ಮಂಜುನಾಥ ಪ್ರಸಾದ್ ಮತ್ತೆ ಬಿಬಿಎಂಪಿ ಆಯುಕ್ತ
Team Udayavani, Jun 29, 2018, 11:38 AM IST
ಬೆಂಗಳೂರು: ರಾಜ್ಯ ಸರ್ಕಾರ ಆರು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ವಿಧಾನಸಭೆ ಚುನಾವಣೆಗೂ ಮೊದಲು ಬಿಬಿಎಂಪಿಯಿಂದ ವರ್ಗಾವಣೆಗೊಂಡು ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ಎನ್.ಮಂಜುನಾಥ ಪ್ರಸಾದ್ ಅವರನ್ನು ಮತ್ತೆ ಬಿಬಿಎಂಪಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ಆಯುಕ್ತರಾಗಿದ್ದ ಎನ್.ಮಹೇಶ್ವರ್ ರಾವ್ ಅವರನ್ನು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಅವರಿಗೆ ಹೆಚ್ಚುವರಿಯಾಗಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿದೆ.
ಐಟಿ ಬಿಟಿ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊಣೆಗಾರಿಕೆ ನೀಡಲಾಗಿದೆ. ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಎಂಡಿ ವಿ.ಯಶವಂತ ಅವರನ್ನು ಹಾಲಿ ಹುದ್ದೆಯೊಂದಿಗೆ ಅಬಕಾರಿ ಇಲಾಖೆಯ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ. ಕೆ.ಬಿ.ಶಿವಕುಮಾರ್ ಅವರನ್ನು ಡಿಪಿಎಆರ್(ಸೇವೆ) ಉಪ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