Namma metro: ಆತ್ಮಹತ್ಯೆಗೆ ಮೆಟ್ರೋ ಹಳಿಗೆ ಜಿಗಿದ ಯುವಕ


Team Udayavani, Jan 6, 2024, 10:56 AM IST

Namma metro: ಆತ್ಮಹತ್ಯೆಗೆ ಮೆಟ್ರೋ ಹಳಿಗೆ ಜಿಗಿದ ಯುವಕ

ಬೆಂಗಳೂರು:  ಜಾಲಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಜಿಗಿದ ಕೇರಳ ಮೂಲದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಕೆಲ ಹೊತ್ತು ಮೆಟ್ರೋ ಸಂಚಾರಕ್ಕೆ ಅಡಚಣೆ ಉಂಟಾಗಿ ಸಾವಿರಾರು ಪ್ರಯಾಣಿಕರು ಪರದಾಡಿದರು.

ಕೇರಳ ಅಲಪ್ಪುಳ ಮೂಲದ ಸರೋನ್‌ (23) ಆತ್ಮಹತ್ಯೆಗೆ ಯತ್ನಿಸಿದವ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಆತ್ಮಹತ್ಯೆಗೆ ಯತ್ನಿಸಿದ ಯುವಕ ಬೆಂಗಳೂರಿನ ಅಬ್ಬಿಗೆರೆಯ ಅಚ್ಚಪ್ಪ ಲೇಔಟ್‌ ಸಮರ್ಥ ಅಟೋಮೇಟಿವ್‌ (ಪ್ರೈ) ಲಿ.ನಲ್ಲಿ ಸಿಎನ್‌ಸಿ ಯಂತ್ರದ ಆಪರೇಟರ್‌ ಕೆಲಸ ಮಾಡುತ್ತಿದ್ದ. ಶುಕ್ರವಾರ ರಾತ್ರಿ 7.12ರಲ್ಲಿ ಜಾಲಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ಯುವಕ ಮೆಟ್ರೋಗಾಗಿ ಕಾಯುತ್ತಿದ್ದ ಪ್ರಯಾಣಿಕರ ನಡುವೆಯೇ ಹೋಗಿ ಪ್ಲಾಟ್‌ಫಾರಂನ ಕೊನೆಯಲ್ಲಿ ನಿಂತುಕೊಂಡಿದ್ದ. ಅತ್ತ ಮೆಟ್ರೋ ರೈಲು ಆಗಮಿಸುತ್ತಿದ್ದಂತೆ ಏಕಾಏಕಿ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನು ಗಮನಿಸಿದ ಮೆಟ್ರೋ ರೈಲಿನ ಲೋಕೋ ಪೈಲೆಟ್‌ ಸಮಯಪ್ರಜ್ಞೆಯಿಂದ ಕೂಡಲೇ ಮೆಟ್ರೋವನ್ನು ನಿಲುಗಡೆ ಮಾಡಿದ್ದಾರೆ. ಆದರೂ, ಮೆಟ್ರೋ ರೈಲಿನ ಭಾಗ ಯುವಕನ ದೇಹಕ್ಕೆ ತಾಗಿತ್ತು. ರೈಲಿಗೆ ಸಿಲುಕಿ ಗಾಯಗೊಂಡರೂ ಸಮಯಕ್ಕೆ ಸರಿಯಾಗಿ ಮೆಟ್ರೋ ಸಿಬ್ಬಂದಿ ಸ್ಪಂದಿಸಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಆತನನ್ನು ಮೇಲಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನ ದೇಹಕ್ಕೆ ಹೈ ಪವರ್‌ ಕರೆಂಟ್‌ ಶಾಕ್‌ ಹೊಡೆದ ಹಿನ್ನೆಲೆಯಲ್ಲಿ ಆತನ ಸ್ಥಿತಿ ಗಂಭೀರವಾಗಿದೆ. ಮೆಟ್ರೋ ನಿಲ್ದಾಣದ ಹತ್ತಿರದಲ್ಲಿದ್ದ ಸಂಜೀವಿನಿ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಜಾಲಹಳ್ಳಿ ಆಸ್ಪತ್ರೆಯಿಂದ ಹೆಸರುಘಟ್ಟದ ಸಪ್ತಗಿರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯುವಕನ ಸ್ನೇಹಿತರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೆಲ ಕಾಲ ಮೆಟ್ರೋ ರೈಲುಗಳ ಸಂಚಾರ ಸ್ಥಗಿತ: ಯುವಕ ಹಳಿಗೆ ಜಿಗಿದ ಘಟನೆ ನಡೆದ ವೇಳೆ ಮೆಟ್ರೋದಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಲಿಲ್ಲ. ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತರಲಾಯಿತು. ಘಟನೆಯ ಸಮಯದಲ್ಲಿ ನಾಲ್ಕು ರೈಲುಗಳನ್ನು ಇತರ ನಿಲ್ದಾಣದ ಪ್ಲಾಟ್‌ಫಾರ್ಮ್ ಗಳಲ್ಲಿ ಸ್ಥಗಿತಗೊಳಿಸಲಾಯಿತು.

