ಟೀ ಕುಡಿಯಲು ಹೋಗಿ 10 ಲಕ್ಷ ಕಳ್ಕೊಂಡ್ರು!

Team Udayavani, Dec 14, 2021, 12:25 PM IST

theft from car

Representative Image used

ಬೆಂಗಳೂರು: ಟೀ ಕುಡಿಯಲು ಹೋದ ವೇಳೆ ಕಾರಿನಲ್ಲಿಟ್ಟದ 10 ಲಕ್ಷ ನಗದನ್ನು ದುಷ್ಕರ್ಮಿಗಳು ಲಪಟಾಯಿಸಿ ಪರಾರಿಯಾಗಿರುವ ಘಟನೆ ಚಂದ್ರಾಲೇಔಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿಯ ನಿವಾಸಿ ಶ್ರೀನಿವಾಸನ್‌ ಹಣ ಕಳೆದುಕೊಂಡ ವ್ಯಕ್ತಿ. ಡಿ. 9ರಂದು ಪ್ರಕರಣ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಶ್ರೀನಿವಾಸನ್‌ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕೊಂಡಿರುವ ಚಂದ್ರಾಲೇಔಟ್‌ ಪೊಲೀಸರು, ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ. ಹಣ ಕಳೆದುಕೊಂಡಿರುವ ಶ್ರೀನಿವಾಸ್‌ ಅವರು ಚಂದ್ರಲೇಔಟ್‌ನಲ್ಲಿ ಜಯಪ್ರಕಾಶ್‌ ಶೆಟ್ಟಿ ಎಂಬುವವರಿಗೆ ಸೇರಿದ ಅಪಾರ್ಟ್‌ ಮೆಂಟ್‌ನಲ್ಲಿ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಯಪ್ರಕಾಶ್‌ ಶೆಟ್ಟಿ ಅವರು ತಮ್ಮ ಮೊಮ್ಮಗಳ ವಿವಾಹ ಸಮಾರಂಭಕ್ಕೆ ಹಣದ ಅವಶ್ಯಕತೆಯಿದ್ದ ಹಿನ್ನೆಲೆಯಲ್ಲಿ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಬರುವಂತೆ ಡಿ.9ರಂದು ಸೂಚಿಸಿದ್ದರು. ಅವರ ಸೂಚನೆಯಂತೆ ಜಯಪ್ರಕಾಶ್‌ ಶೆಟ್ಟಿ ಅವರ ಸ್ಕೋಡಾ ಕಾರಿನಲ್ಲಿ ಚಾಲಕನೊಂದಿಗೆ ಶ್ರೀನಿವಾಸ್‌ ಅವರು ಚಂದ್ರಲೇಔಟ್‌ನಲ್ಲಿರುವ ಎರಡು ಬ್ಯಾಂಕ್‌ಗಳಿಗೆ ತೆರಳಿ ಒಟ್ಟು ಹತ್ತು ಲಕ್ಷ ರೂ. ಡ್ರಾ ಮಾಡಿಕೊಂಡು ಮನೆಗೆ ಹಿಂತಿರುಗುತ್ತಿದ್ದರು.

ಇದನ್ನೂ ಓದಿ: ಬೀದರನಲ್ಲಿ ರಾಜ್ಯ ಯುವಜನ ಮೇಳ ನಡೆಯಲಿ

ಈ ವೇಳೆ ಅತ್ತಿಗುಪ್ಪೆ ಬಳಿ ಕಾರಿನ ಟೈಯರ್‌ ಪಂಚರ್‌ ಆಗಿತ್ತು. ಹೀಗಾಗಿ ಟೈಯರ್‌ ಬದ ಲಾವಣೆ ಮಾಡಿ ಕೊಂಡು ಚಂದ್ರ ಲೇಔಟ್‌ 60 ಅಡಿರಸ್ತೆ, ಸ್ಪಿರಿಟ್‌ ಜಂಕ್ಷನ್‌ ಬಳಿ ಕಾರನ್ನು ರಸ್ತೆ ಬದಿ ನಿಲುಗಡೆ ಮಾಡಿ ಚಾಲಕನ ಜತೆಗೆ ಶ್ರೀನಿವಾಸ್‌ ಟೀ ಕುಡಿಯಲು ಹೋಗಿದ್ದರು.

ಇದನ್ನು ಗಮನಿಸಿದ ಖದೀಮರು, ಆ ವೇಳೆ ಕಾರಿನ ಮಂಭಾಗದ ಬಾಗಿಲಿನ ಗ್ಲಾಸ್‌ ಒಡೆದ ಕಳ್ಳರು 10 ಲಕ್ಷ ರೂ. ಹಣವಿದ್ದ ಬ್ಯಾಗ್‌ ನೊಂದಿಗೆ ಪರಾರಿಯಾಗಿದ್ದಾರೆ. ಶ್ರೀನಿವಾಸ್‌ ಟೀ ಕುಡಿದು ವಾಪಾಸಾದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಸುಪಾಸಿನಲ್ಲಿರುವ ಸಿಸಿ ಕ್ಯಾಮರಾ ಪರಿಶೀಲಿಸಿದ್ದು ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.