Udayavni Special

ಲೋಕಲ್‌ ಟೆಸ್ಟ್‌; ಆ.29ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ


Team Udayavani, Aug 3, 2018, 6:00 AM IST

ban03081801medn.jpg

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸ್ಥಳೀಯ ಮಟ್ಟದ ರಂಗ ತಾಲೀಮು ಹಾಗೂ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಪಾಲಿಗೆ ಮೈತ್ರಿ ಧರ್ಮ ಪಾಲನೆಯ ಅಗ್ನಿ ಪರೀಕ್ಷೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಮೊದಲ ಹಂತದಲ್ಲಿ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್‌ 29ರಂದು ಮತದಾನ ನಡೆಯಲಿದೆ.

ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಗುರುವಾರ (ಆ.2) ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಯಾಗಿದೆ. 2018ರ ಸೆಪ್ಟಂಬರ್‌ನಲ್ಲಿ ಅವಧಿ ಮುಕ್ತಾಯವಾಗಲಿರುವ ರಾಜ್ಯದ 22 ಜಿಲ್ಲೆಗಳ 29 ನಗರಸಭೆಗಳು, 53 ಪುರಸಭೆಗಳು ಹಾಗೂ 23 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಸೆಪ್ಟಂಬರ್‌ನಲ್ಲೇ ಅವಧಿ ಪೂರ್ಣಗೊಳ್ಳಲಿರುವ ಮೈಸೂರು, ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವಾರ್ಡ್‌ವಾರು ಮೀಸಲಾತಿ ವಿಚಾರ ಹೈಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ಈ ಮೂರು ಮಹಾನಗರ ಪಾಲಿಕೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್‌. ಶ್ರೀನಿವಾಸಾಚಾರಿ,  ಚುನಾವಣೆಗೆ ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚುನಾವಣೆ ಸಂಬಂಧ ಆಯಾ ಜಿಲ್ಲಾಧಿಕಾರಿಗಳು ಆ.10ರಂದು ಅಧಿಸೂಚನೆ ಹೊರಡಿಸುತ್ತಾರೆ. ಚುನಾವಣೆ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ತಕ್ಷಣದಿಂದ (ಆ.2) ಜಾರಿಗೆ ಬರಲಿದ್ದು, ಸೆ.1ರವರೆಗೆ ಅದು ಜಾರಿಯಲ್ಲಿರುತ್ತದೆ ಎಂದರು.

ರಾಜ್ಯ ಚುನಾವಣಾ ಆಯೋಗವು 2013ರಲ್ಲಿ ಒಟ್ಟು 208 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲಾಗಿತ್ತು. ಇವುಗಳ ಅವಧಿಯು 2018ರ ಸೆಪ್ಟೆಂಬರ್‌ ಮತ್ತು ಮಾರ್ಚ್‌ 2019ರಲ್ಲಿ ಮುಕ್ತಾಯವಾಗಲಿದೆ. ಹೀಗಾಗಿ ಎರಡು ಹಂತದಲ್ಲಿ ಚುನಾವಣೆ ನಡೆಸಬೇಕಾಗಿದೆ. ಈ ಮಧ್ಯೆ ಸರ್ಕಾರವು 26 ನಗರ ಸ್ಥಳೀಯ ಸಂಸ್ಥೆಗಳನ್ನು ಉನ್ನತೀಕರಿಸಿದೆ. ಅಲ್ಲದೆ, ನಾಲ್ಕು ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳನ್ನಾಗಿ ಪರಿವರ್ತಿಸಿದೆ. ಇವೂ ಸೇರಿ ಒಟ್ಟು 22 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆ. 29ರಂದು ಚುನಾವಣೆ ನಡೆಯಲಿದೆ. ಇನ್ನುಳಿದ ಏಳು ಮಹಾನಗರ ಪಾಲಿಕೆಗಳು ಮತ್ತು 100 ಸ್ಥಳೀಯ ಸಂಸ್ಥೆಗಳಿಗೆ ಮಾರ್ಚ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಪ್ರಸ್ತುತ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಗೆ ಆ.10ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಸಲು ಆ.17 ಕೊನೆ ದಿನ. ಆ.18ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಆ.20 ಕೊನೆಯ ದಿನವಾಗಿದೆ. ಆ.29ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಸಂದರ್ಭ ಬಂದರೆ ಆ.31ರಂದು ಮರು ಮತದಾನ ನಡೆಸಲಾಗುವುದು. ಸೆ.1ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

