ಮನ್ಸೂರ್‌ ಖಾನ್‌ ಪತ್ನಿಯರ ಮನೆಗಳ ಮೇಲೆ ದಾಳಿ

Team Udayavani, Jun 18, 2019, 3:00 AM IST

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ತಲೆಮರೆಸಿಕೊಂಡಿರುವ ಆರೋಪಿ ಮನ್ಸೂರ್‌ ಖಾನ್‌ನ ಇಬ್ಬರು ಪತ್ನಿಯರು ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಸೋಮವಾರ ದಾಳಿ ನಡೆಸಿ, ಕೆಜಿಗಟ್ಟಲೇ ಚಿನ್ನಾಭರಣ ಹಾಗೂ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಶಿವಾಜಿನಗರ, ಜಯನಗರ ಮತ್ತು ತಿಲಕನಗರದಲ್ಲಿರುವ ಮನ್ಸೂರ್‌ ಖಾನ್‌ ಮೊದಲ ಮತ್ತು ಮೂರನೇ ಪತ್ನಿಯರ ಮನೆಗಳು ಹಾಗೂ ಅವರ ಸಂಬಂಧಿಕರ ಮನೆಗಳು ಸೇರಿ 7ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಎರಡು ಕೆ.ಜಿ. ಚಿನ್ನಾಭರಣ, 2.7 ಲಕ್ಷ ರೂ. ನಗದು, ಲ್ಯಾಪ್‌ಟಾಪ್‌ ಮತ್ತು ಕೆಲ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಎಸ್‌ಐಟಿಯ ಮೂಲಗಳು ತಿಳಿಸಿವೆ.

ದುಬೈನಲ್ಲೂ ದೂರುಗಳು: ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಮನ್ಸೂರ್‌ ಖಾನ್‌ ವಿರುದ್ಧ ರಾಜ್ಯದಲ್ಲಿ ಮಾತ್ರವಲ್ಲದೆ, ದುಬೈನ ಹೂಡಿಕೆದಾರರು ದೂರು ನೀಡಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ದುಬೈನಿಂದಲೇ ಐಎಂಎ ಕಂಪನಿಯಲ್ಲಿ ಹೂಡಿಕೆ ಮಾಡಿರುವ 500ಕ್ಕೂ ಹೆಚ್ಚು ಮಂದಿ ಹೂಡಿಕೆದಾರರು ಭಾರತ ಹೈ ಕಮಿಷನ್‌ಗೆ ದೂರು ನೀಡಲು ಸಿದ್ದತೆ ನಡೆಸಿದ್ದಾರೆ.

ಮತ್ತೂಂದೆಡೆ ವಂಚನೆಗೊಳಗಾದವರ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, 40 ಸಾವಿರ ಗಡಿ ದಾಟಿದೆ. ಸೋಮವಾರವೂ ಸಾವಿರಾರು ಮುಂದಿ ಶಿವಾಜಿನಗರದ ಗಣೇಶ್‌ ಭಾಗ್‌ ಕನ್ವೆಷನ್‌ ಹಾಲ್‌ನಲ್ಲಿ ದೂರು ನೀಡಿದ್ದು, ರಾತ್ರಿ ವೇಳೆಗೆ 40, 600 ದೂರುಗಳು ದಾಖಲಾಗಿವೆ ಎಂದು ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸರು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಅಕ್ಟೋಬರ್‌ನಲ್ಲಿ ನಡೆಯುವ ನಾಡಹಬ್ಬ ಮೈಸೂರು ದಸರಾಕ್ಕೆ ದೇಶ-ವಿದೇಶಿಗರನ್ನು ಆಕರ್ಷಿಸಲು ಏಪ್ರಿಲ್‌ ತಿಂಗಳಿನಿಂದ ಸಿದ್ಧತೆ ಆರಂಭಿಸಲಾಗುವುದು ಎಂದು...

  • ಬೆಂಗಳೂರು: ನಗರದಲ್ಲಿ ವಾಸವಿರುವ ಮಂಗಳಮುಖೀಯರ ಶ್ರೇಯೋಭಿವೃದ್ಧಿ ಹಾಗೂ ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಪಾಲಿಕೆಯ ಬಜೆಟ್‌ನಲ್ಲಿ...

  • ಬೆಂಗಳೂರು: ಒತ್ತಡ ನಿವಾರಣೆಗಾಗಿ ಈಶಾನ್ಯ ಪೊಲೀಸರಿಗೆ ಮೂರುದಿನಗಳ ಕಾಲ "ಜುಂಬಾ' ನೃತ್ಯ ತರಬೇತಿ ನೀಡಿದ್ದು ಪೊಲೀಸ್‌ ಸಿಬ್ಬಂದಿ ಕುಣಿದು ಕುಪ್ಪಳಿಸಿರುವ ವಿಡಿಯೋ...

  • ಬೆಂಗಳೂರು: ಆಸ್ಪತ್ರೆ ಪಕ್ಕದಲ್ಲಿಯೇ ನಡೆಯುವ ಸಂತೆಗೆ ನಿತ್ಯ ಸಹಸ್ರಾರು ಜನ ಬರುತ್ತಾರೆ. ಆ ಪೈಕಿ ಬಹುತೇಕರು ಆಸ್ಪತ್ರೆ ಆವರಣದಲ್ಲಿ ವಾಹನ ನಿಲ್ಲಿಸಿ ಸಂತೆಗೆ...

  • ಬೆಂಗಳೂರು: ಆಂಧ್ರಪ್ರದೇಶ ಮೂಲದ ಸಾಫ್ಟ್ವೇರ್‌ ಎಂಜಿನಿಯರ್‌ ಲಕ್ಷ್ಮಣ್‌ಕುಮಾರ್‌ (33) ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಮಹದೇವಪುರ ಠಾಣೆ ಪೊಲೀಸರು,...

ಹೊಸ ಸೇರ್ಪಡೆ