ಹುಚ್ಚ, ಮೂರ್ಖ, ಅಜ್ಞಾನಿ; ಏನನ್ನಬೇಕು?

Team Udayavani, Nov 17, 2019, 3:07 AM IST

huchcha

ಬೆಂಗಳೂರು: “ಜವಾಬ್ದಾರಿ ಸ್ಥಾನದಲ್ಲಿರುವ ನಾನು, ಎಷ್ಟೇ ಒತ್ತಡ ಬಂದರೂ ನನ್ನ ಕ್ಷೇತ್ರದಲ್ಲೇ ಸರ್ಕಾರಿ ಭೂಮಿ ಕಬಳಿಕೆಗೆ ಬಿಟ್ಟಿಲ್ಲ. ಅರ್ಜಿಗಳ ಸಮಿತಿಯ ಅಧ್ಯಕ್ಷನಾಗಿಯೂ ಸರ್ಕಾರಿ ಭೂಮಿ ಉಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಹೀಗಿರುವಾಗ ನಾನು ಭೂಕಬಳಿಕೆಗೆ ಸಹಕಾರ ನೀಡಿದ್ದೇನೆ ಎಂದು ಆರೋಪಿಸಿರುವ ಎನ್‌.ಆರ್‌.ರಮೇಶ್‌ ಅವರನ್ನು ಹುಚ್ಚ, ಮೂರ್ಖ, ಅಜ್ಞಾನಿ… ಏನೆನ್ನಬೇಕೋ ಅರ್ಥವಾಗುತ್ತಿಲ್ಲ’.

“ಮುನ್ನೂರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತು ಕಬಳಿಸಲು ಯತ್ನಿಸುತ್ತಿರುವ ಭೂಗಳ್ಳರಿಗೆ ಕೃಷ್ಣಾ ರೆಡ್ಡಿ ಸಹಕಾರ ನೀಡಿದ್ದಾರೆ’ ಎಂದು ಆರೋಪಿಸಿರುವ ಬಿಜೆಪಿ ನಗರ ಜಿಲ್ಲಾ ವಕ್ತಾರ ಎನ್‌.ಆರ್‌.ರಮೇಶ್‌ ಮೇಲಿನ ಆಕ್ರೋಶವನ್ನು ವಿಧಾನಸಭೆ ಉಪ ಸಭಾಧ್ಯಕ್ಷ ಕೃಷ್ಣಾರೆಡ್ಡಿ ಅವರು ಹೊರಹಾಕಿದ ಪರಿಯಿದು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌.ಆರ್‌.ರಮೇಶ್‌ ವಿರುದ್ಧ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸುವ ಜತೆಗೆ ಕ್ರಿಮಿನಲ್‌ ಹಾಗೂ ಮಾನಹಾನಿ ಮೊಕದ್ದಮೆ ಸಹ ದಾಖಲಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಉಪ ಸಭಾಧ್ಯಕ್ಷ ಸ್ಥಾನದಿಂದ ನನ್ನನ್ನು ಇಳಿಸುವ ಸಂಚು ನಡೆಯುತ್ತಿದೆ. ಇದರ ಭಾಗವಾಗಿಯೇ ಇಂತಹ ಆರೋಪ ಮಾಡಿರಬಹುದು. ಆದರೆ, ಸಮಯ ಬಂದಾಗ ನಾನೇ ರಾಜೀನಾಮೆ ನೀಡುತ್ತೇನೆ. ಇಂತಹ ಆರೋಪಗಳಿಗೆ ಹೆದರುವುದಿಲ್ಲ ಎಂದ ಅವರು, ಇಂತಹವರನ್ನೂ ಬಿಜೆಪಿ ವಕ್ತಾರರನ್ನಾಗಿ ಮಾಡಿರುವುದು ದುರಂತ ಎಂದರು. ಬನಶಂಕರಿ 3ನೇ ಹಂತದ ಭವಾನಿ ಹೌಸಿಂಗ್‌ ಕೋ ಆಪರೇಟೀವ್‌ ಸೊಸೈಟಿ ಲಿಮಿಟೆಡ್‌, ಜನವರಿ ತಿಂಗಳಲ್ಲಿ ಅರ್ಜಿಗಳ ಸಮಿತಿಗೆ ಮನವಿ ಸಲ್ಲಿಸಿದ್ದು, ತಮ್ಮ ಲೇ ಔಟ್‌ನಲ್ಲಿ ಪಾಲಿಕೆಯವರು ನ್ಯಾಯಾಲಯದ ತಡೆಯಾಜ್ಞೆ ಹಾಗೂ ಆದೇಶ ಉಲ್ಲಂಘಿಸಿ ಅಕ್ರಮವಾಗಿ ಕಾಮಗಾರಿ ನಡೆಸುತ್ತಿದ್ದಾರೆ.

ಅನ್ಯಾಯ ಸರಿಪಡಿಸಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಸಮಿತಿಗೆ ಸಲ್ಲಿಕೆಯಾಗುವ ಎಲ್ಲ ಅರ್ಜಿಗಳಂತೆ ಸದರಿ ಅರ್ಜಿಯನ್ನು ಫೆಬ್ರವರಿ ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆ, ಬಿಡಿಎ, ಬಿಬಿಎಂಪಿ ಮಾಹಿತಿ ನೀಡಿದೆ. ಪ್ರಕರಣದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಿ ಅರ್ಜಿ ಕುರಿತು ತೀರ್ಮಾನಿಸಲಾಗುವುದು. ಸರ್ಕಾರದ ಎಲ್ಲ ನಿಯಮ ಸೊಸೈಟಿಗಳು ಪಾಲಿಸಬೇಕು. ನಾನು ಸರ್ಕಾರಿ ಸ್ವತ್ತು ರಕ್ಷಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದೇನೆ. ಯಾವ ಅಧಿಕಾರಿಯ ಮೇಲೂ ಒತ್ತಡ ಹಾಕಿಲ್ಲ. ಆದರೂ ನನ್ನ ಮೇಲೆ ವಿನಾಕಾರಣ ಆರೋಪ ಮಾಡಲಾಗಿದೆ ಎಂದು ದೂರಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.