36 ಲಕ್ಷ ಮತದಾರರು: 29 ನಗರಸಭೆಗಳ 927, 53 ಪುರಸಭೆಗಳ 1,247 ಹಾಗೂ 23 ಪಟ್ಟಣ ಪಂಚಾಯಿತಿಗಳ 400 ಸೇರಿ ಒಟ್ಟು 2,574 ವಾರ್ಡ್‌ಗಳಲ್ಲಿ ಚುನಾವಣೆ  ನಡೆಯಲಿದ್ದು, ಇದಕ್ಕೆ ಕ್ರಮವಾಗಿ 2,067, 1,422 ಮತ್ತು 408 ಸೇರಿ ಒಟ್ಟು 3,897 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 105 ನಗರ ಸ್ಥಳೀಯ ಸಂಸ್ಥೆಗಳಲ್ಲಿ 17.96 ಲಕ್ಷ ಪುರುಷರು, 18.07 ಲಕ್ಷ ಮಹಿಳೆಯರು, 354 ಇತರರು ಸೇರಿ 36.06 ಲಕ್ಷ ಮತದಾರರಿದ್ದಾರೆ. ಮತದಾನಕ್ಕೆ ಇವಿಎಂಗಳನ್ನು ಬಳಸಲಾಗುತ್ತಿದ್ದು, 4,640 ಬ್ಯಾಲೆಟ್‌ ಯೂನಿಟ್‌, 4,940 ಕಂಟ್ರೋಲ್‌ ಯೂನಿಟ್‌ಗಳನ್ನು ಬಳಸಲಾಗುತ್ತಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ಚುನಾವಣಾ ವೇಳಾಪಟ್ಟಿ
ಅಧಿಸೂಚನೆ, ನಾಮಪತ್ರ ಸಲ್ಲಿಕೆ ಆರಂಭ: ಆ.10
ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಆ.17
ನಾಮಪತ್ರ ಪರಿಶೀಲನೆ: ಆ.18
ನಾಮಪತ್ರ ವಾಪಸ್‌ ಪಡೆಯಲು ಕೊನೆ ದಿನ: ಆ.20
ಮತದಾನ: ಆ.29 (ಬೆ.7ರಿಂದ ಸಂಜೆ 5)
ಮರುಮತದಾನ (ಅವಶಕ್ಯತೆ ಇದ್ದಲ್ಲಿ): ಆ.31
ಮತ ಎಣಿಕೆ: ಸೆ.1
ಚುನಾವಣಾ ಪ್ರಕ್ರಿಯೆ ಮುಕ್ತಾಯ: ಸೆ.1

ಒಟ್ಟು ಸ್ಥಳೀಯ ಸಂಸ್ಥೆಗಳು: 105
ನಗರಸಭೆ:29
ಪುರಸಭೆ: 53
ಪಟ್ಟಣ ಪಂ.: 23
ಒಟ್ಟು ವಾರ್ಡ್‌ಗಳು: 2,574
ಒಟ್ಟು ಮತಗಟ್ಟೆ: 3,897
ಒಟ್ಟು ಮತದಾರರು: 36,03,691
ಪುರುಷರು: 17,96,001
ಮಹಿಳೆಯರು: 18,08,336
ಇತರೆ: 354
ಇವಿಎಂಗಳ ಬಳಕೆ
ಬ್ಯಾಲೆಟ್‌ ಯೂನಿಟ್‌: 4,640
ಕಂಟ್ರೋಲ್‌ ಯೂನಿಟ್‌: 4,940

ವಿವಿಪ್ಯಾಟ್‌ ಬಳಕೆ ಇಲ್ಲ
ಇವಿಎಂಗಳ ಬಗ್ಗೆ ರಾಷ್ಟ್ರವ್ಯಾಪಿ ಸಾಕಷ್ಟು ಅನುಮಾನಗಳು, ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಧಾನಸಭೆ ಚುನಾವಣೆಗಳಲ್ಲಿ ಇವಿಎಂಗಳ ಜೊತೆಗೆ ಮತದಾನದ ಖಾತರಿಗೆ ವಿವಿಪ್ಯಾಟ್‌ (ಮತದಾನ ದೃಢೀಕರಣ ಚೀಟಿ) ಬಳಸಲಾಗುತ್ತಿದೆ. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ವಿವಿಪ್ಯಾಟ್‌ ಬಳಸಲಾಗಿತ್ತು. ಆದರೆ, ಈಗ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗಳನ್ನು ಮಾತ್ರ ಬಳಸಲಾಗುತ್ತಿದ್ದು, ವಿವಿಪ್ಯಾಟ್‌ ಬಳಸಲಾಗುತ್ತಿಲ್ಲ. ಕೇಂದ್ರ ಚುನಾವಣಾ ಆಯೋಗ ನೀಡಿರುವ ಮಾಹಿತಿಯಂತೆ, ರಾಜ್ಯ ಚುನಾವಣಾ ಆಯೋಗವು ವಿವಿಪ್ಯಾಟ್‌ ಬಳಸಬೇಕೆಂಬುದು ಕಡ್ಡಾಯವೇನಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿವಿಪ್ಯಾಟ್‌ ಬಳಸದಿರಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಇವಿಎಂಗಳ ಬಗ್ಗೆ ಆಯೋಗಕ್ಕೆ ನಂಬಿಕೆ ಇದೆ ಎಂದು ಆಯೋಗದ ಹಿರಿಯ ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ.