ಯಶವಂತಪುರ – ನಾಗಸಂದ್ರ ಮಾರ್ಗದಲ್ಲಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಕೆಲ ಹೊತ್ತು ಸ್ಥಗಿತಗೊಳಿಸಲಾಗಿತ್ತು. ಆ ಅವಧಿಯಲ್ಲಿ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು. ರಾತ್ರಿ 8 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗ­ದಲ್ಲಿ ಕಾರ್ಯಾಚರಣೆ ಪುನರಾರಂಭಿಸ­ಲಾಯಿತು ಎಂದು ಬಿಎಂಆರ್‌ಸಿಎಲ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.  ಯಶವಂತಪುರ ಸೇರಿ ಕೆಲವು ಮೆಟ್ರೋ ನಿಲ್ದಾಣದಲ್ಲಿ ಜನರು ಮೆಟ್ರೋ ಇಲ್ಲದೇ ಪರದಾಡಿದ್ದಾರೆ. ರೈಲು ಸೇವೆ ಸ್ಥಗಿತಗೊಂಡ ಸಮಯದಲ್ಲಿ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಸರತಿ ಸಾಲಿನಲ್ಲಿ ಹೊರ ಬರುತ್ತಿರುವ ದೃಶ್ಯ ಕಂಡು ಬಂತು.

ಮೆಟ್ರೋ ಹಳಿಗಳ ಪಕ್ಕದಲ್ಲಿ 750 ವೋಲ್ಟ್ ಹೆವಿ ಪವರ್‌ ಲೈನ್‌ ಹಾದು ಹೋಗಿರುತ್ತದೆ. ಹಾಗಾಗಿ ಮತ್ತೆ ಪವರ್‌ ಜನರೇಟ್‌ ಮಾಡಲು ಅರ್ಧ ಗಂಟೆ ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಕಾರ್ಯಾಚರಣೆ ಕೆಲ ಕಾಲ ಸ್ಥಗಿತಗೊಂಡಿತು ಎಂದು ತಿಳಿದು ಬಂದಿದೆ.

ಅರ್ಧ ಗಂಟೆ ಪರದಾಡಿದ ಪ್ರಯಾಣಿಕರು: 

ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆಯಲ್ಲಿ 4 ಮೆಟ್ರೋಗಳು ಕೆಲ ಕಾಲ ಸ್ಥಗಿತಗೊಂಡಿದ್ದವು. ಪೀಕ್‌ ಅವರ್‌ ಸಮಯದಲ್ಲಿ ದುರ್ಘ‌ಟನೆ ನಡೆದ ಹಿನ್ನೆಲೆಯಲ್ಲಿ ಕೆಲಸ ಮುಗಿಸಿ ಮನೆಯತ್ತ ಸಾಗುತ್ತಿದ್ದ ಸಾವಿರಾರು ಪ್ರಯಾಣಿಕರು ಗೊಂದಲಕ್ಕೆ ಒಳಗಾದರು. ಮೆಟ್ರೋ ರೈಲನ್ನೇ ಅವಲಂಬಿಸಿದ್ದ ಕೆಲ ಪ್ರಯಾಣಿಕರು ಅರ್ಧ ತಾಸು ಕಾದು ಮೆಟ್ರೋದಲ್ಲಿ ಪ್ರಯಾಣಿಸಿದರೆ, ಬಹುತೇಕ ಜನ ಬಸ್‌, ಆಟೋ, ಟ್ಯಾಕ್ಸಿ, ಕ್ಯಾಬ್‌ ಮೊರೆ ಹೋಗುತ್ತಿರುವುದು ಕಂಡು ಬಂತು. ಜಾಲ ಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನೆರೆದಿದ್ದ ನೂರಾರು ಮಂದಿ ಮೆಟ್ರೋ ನಿಂತಿರುವುದನ್ನು ನೋಡಿ ಏನಾಗಿದೆ ಎಂಬ ಅರಿವಿಲ್ಲದೇ ಪರದಾಡುತ್ತಿರುವುದು ಕಂಡು ಬಂತು.

ಮೆಟ್ರೋ ಹಳಿಗೆ ಇಳಿದಿದ್ದ ಪ್ರಕರಣಗಳು:

  1. ಇತ್ತೀಚೆಗೆ ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಮೆಟ್ರೋ ಟ್ರ್ಯಾಕ್‌ಗೆ ಇಳಿದಿದ್ದ ಪ್ರಕರಣ ನಡೆದಿತ್ತು. ಇವರನ್ನು ಗಮನಿಸಿದ್ದ ಸಿಬ್ಬಂದಿ ಕೂಡಲೇ ವಿದ್ಯುತ್‌ ಸಂಪರ್ಕ್‌ ತೆಗೆದು ಮಹಿಳೆಯನ್ನು ರಕ್ಷಿಸಿದ್ದರು. ನಂತರ ವಿಚಾರಿಸಿದಾಗ ಮೊಬೈಲ್‌ ಮೆಟ್ರೋ ಟ್ರ್ಯಾಕ್‌ಗೆ ಬಿದ್ದಿದ್ದ ಹಿನ್ನೆಲೆಯಲ್ಲಿ ರೈಲು ಹಳಿಗೆ ಮಹಿಳೆ ಇಳಿದಿದ್ದರು ಎಂಬುದು ತಿಳಿದು ಬಂದಿತ್ತು.
  2. ಇನ್ನು 2011-12ರಲ್ಲಿ ಮಹಾತ್ಮಗಾಂಧಿ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಹಳಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದ.
  3. ಕೆಲ ದಿನಗಳ ಹಿಂದೆ ಮೆಜೆಸ್ಟಿಕ್‌ನ ಮೆಟ್ರೋ ನಿಲ್ದಾಣದಲ್ಲಿ   ವ್ಯಕ್ತಿಯೊಬ್ಬರ ಮೊಬೈಲ್‌ ಕೈ ತಪ್ಪಿ ಹಳಿಯ ಮೇಲೆ ಬಿದ್ದಿತ್ತು. ಆ ವ್ಯಕ್ತಿ ಈ ಬಗ್ಗೆ ಮೆಟ್ರೋ ನಿಲ್ದಾಣದ ಸಿಬ್ಬಂದಿ ಗಮನಕ್ಕೆ ತಂದಿದ್ದರು.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.