ಮಹಾದಾಯಿ : ಪ್ರಧಾನಿ ನಿಲುವು ಸ್ಪಷ್ಟಪಡಿಸಲು ಆಗ್ರಹ
Team Udayavani, Feb 2, 2018, 6:45 AM IST
ಬೆಂಗಳೂರು: ಕಳಸಾ ಬಂಡೂರಿ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ.ಮಹಾದಾಯಿ ವಿಷಯದಲ್ಲಿ ಪ್ರಧಾನಿ ಇದುವರೆಗೂ ತುಟಿ ಬಿಚ್ಚದೇ ಇರುವುದು ಆಶ್ಚರ್ಯ ತಂದಿದೆ.
ಫೆ. 4ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಈ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಜನ ಸಾಮಾನ್ಯರ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೇಳಿದ್ದಾರೆ.
ಕಳಸಾ ಬಂಡೂರಿ ಯೋಜನೆ ಕಾರ್ಯಾರಂಭಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ಫ್ರೀಡಮ್ ಪಾರ್ಕ್ನಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪ್ರಧಾನಿಯವರು ವಿವಾದ ಬಗೆಹರಿಸಲು ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.