ಮೊದಲ ಬಾರಿಗೆ ನೋಟಾ ಬಳಕೆ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಇದೇ ಮೊದಲ ಬಾರಿಗೆ ನೋಟಾ ಬಳಸಲಾಗುತ್ತಿದೆ. ಮತದಾರ ತನ್ನ ಇಚ್ಛೆಯಂತೆ ಯಾರೊಬ್ಬರಿಗೂ ತನ್ನ ಮತ ನೀಡಲು ಇಚ್ಛೆ ಇರುವುದಿಲ್ಲ ಎಂಬ ತನ್ನ ತೀರ್ಮಾನವನ್ನು ರಹಸ್ಯವಾಗಿ ಮತ ಚಲಾಯಿಸುವ ಮೂಲಕ ವ್ಯಕ್ತಪಡಿಸಲು ಅನುಕೂಲವಾಗುವಂತೆ ಇವಿಎಂನ ಅಭ್ಯರ್ಥಿಗಳ ಪ್ಯಾನೆಲ್‌ನಲ್ಲಿ ಕೊನೆಯ ಅಭ್ಯರ್ಥಿಯ ನಂತರದ ಪ್ಯಾನೆಲ್‌ನಲ್ಲಿ ನೋಟಾ ಅಥವಾ ಮೇಲ್ಕಂಡ ಯಾರೂ ಅಲ್ಲ ಎಂದು ಮುದ್ರಿಸಲಾಗಿರುತ್ತದೆ.

ಭಾವಚಿತ್ರವಿರುವ ಮತಪತ್ರ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಂದೇ ವಾರ್ಡ್‌ನಲ್ಲಿ ಒಂದೇ ಹೆಸರಿನ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸುವ ಸಂದರ್ಭಗಳಿರುವುದರಿಂದ ಅಭ್ಯರ್ಥಿಗಳನ್ನು ಗುರುತಿಸಲು ಮತಪತ್ರದಲ್ಲಿ ಅವರ ಹೆಸರಿನ ಮುಂದೆ ಅವರ ವೃತ್ತಿ ಅಥವಾ ವಿಳಾಸ ತೋರಿಸಲಾಗುತ್ತಿತ್ತು, ಆದರೂ ಮತದಾರರಿಗೆ ಗೊಂದಲ ಉಂಟಾಗುವುದನ್ನು ತಪ್ಪಿಸಲು ಮತಪತ್ರದಲ್ಲಿ ಎಲ್ಲ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಭಾವಚಿತ್ರ ಮುದ್ರಿಸಲಾಗಿರುತ್ತದೆ.

ಪರಿಷ್ಕೃತ ಪ್ರಮಾಣ ಪತ್ರ
ಮತದಾರನಿಗೆ ಅಭ್ಯರ್ಥಿಯ ಪೂರ್ವಾಪರಗಳನ್ನು ತಿಳಿದುಕೊಳ್ಳಲು ಸ್ಪರ್ಧಿಸುವ ಪ್ರತಿಯೊಬ್ಬರ ಅಭ್ಯರ್ಥಿಯು ತನ್ನ ಹಿನ್ನೆಲೆ, ಚರಾಸ್ತಿ ಮತ್ತು ಸ್ಥಿರಾಸ್ತಿಗಳ ವಿವರಗಳು ಇರುವ ಪ್ರಮಾಣಪತ್ರ ಸಲ್ಲಿಸಬೇಕಾಗಿತ್ತು. ಅದರ ಜತೆಗೆ ಈಗ ತನ್ನ ಸ್ವವಿವರ, ವಿದ್ಯಾರ್ಹತೆ, ಆದಾಯದ ಮೂಲಗಳು ತಿಳಿಸಲು ಪರಿಸ್ಕೃತ ನಮೂನೆಯಲ್ಲಿ ಅಫಿಡವಿಟ್‌ ಸಲ್ಲಿಸಬೇಕು.

