ಬೆಳಗಾವಿಯ ಅಶೋಕ ಚಂದರಗಿಗೆ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ

Team Udayavani, Feb 19, 2018, 6:55 AM IST

Ashok-yanka.jpg

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ನೀಡುವ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಗಡಿ ಭಾಗದಲ್ಲಿ ಕನ್ನಡಮ್ಮನ ಸೇವೆ ಮಾಡುತ್ತಿರುವ ಕನ್ನಡಪರ ಹೋರಾಟಗಾರ ಬೆಳಗಾವಿಯ ಅಶೋಕ ಯಂಕಪ್ಪ ಚಂದರಗಿ ಅವರು ಕನ್ನಡ ಚಳುವಳಿ ವೀರ ಸೇನಾನಿ “ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ದತ್ತಿ ಪ್ರಶಸ್ತಿಗಳ ಆಯ್ಕೆ ಸಮಿತಿ ಈ ಆಯ್ಕೆ ಮಾಡಿದೆ. “ಫಾದರ್‌ ಚಸರಾ ಕನ್ನಡ ಸಂಸ್ಕೃತಿ ಪ್ರಶಸ್ತಿ’ಗೆ  ಚಿಂತಕ ಎಫ್.ಎಂ.ನಂದಗಾಂವ್‌  ಮತ್ತು ಡಾ.ಸಿ.ಎಸ್‌.ದ್ವಾರಕನಾಥ್‌ ಮತ್ತು  “ಮಾಹಿತಿ ಹಕ್ಕು ತಜ್ಞ ರಾಜಶೇಖರ ದತ್ತಿ ಪ್ರಶಸ್ತಿ’ಗೆ ಮಾಹಿತಿ ಹಕ್ಕು ಹೋರಾಟಗಾರ ಎನ್‌.ಹನುಮೇಗೌಡ ಅವರು ಆಯ್ಕೆಯಾಗಿದ್ದಾರೆ.

ಹಿರಿಯ ಲೇಖಕಿ “ಎ.ಪಂಕಜ ದತ್ತಿ ಪ್ರಶಸ್ತಿ’ಗೆ ಕವಿ ಮತ್ತು ಪತ್ರಕರ್ತೆ ಪ್ರತಿಭಾ ನಂದಕುಮಾರ್‌ ಭಾಜನರಾಗಿದ್ದಾರೆ.
ಈ ಬಗ್ಗೆ ಮಾಹಿತಿಯನ್ನು ನೀಡಿದ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌, ಕನ್ನಡ ಚಳುವಳಿ ವೀರ ಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಯು 25 ಸಾವಿರ ರೂ. ಫಾದರ್‌ ಚಸರಾ ಕನ್ನಡ ಸಂಸ್ಕೃತಿ ಪ್ರಶಸ್ತಿ 15 ಸಾವಿರ ರೂ. ಮತ್ತು ಮಾಹಿತಿ ಹಕ್ಕು ತಜ್ಞ ಜೆ.ಎಂ. ರಾಜಶೇಖರ ದತ್ತಿ ಪ್ರಶಸ್ತಿ 5 ಸಾವಿರ ನಗದು ಮತ್ತು ಪ್ರಶಸ್ತಿ ಫ‌ಲಕವನ್ನು ಒಳಗೊಂಡಿದೆ. ಅಲ್ಲದೆ  ಹಿರಿಯ ಲೇಖಕಿ ಎ.ಪಂಕಜ ದತ್ತಿ ಪ್ರಶಸ್ತಿ 10 ಸಾವಿರ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಹೇಳಿದರು.

“ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ ಮಾರ್ಚ್‌ 18 ರಂದು ಮತ್ತು ಏಪ್ರಿಲ್‌ 20 ರಂದು “ಮಾಹಿತಿ ಹಕ್ಕು ತಜ್ಞ ರಾಜಶೇಖರ ದತ್ತಿ ಪ್ರಶಸ್ತಿ’  ಮತ್ತು “ಎ.ಪಂಕಜ ದತ್ತಿ ಪ್ರಶಸ್ತಿ’ ಗಳನ್ನು ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಕಸಾಪದ ಗೌರವ ಕಾರ್ಯದರ್ಶಿ ವಾ.ಚ.ಚನ್ನೇಗೌಡ ತಿಳಿಸಿದ್ದಾರೆ.

ಕಸಾಪದಲ್ಲಿ ಪ್ರಶಸ್ತಿ ಪ್ರದಾನ.
ಮಾರ್ಚ್‌ 22 ರಂದು ಕನ್ನಡ ಚಳುವಳಿ ವೀರ ಸೇನಾನಿ ಮ.ರಾಮಮೂರ್ತಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರದ ಹಿನ್ನೆಲೆ ಯಲ್ಲಿ ಅವರನ್ನು ನೆನೆಯುವ ಕೆಲಸಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ಮುಂದಾಗಿದೆ.ಅಂದು ಸಂಜೆ ಕನ್ನಡ ಸಾಹಿತ್ಯ ಪರಿಷತ್‌ ನಲ್ಲಿ ನಡೆಯುವ ಸಮಾರಂಭದಲ್ಲಿ ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿಅವರು ಬೆಳಗಾವಿಯ ಅಶೋಕ ಯಂಕಪ್ಪ ಚಂದರಗಿ ಅವರಿಗೆ ಮ.ರಾಮಮೂರ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಟಾಪ್ ನ್ಯೂಸ್

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.