ನಾಳೆಯಿಂದ ಮಂಗಳೂರು ಲಿಟ್‌ ಫೆಸ್ಟ್‌

Team Udayavani, Nov 2, 2018, 11:25 AM IST

naleyinda.jpg

ಬೆಂಗಳೂರು: ಮಂಗಳೂರು ಲಿಟ್ರೇಚರ್‌ ಟ್ರಸ್ಟ್‌ ವತಿಯಿಂದ ನ.3 ಮತ್ತು 4ರಂದು ಮಂಗಳೂರಿನ ಟಿಎಂಎ ಪೈ ಕನ್ವೆನÒನ್‌ ಸೆಂಟರ್‌ನಲ್ಲಿ “ಮಂಗಳೂರು ಲಿಟ್‌ ಫೆಸ್ಟ್‌ ‘ ಸಾಹಿತ್ಯೋತ್ಸವ ನಡೆಯಲಿದೆ.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ಲಿಟ್‌ ಫೆಸ್ಟ್‌ ಸಂಯೋಜಕ ವಿವೇಕ್‌ ಮಲ್ಯ, ಶನಿವಾರ ಬೆಳಗ್ಗೆ “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಸಂಧ್ಯಾ ಪೈ ಹಾಗೂ ನಿಟ್ಟೆ ಎಜುಕೇಷನ್‌ ಟ್ರಸ್ಟ್‌ನ ಡಾ.ಎನ್‌.ವಿನಯ್‌ ಹೆಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಂಜೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಯೋಗಾಸನಗಳ ಪ್ರದರ್ಶನ ಹಾಗೂ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಸಿರಿ ತುಳು ನೃತ್ಯ ಪ್ರದರ್ಶನ ಆಯೋಜಿಸಲಾಗಿದೆ ಎಂದು ಹೇಳಿದರು. ಮಧ್ಯಾಹ್ನ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.

ಲೇಖಕ ಅನೂಜ್‌ ಧಾರ್‌ ರಚಿಸಿರುವ “ಯುವರ್‌ ಪ್ರೈಮ್‌ಮಿನಿಸ್ಟರ್‌ ಈಸ್‌ ಡೆಡ್‌’ ಹಾಗೂ ಆರ್‌.ಜಗನ್ನಾಥನ್‌ ರಚನೆಯ “ಜಾಬ್ಸ್ ಕ್ರೈಸಿಸ್‌ ಇನ್‌ ಇಂಡಿಯಾ’ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಂಜೆ ಪದ್ಮಶ್ರೀ ಡಾ.ಎಸ್‌.ಎಲ್‌.ಭೈರಪ್ಪ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಚಕ್ರವರ್ತಿ ಸೂಲಿಬೆಲೆ ಹಾಗೂ ಉದ್ಯಮಿ ಎಂ.ವೆಂಕಟೇಶ್‌ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ವಿವಿಧ ಕವಿಗೋಷ್ಠಿ, ಸಂವಾದ: ಭಾನುವಾರ ಬೆಳಗ್ಗೆ ನಡೆಯುವ ಕವಿಗೋಷ್ಠಿಯಲ್ಲಿ ಬಿ.ಆರ್‌.ಲಕ್ಷ್ಮಣರಾವ್‌, ವಸಂತ ಕುಮಾರ್‌ ಪೆರ್ಲ, ಡಾ.ಧನಂಜಯ ಕುಂಬ್ಳೆ, ನಂದಿನಿ ಹೆದ್ದುರ್ಗ, ಪೂರ್ಣಿಮಾ ಸುರೇಶ್‌ ಭಾಗವಹಿಸಲಿದ್ದಾರೆ. ಸುಬ್ರಾಯ ಚೊಕ್ಕಾಡಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ಸಿನಿಮಾ ಕುರಿತು ನಡೆಯುವ ಚರ್ಚಾಗೋಷ್ಠಿಯಲ್ಲಿ ರಿಷಬ್‌ ಶೆಟ್ಟಿ ಮತ್ತು ರೋಹಿತ್‌ ಫ‌ಡೆ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ಮಹಿಳೆ ಮತ್ತು ಧರ್ಮ- ತ್ರಿವಳಿ ತಲಾಕ್‌ನಿಂದ ಶಬರಿಮಲೆವರೆಗೂ ವಿಷಯದ ಕುರಿತು ಯೋಗಿನಿ ಶಾಂಭವಿ ಚೋಪ್ರಾ, ಪ್ರೀತಿ ನಾಗರಾಜ್‌ ಹಾಗೂ ಪದ್ಮಾರಾಣಿ ಅವರೊಂದಿಗೆ ನಟಿ ಮಾಳವಿಕಾ ಅವಿನಾಶ್‌ ಸಂವಾದ ನಡೆಸಲಿದ್ದಾರೆ. ಬಳಿಕ ನಡೆಯವ ಗೋಷ್ಠಿಯಲ್ಲಿ “ಕನ್ನಡ ಕಡೆಗೋಲಿನಲ್ಲಿ ಭಾರತ ಮಥನ’ ವಿಷಯದ ಕುರಿತು ಲೇಖಕ ರೋಹಿತ್‌ ಚಕ್ರತೀರ್ಥ ಸಂವಾದ ನಡೆಸಲಿದ್ದಾರೆ.

ಸಹಾನಾ ವಿಜಯಕುಮಾರ್‌ ಹಾಗೂ ಡಾ.ಅಜಕ್ಕಳ ಗಿರೀಶ್‌ ಭಟ್‌ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಸ್ಥಳೀಯ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯದ ಕುರಿತ ಗೋಷ್ಠಿಯಲ್ಲಿ ಡಾ.ಪ್ರಭಾಕರ್‌ ಜೋಶಿ, ಡಾ.ನರೇಂದ್ರ ರೈ ದೇರ್ಲ ಹಾಗೂ ಗುರುದತ್ತ ಅವರು ಭಾಗವಹಿಸಲಿದ್ದಾರೆ. ಚಂದ್ರಶೇಖರ ದಾಮ್ಲೆ ಸಂವಾದ ನಡೆಸಲಿದ್ದಾರೆ ಎಂದು ವಿವೇಕ್‌ ಮಲ್ಯ ವಿವರಿಸಿದರು. 

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.