ಬೀದಿ ವ್ಯಾಪಾರಿಗಳ ಸೆಳೆಯಲು ಮೈ ಭಿ ಡಿಜಿಟಲ್‌

Team Udayavani, Feb 27, 2023, 11:03 AM IST

TDY-3

ಬೆಂಗಳೂರು: ಪ್ರತಿದಿನ ನಗದು ರೂಪದಲ್ಲೇ ವ್ಯಾಪಾರ ವಹಿವಾಟು ನಡೆಸುವ ಬೀದಿ ಬದಿ ವ್ಯಾಪಾರಿಗಳನ್ನು ಡಿಜಿಟಲ್‌ ವ್ಯಾಪಾರ ವಹಿವಾಟಿನತ್ತ ಸೆಳೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಜೀವನೋಪಾಯ ಇಲಾಖೆ ಹೆಜ್ಜೆಯಿರಿಸಿದೆ.

ಇದಕ್ಕಾಗಿಯೇ “ಮೈ ಭಿ ಡಿಜಿಟಲ್‌’ ಯೋಜನೆ ರೂಪಿಸಿದ್ದು, ಈ ಕುರಿತು ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಸಾಲ ಮತ್ತು ಸೌಲಭ್ಯಗಳನ್ನು ಪಡೆದಿರುವ ಎಲ್ಲ ಅರ್ಹ ಬೀದಿ ವ್ಯಾಪಾರಿಗಳು ಡಿಜಿಟಲ್‌ನಲ್ಲಿ ವ್ಯವಹರಿಸುವ ಸಂಬಂಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವತ್ತ ಇಲಾಖೆ ಆಲೋಚನೆ ನಡೆಸಿದೆ.

ಇತ್ತೀಚೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿಗಳ ಮತ್ತು ಕೇಂದ್ರ ಹಣಕಾಸು ಮಂತ್ರಾಲಯ ಕಾಯದರ್ಶಿಗಳ ಮಟ್ಟದಲ್ಲಿ ನಡೆದ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ. ಪಿ-ಎಂ ಸ್ವನಿಧಿ ಯೋಜನೆಯಡಿ ಈಗಾಗಲೇ ಸಾಲ ಸೌಲಭ್ಯ ಪಡೆದಿರುವ ಬೀದಿ ಬದಿ ವ್ಯಾಪಾರಿಗಳನ್ನು ಡಿಜಿಟಲ್‌ನಲ್ಲೇ ವ್ಯವಹಾರ ನಡೆಸುವ ಕುರಿತಂತೆ ಸಮಾಲೋಚನೆ ಕೂಡ ನಡೆದಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕ್ಯೂಆರ್‌ ಕೋಡ್‌ ಒದಗಿಸುವುದು: ಪಿಎಂ ಸ್ವ-ನಿಧಿಯಿಂದ ಸಮೃದ್ಧಿ ಮೇಳ ಆಯೋಜಿಸುವ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳು “ಮೈ ಭಿ ಡಿಜಿಟಲ್‌’ ಕ್ಯಾಂಪ್‌ ಅನ್ನು ಈ ಮೇಳದೊಂದಿಗೆ ಆಯೋಜಿಸುವಂತೆ ಸೂಚಿಸಲಾಗಿದೆ. ಜತೆಗೆ ಡಿಜಿಟಲ್‌ ವ್ಯವಹಾರ ಮತ್ತು ಅನುಕೂಲತೆ ಕುರಿತಂತೆ ಬೀದಿ ಬದಿ ವ್ಯಾಪಾರಿಗಳಿಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಅರಿವು ಮೂಡಿಸುವಂತೆ ಸಲಹೆ ನೀಡಲಾಗಿದೆ. ಜತೆಗೆ ಎಲ್ಲ ಪ್ರಮುಖ ಬ್ಯಾಂಕ್‌ಗಳ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಡಿಜಿಟಲ್‌ ವ್ಯವಹಾರ ನಡೆಸಲು ಕ್ಯೂಆರ್‌ ಕೋಡ್‌ ಒದಗಿಸಲು ಕ್ರಮ ವಹಿಸುಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಪಿ-ಎಂ ಸ್ವನಿಧಿ ಬಳಕೆಯಲ್ಲಿ 6ನೇ ಸ್ಥಾನ : ಸಿಲಿಕಾನ್‌ ಸಿಟಿ ಬೆಂಗಳೂರು ವ್ಯಾಪ್ತಿಯಲ್ಲಿ ಸುಮಾರು 1.5 ಲಕ್ಷ ಮಂದಿ ಬೀದಿಬದಿ ವ್ಯಾಪಾರಿಗಳು ಇದ್ದಾರೆ. ಇವರಲ್ಲಿ ಸುಮಾರು 80 ಸಾವಿರ ಮಂದಿ ಬೀದಿಬದಿ ವ್ಯಾಪಾರಿಗಳ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಸಾಲ ಪಡೆದಿದ್ದಾರೆ. ಉಳಿದ 70 ಸಾವಿರ ಮಂದಿ ವ್ಯಾಪಾರಿಗಳಿಗೆ ಸರ್ಕಾರ ಇನ್ನೂ ಸಾಲ ಮಂಜೂರಾತಿ ಮಾಡಿಲ್ಲ ಎಂದು ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ತಿಳಿಸಿದೆ. ರಾಜ್ಯ ವ್ಯಾಪಿ ಸುಮಾರು 5 ಲಕ್ಷ ಮಂದಿ ಬೀದಿಬದಿ ವ್ಯಾಪಾರಿಗಳಿದ್ದಾರೆ. ಇದರಲ್ಲಿ 1.9 ಲಕ್ಷ ಮಂದಿ ಮಾತ್ರ ಸಾಲ ಪಡೆದಿದ್ದಾರೆ. ಉತ್ತರ ಪ್ರದೇಶ ಸೇರಿದಂತೆ ಹಲವು ಉತ್ತರ ಭಾರತದ ರಾಜ್ಯಗಳು ಪಿ-ಎಂ ಸ್ವನಿಧಿ ಯೋಜನೆಯಡಿ ಸೌಲ ಸೌಲಭ್ಯ ಪಡೆಯುವಲ್ಲಿ ಮುಂಚೂಣಿಯಲ್ಲಿವೆ. ಆದರೆ ಕರ್ನಾಟಕ ಈ ಯೋಜನೆಯ ಬಳಕೆಯಲ್ಲಿ ಆರನೇ ಸ್ಥಾನದಲ್ಲಿದೆ ಎಂದು ಹೇಳಿದೆ.

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಸಾಲ ಪಡೆಯುವ ವಿಚಾರದಲ್ಲಿ ರಾಜ್ಯ ಹಿಂದೆ ಉಳಿದಿದೆ. ಬ್ಯಾಂಕ್‌ಗಳು ಸಾಲ ನೀಡುವಿಕೆ ವಿಚಾರದಲ್ಲಿ ಕಿರಿಕಿರಿ ಉಂಟು ಮಾಡುತ್ತಿವೆ. ಜತೆಗೆ ರಾಜ್ಯ ಸರ್ಕಾರ ಕೂಡ ಈ ಯೋಜನೆ ಜಾರಿ ವಿಚಾರದಲ್ಲಿ ಹೇಳಿಕೊಳ್ಳುವಷ್ಟು ಉತ್ಸಾಹ ತೋರುತ್ತಿಲ್ಲ. -ರಂಗಸ್ವಾಮಿ, ರಾಜ್ಯಾಧ್ಯಕ್ಷ, ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.