ್ದರು.

ಘಟನೆ ಸಂಬಂಧ ನಂದಿನಿ ಲೇಔಟ್‌ ಠಾಣೆಯಲ್ಲಿ ಅಸ್ವಾಭಾವಿಕ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರಿಸಿದಾಗ
ಅದು ಕೊಲೆ ಎಂದು ತಿಳಿದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ತಿಳಿಸಿದ್ದಾರೆ.

ಸಿಂಗಲ್‌ ಪೆಗ್‌ ತಂದ ಆಪತ್ತು: ಸ್ನೇಹಿತರಾಗಿರುವ ಕಪಿನಿಗೌಡ, ಮಲ್ಲಿಕಾರ್ಜನ ಹಾಗೂ ಮಹಾಲಿಂಗ ಪ್ರತಿನಿತ್ಯ ರಾತ್ರಿ ಒಟ್ಟಾಗಿ ಮದ್ಯ ಸೇವಿಸುತ್ತಿದ್ದರು. ಅದರಂತೆ ಮೇ 18ರಂದು ಬಾರ್‌ ಒಂದರಿಂದ ಮದ್ಯದ ಬಾಟಲಿ ತಂದು ನಂದಿನಿ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ಮೂವರು ಓಲಾ ಕ್ಯಾಬ್‌ನಲ್ಲೇ ಕುಳಿತು ಮದ್ಯ ಸೇವನೆ ಮಾಡಿದ್ದಾರೆ. ಈ ವೇಳೆ ಬಾಟಲಿ ಖಾಲಿಯಾಗುತ್ತಾ ಕೊನೆಯ ಪೆಗ್‌
ಉಳಿದುಕೊಂಡಿದ್ದು, ಇದನ್ನು ಯಾರು ಕುಡಿಯಬೇಕು ಎಂಬ ವಿಚಾರದಲ್ಲಿ ಚರ್ಚೆ ನಡೆದು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಕೊನೆಗೆ ಮೂವರೂ ರಾಜಿಯಾಗಿ ಉಳಿದ ಒಂದು ಪೆಗ್‌ ಮದ್ಯವನ್ನು ಮೂವರ ಲೋಟಗಳಿಗೂ ಸಮನಾಗಿ ಹಂಚಲಾಗಿತ್ತು. ಆದರೆ, ಮಿತಿಮೀರಿ ಕುಡಿದಿದ್ದ ಕಪಿನಿಗೌಡ ಮೂರೂ ಲೋಟದ ಮದ್ಯವನ್ನು ಒಬ್ಬನೇ ಕುಡಿದಿದ್ದಾನೆ. ಮೊದಲೇ ಮದ್ಯದ ಅಮಲಿನೊಂದಿಗೆ
ಜಗಳದ ನಶೆಯಲ್ಲೂ ಇದ್ದ ಮಲ್ಲಿ ಕಾರ್ಜುನ ಮತ್ತು ಮಹಾಲಿಂಗ ಇನ್ನಷ್ಟು ಕೋಪಗೊಂಡು ಕಪಿನಿಗೌಡನ ಮೂಗು ಮತ್ತು ಬಾಯಿಯನ್ನು ಬಿಗಿಯಾಗಿ ಅದುಮಿ ಹಿಡಿದುಕೊಂಡಿದ್ದಾರೆ. ಇದರಿಂದ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲೇ ಮೃತಪಟ್ಟಿದ್ದ. ಇದನ್ನು ಗಮನಿಸಿದ ಇಬ್ಬರೂ ಕಪಿನಿಗೌಡನ ಮೃತದೇಹವನ್ನು ಕಾರಿನಲ್ಲೇ ಮಲಗಿಸಿ ಬಾಗಿಲು ಲಾಕ್‌ ಮಾಡಿ ಪರಾರಿಯಾಗಿದ್ದರು.

ಸ್ಥಳೀಯರಿಂದ ಮಾಹಿತಿ: ಓಲಾ ಕ್ಯಾಬ್‌ ಚಾಲಕನ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳ ಪರಿಶೀಲಿಸಿದ ಪೊಲೀಸರು ಕಾರಿನ ಬಾಗಿಲು ಲಾಕ್‌ ಆಗಿದ್ದು, ಒಳಗೆ ಗಾಳಿ ಹೋಗುತ್ತಿರಲಿಲ್ಲ. ಹೀಗಾಗಿ ಕುಡಿದ ಮತ್ತಿನಲ್ಲಿ ಮಲಗಿದ್ದಾಗಲೇ ಕಪಿನಿಪತಿ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ತಿಳಿದು ಅಸ್ವಾಭಾವಿಕ ಪ್ರಕರಣ ಕೂಡ ದಾಖಲಿಸಿಕೊಂಡಿದ್ದರು.

ಆದರೆ, ಕಪಿನಿಗೌಡ ಸಾವಿನ ಕುರಿತಂತೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಾಗ ಅದು ಅಸ್ವಾಭಾವಿಕ ಸಾವಲ್ಲ, ಕೊಲೆ ಎಂಬುದು ಗೊತ್ತಾಯಿತು. ಅದರಂತೆ ಜುಲೈ 3ರಂದು ಪ್ರತ್ಯೇಕವಾಗಿ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಕಾರಿನ ನಂಬರ್‌ ಆಧರಿಸಿ ಮತ್ತು ಕೆಲ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಸುಳಿವು ಪತ್ತೆಯಾಗಿದೆ.
ಬಳಿಕ ಅವರನ್ನು ಬಂಧಿಸಲಾಯಿತು ಎಂದು ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.