ಮಂಜುನಾಥ ಪ್ರಸಾದ್‌ ವರ್ಗಾವಣೆ

Team Udayavani, May 4, 2018, 11:45 AM IST

manjunath.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಕೆಲವೇ ದಿನ ಬಾಕಿ ಇರುವಂತೆ ದಿಢೀರ್‌ ಬೆಳವಣಿಗೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದ ಬಿಬಿಎಂಪಿ ಆಯುಕ್ತ ಡಾ. ಎನ್‌. ಮಂಜುನಾಥ್‌ ಪ್ರಸಾದ್‌ ಅವರನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಸರ್ಕಾರ ಎತ್ತಂಗಡಿ ಮಾಡಿದ್ದು, ಅವರ ಸ್ಥಾನಕ್ಕೆ ಕೃಷಿ ಇಲಾಖೆ ಕಾರ್ಯದರ್ಶಿಯಾಗಿದ್ದ ಎಂ.ಮಹೇಶ್ವರ ರಾವ್‌ ಅವರನ್ನು ನೇಮಕ ಮಾಡಿದೆ.

ಈ ಕುರಿತು ಗುರುವಾರ ಬೆಳಗ್ಗೆ ಆದೇಶ ಹೊರಡಿಸಿರುವ ಸರ್ಕಾರ, ತಕ್ಷಣದಿಂದಲೇ ಅಧಿಕಾರ ಸ್ವೀಕರಿಸಬೇಕು ಮತ್ತು 24 ಗಂಟೆಯೊಳಗೆ ಚುನಾವಣಾ ಕರ್ತವ್ಯಗಳನ್ನು ಆರಂಭಿಸಬೇಕು ಎಂದು ಮಹೇಶ್ವರರಾವ್‌ ಅವರಿಗೆ ನಿರ್ದೇಶನ ನೀಡಿದೆ. ಆದರೆ, ಮಂಜುನಾಥ್‌ ಪ್ರಸಾದ್‌ ಅವರಿಗೆ ಯಾವುದೇ ಸ್ಥಳ ಗೊತ್ತುಪಡಿಸಿಲ್ಲ.

ಚುನಾವಣಾ ಪೂರ್ವಸಿದ್ಧತೆ ಹಾಗೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಆಗಿರುವ ಲೋಪಗಳೇ ಮಂಜುನಾಥ್‌ ಅವರ ದಿಢೀರ್‌ ಎತ್ತಂಗಡಿಗೆ ಕಾರಣ ಎಂದು ಹೇಳಲಾಗುತ್ತಿದೆ.  ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಜಾಹಿರಾತು ಫ‌ಲಕಗಳ ಬಳಕೆಗೆ ಅನುಮತಿ ನೀಡಲು ನಿರಾಕರಿಸುತ್ತಿರುವ ಬಿಬಿಎಂಪಿ ಆಯುಕ್ತರು ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮೇ 2ರಂದು ದೂರು ಕೊಟ್ಟಿತ್ತು.

ಅದರ ಮಾರನೇ ದಿನವೇ ಆಯೋಗದ ನಿರ್ದೇಶನದಂತೆ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ ಹಿರಿಯ ಉಪ ಆಯುಕ್ತ ಉಮೇಶ್‌ ಸಿನ್ಹಾ ರಾಜ್ಯಕ್ಕೆ ಭೇಟಿ ಕೊಟ್ಟು ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ವೇಳೆ ಶಾಂತಿನಗರ, ದಾಸರಹಳ್ಳಿ, ಯಶವಂತಪುರ,

ಯಲಹಂಕ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 7 ಸಾವಿರಕ್ಕೂ ಹೆಚ್ಚು ನಕಲಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲದೆ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಪೈಕಿ 1,500 ಮಂದಿ ಮೊದಲ ಹಂತದ ತರಬೇತಿಗೆ ಗೈರು ಹಾಜರಾದ ವಿಷಯ ಗಂಭೀರವಾಗಿ ಚರ್ಚೆಗೆ ಬಂದಿತ್ತು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯ ಮೂಲಗಳು ತಿಳಿಸಿವೆ.

ಏನಿದು ಜಾಹೀರಾತು ಫ‌ಲಕಗಳಲ್ಲಿ ತಾರತಮ್ಯ?: ನಗರದಲ್ಲಿರುವ ವಾಣಿಜ್ಯ ಜಾಹೀರಾತು ಫ‌ಲಕಗಳಲ್ಲಿ ಜಾಹೀರಾತು ಪ್ರಕಟಿಸಲು ಅನುಮತಿ ನೀಡುವಂತೆ ರಾಜಕೀಯ ಪಕ್ಷಗಳು ಕೋರಿದ್ದವು. ಆದರೆ, ನಗರದಲ್ಲಿ 2,650 ಅನಧಿಕೃತ ಜಾಹೀರಾತು ಫ‌ಲಕಗಳಿರುವುದರಿಂದ ಅನುಮತಿ ನೀಡದಿರಲು ಬಿಬಿಎಂಪಿ ಆಯುಕ್ತರೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್‌ ಪ್ರಸಾದ್‌ ನಿರ್ಧರಿಸಿದ್ದರು.

ಈ ಕುರಿತು ವಿವಿಧ ರಾಜಕೀಯ ಪಕ್ಷಗಳು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದವು. ಅದರಂತೆ ಸಾರ್ವಜನಿಕ ಮುಕ್ತ ಪ್ರದೇಶಗಳ ಸಂರಕ್ಷಣೆ ಕಾಯ್ದೆ 1981, ಕೆಎಂಸಿ ಹಾಗೂ ಜಾಹೀರಾತು ಉಪವಿಧಿಗಳಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗಳು ಆಯುಕ್ತರಿಗೆ ಸೂಚಿಸಿದ್ದರು. ಇದಾದ ಬಳಿಕವೂ ಆಯುಕ್ತರು ವಾಣಿಜ್ಯ ಜಾಹೀರಾತು ಫ‌ಲಕಗಳ ಬಳಕೆ ಅನುಮತಿ ನೀಡಿಲ್ಲ ಹಾಗೂ ತಾರತಮ್ಯ ಎಸಗಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.