ವೈದ್ಯೆಗೆ ಜೀವ ಬೆದರಿಕೆ: ಪೇದೆ ಅಮಾನತು

Team Udayavani, Oct 25, 2018, 11:28 AM IST

blore-5.jpg

ಬೆಂಗಳೂರು: ಗಿರಿನಗರದ ಪೊಲೀಸ್‌ ಠಾಣೆಯ ಪೇದೆಯೊಬ್ಬರ ಮೇಲೆ ವೈದ್ಯೆ ಒಬ್ಬರಿಗೆ ನಿರಂತರ ಕಿರುಕುಳ ಹಾಗೂ ಗುಂಡಿಟ್ಟು ಕೊಲ್ಲುವ ಬೆದರಿಕೆಯೊಡ್ಡಿದ್ದ ಗಂಭೀರ ಆರೋಪ ಕೇಳಿ ಬಂದಿದೆ.

ದೂರುದಾರ ವೈದ್ಯೆ, ಆರೋಪಿತ ಪೊಲೀಸ್‌ ಪೇದೆ ಸುದರ್ಶನ್‌ ಅಸ್ಕಿ ಎಂಬುವವರ ವಿರುದ್ಧ ಜ್ಞಾನ ಭಾರತಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಈ ಕುರಿತು ಸುದರ್ಶನ್‌ ವಿರುದ್ಧ ಐಪಿಸಿ ಕಲಂ (354) 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಬೆಳವಣಿಗೆಗಳ ಮಧ್ಯೆಯೇ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ, “ಆರೋಪಿತ ಪೇದೆ ಸುದರ್ಶನ್‌ ಅಸ್ಕಿಯನ್ನು ವೃತ್ತಿಗೆ ಅಗೌರವ ತರುವ ರೀತಿ ನಡೆದುಕೊಂಡ ಕಾರಣದಲ್ಲಿ ಸೇವೆಯಿಂದ ಬುಧವಾರ ಅಮಾನತು ಗೊಳಿಸಿದ್ದಾರೆ”ಅಷ್ಟೇ ಅಲ್ಲದೆ, ಸುದರ್ಶನ್‌ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಎಸಿಪಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಆಪ್ತವಾಗಿ ನಡೆದುಕೊಳ್ಳುವಂತೆ ಕಿರುಕುಳ: ಕಳೆದ ನಾಲ್ಕು ವರ್ಷಗಳ ಹಿಂದೆ ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದೂರುದಾರೆ ಮಹಿಳಾ ವೈದ್ಯ ಕ್ಲಿನಿಕ್‌ ನಡೆಸುತ್ತಿದ್ದೆ. ಈ ವೇಳೆ ಚಿಕಿತ್ಸೆಗೆ ಎಂದು ಬಂದ ಪೇದೆ ಸುದರ್ಶನ್‌ ಅಸ್ಕಿ, ಮೊಬೈಲ್‌ ನಂಬರ್‌ ಪಡೆದು ಆಗಾಗ್ಗೆ ಕರೆ ಮಾಡುತ್ತಿದ್ದ, ಕೆಲವೇ ದಿನಗಳಲ್ಲಿ ಆತನ ವರ್ತನೆ ಬದಲಾಗಿ ರಾತ್ರಿ ವೇಳೆ ಕರೆ ಮಾಡುತ್ತಿದ್ದ. ಆತನ ವರ್ತನೆ ವಿಚಾರ ಪತಿಗೆ ತಿಳಿಸಿ ನಾಗದೇವನಹಳ್ಳಿಗೆ ವಿಳಾಸ ಬದಲಿಸಿದ್ದೆವು.

ನಮ್ಮ ಮನೆ ವಿಳಾಸ ಪತ್ತೆ ಹಚ್ಚಿದ ಸುದರ್ಶನ್‌ ಪುನ: ಕಿರುಕುಳ ನೀಡುತ್ತಿದ್ದ, ಆತನೊಂದಿಗೆ ಆಪ್ತವಾಗಿ ನಡೆದುಕೊಳ್ಳುವಂತೆ ಪೀಡಿಸುತ್ತಿದ್ದ, ಇಲ್ಲದಿದ್ದರೆ ಗುಂಡಿಟ್ಟು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದ ಎಂದು ವೈದ್ಯೆ ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳ ರಾಜೀ ಸಂಧಾನ: ವೈದ್ಯೆ ದೂರು ನೀಡುತ್ತಲೇ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಪ್ರಕರಣದಲ್ಲಿ ರಾಜೀಸಂಧಾನ ನಡೆಸಲು ಯತ್ನಿಸಿದ್ದರು. ಜತೆಗೆ, ಸುದರ್ಶನ್‌ನನ್ನು ಠಾಣೆಗೆ ಕರೆಸಿಕೊಂಡು ಮುಂದೆ ತಪ್ಪು ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಬರೆಸಿಕೊಂಡರೂ,ಸುಮ್ಮನಾಗದ ಸುದರ್ಶನ್‌ ಕೆಲ ಅ.16ರಂದು ಮನೆಗೆ ಬಂದು ಜಗಳವಾಡಿ ಪುನ: ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ .

ಗಿರಿನಗರ  ಠಾಣೆ ಪೊಲೀಸ್‌ ಪೇದೆ ಸುದರ್ಶನ್‌ ಅಸ್ಕಿಯನ್ನು ವೃತ್ತಿಗೆ ಚ್ಯುತಿ ತರುವಂತೆ ನಡೆದುಕೊಂಡ ಆರೋಪ ಕಾರಣಕ್ಕೆ ಅಮಾನತು ಮಾಡಲಾಗಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸಿಪಿಗೆ ಸೂಚಿಸಲಾಗಿದೆ.
  ಅಣ್ಣಾಮಲೈ, ಡಿಸಿಪಿ, ದಕ್ಷಿಣ ವಿಭಾಗ

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.