ಚುನಾವಣಾ ವೆಚ್ಚದ ಮಿತಿ
2011ರ ಸರ್ಕಾರದ ಅಧಿಸೂಚನೆಯಲ್ಲಿ ನಗರ  ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಗರಿಷ್ಠ ಮಿತಿ ನಿಗದಿಪಡಿಸಲಾಗಿದೆ. ಅದರಂತೆ, ನಗರಸಭೆಯ ಅಭ್ಯರ್ಥಿಗಳಿಗೆ ಗರಿಷ್ಠ 2 ಲಕ್ಷ, ಪುರಸಭೆ ಅಭ್ಯರ್ಥಿಗಳಿಗೆ 1.50 ಲಕ್ಷ ಹಾಗೂ ಪಟ್ಟಣ ಪಂಚಾಯಿತಿ ಅಭ್ಯರ್ಥಿಗೆ 1 ಲಕ್ಷ ರೂ. ಗರಿಷ್ಟ ವೆಚ್ಚದ ಮಿತಿ ನಿಗದಿಪಡಿಸಲಾಗಿದೆ.

40 ಸಾವಿರ ಚುನಾವಣಾ ಸಿಬ್ಬಂದಿ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಗೆ ಪೊಲೀಸ್‌ ಸಿಬ್ಬಂದಿ ಸೇರಿದಂತೆ ಒಟ್ಟು 36ರಿಂದ 40 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೇ ಏಳು ಮಂದಿ ಹಿರಿಯ ಐಎಎಸ್‌ ಅಧಿಕಾರಿಗಳನ್ನು ವಿಶೇಷ ವೀಕ್ಷಕರನ್ನಾಗಿ, ಹಿರಿಯ ಶ್ರೇಣಿಯ 25 ಮಂದಿ ಕೆಎಎಸ್‌ ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರನ್ನಾಗಿ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ 30 ಮಂದಿ ಜಂಟಿ ನಿಯಂತ್ರಕರು ಹಾಗೂ ಉಪ ನಿಯಂತ್ರಿಕರನ್ನು ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ.

ಭಾವಚಿತ್ರವಿರುವ ಮತದಾರರ ಚೀಟಿ
ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಮತದಾರನಿಗೆ ಅವರ ವಾರ್ಡಿನ ಸಂಖ್ಯೆ, ಮತದಾರರ ಪಟ್ಟಿಯ ಭಾಗದ ಸಂಖ್ಯೆ, ಮತದಾರ ಪಟ್ಟಿಯ ಕ್ರಮ ಸಂಖ್ಯೆ, ಮತಗಟ್ಟೆ ಸಂಖ್ಯೆ, ಹೆಸರು, ವಿಳಾಸ ಮತ್ತು ಮತದಾನದ ದಿನಾಂಕ, ಮತದಾನದ ಸಮಯ ಇತ್ಯಾದಿ ಮಾಹಿತಿಗಳಿರುವ ಭಾವಚಿತ್ರವಿರುವ ಮತದಾರರ ಚೀಟಿ ವಿತರಿಸಲು ಆಯೋಗ ಉದ್ದೇಶಿಸಿದೆ. ಜಿಲ್ಲಾಧಿಕಾರಿಗಳು ಈ ಮತದಾರ ಚೀಟಿ ಮುದ್ರಿಸಿ ಮತಗಟ್ಟೆ ಅಧಿಕಾರಿಗಳ ಮೂಲಕ ಸಂಬಂಧಪಟ್ಟ ಮತದಾರರಿಗೆ ಹಂಚಲು ಕ್ರಮ ಕೈಗೊಳ್ಳುವರು.

22 ಜಿಲ್ಲೆಗಳಲ್ಲಿ ಚುನಾವಣೆ
ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಕೊಡಗು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ, ಯಾದಗಿರಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿಲ್ಲ. ವಿಜಯಪುರ ಹಾಗೂ ಬೀದರ ಜಿಲ್ಲೆಗಳಲ್ಲಿ ಕೇವಲ ಒಂದೊಂದೇ ಪುರಸಭೆಗೆ ಚುನಾವಣೆ ನಡೆಯುತ್ತಿದೆ.

ಟಾಪ್ ನ್ಯೂಸ್

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.