Udayavni Special

ಮನ್ಸೂರ್‌ನ “ನಕಲಿ ಚಿನ್ನದ ರಹಸ್ಯ’ ಬಯಲು


Team Udayavani, Aug 8, 2019, 3:07 AM IST

mansoor

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಹಗರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಗೆದಷ್ಟೂ ಅಕ್ರಮ ಬಯಲಾಗುತ್ತಿದೆ. ಆರೋಪಿ ಮನ್ಸೂರ್‌ ಖಾನ್‌, ಈಜು ಕೊಳದಲ್ಲಿ 303 ಕೆ.ಜಿ. ನಕಲಿ ಚಿನ್ನದ ಗಟ್ಟಿ ಅಡಗಿಸಿಟ್ಟಿದ್ದ ಎಂಬ ಮಾಹಿತಿ ಈಗ ಹೊರಬಂದಿದೆ! ಐಎಂಎ ಮಾಲೀಕ ಮನ್ಸೂರ್‌ ಖಾನ್‌ ಹೂಡಿಕೆದಾರರಿಂದ ಹಣ ಹೂಡಿಕೆ ಮಾಡಿಸಲು ನಕಲಿ ಚಿನ್ನದ ಗಟ್ಟಿಗಳನ್ನು ಅಸ್ತ್ರವನ್ನಾಗಿ ಮಾಡಿಕೊಂಡಿದ್ದ ಎಂಬ ಸಂಗತಿ ಬಹಿರಂಗವಾಗಿದೆ. ಎಸ್‌ಐಟಿ ವಿಚಾರಣೆ ವೇಳೆ ಮನ್ಸೂರ್‌ ಈ ಸ್ಫೋಟಕ ಮಾಹಿತಿ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಈ ಮಾಹಿತಿ ಆಧರಿಸಿ ರಿಚ್‌ಮಂಡ್‌ ಟೌನ್‌ನಲ್ಲಿರುವ ಮನ್ಸೂರ್‌ಗೆ ಸೇರಿದ 6ನೇ ಮಹಡಿಯ ಸ್ವಿಮ್ಮಿಂಗ್‌ ಫ‌ೂಲ್‌ನ ಮೋಟಾರು ಕಿಂಡಿಯಲ್ಲಿ ಬಚ್ಚಿಡಲಾಗಿದ್ದ ಬರೋಬ್ಬರಿ 303 ಕೆ.ಜಿ ನಕಲಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದೆ. ಮನ್ಸೂರ್‌ ಖಾನ್‌ ದೇಶ ಬಿಟ್ಟು ಪರಾರಿಯಾಗುವ ಕೆಲವೇ ದಿನಗಳ ಮುನ್ನ ನಕಲಿ ಚಿನ್ನ ಬಿಸ್ಕತ್‌ಗಳನ್ನು ತನ್ನ ಆಪ್ತ ವಸೀಂ ಮೂಲಕ ಅಲ್ಲಿಗೆ ಸ್ಥಳಾಂತರಿದ್ದ ಎಂದು ಎಸ್‌ಐಟಿ ತಿಳಿಸಿದೆ.

ತಾಮ್ರಕ್ಕೆ ಚಿನ್ನಲೇಪನ!: ಹಲವು ವರ್ಷಗಳ ಹಿಂದೆ ಆರೋಪಿ ಮನ್ಸೂರ್‌ ಖಾನ್‌ ತಾಮ್ರದಲ್ಲಿ ಬಿಸ್ಕತ್‌ಗಳು ಹಾಗೂ ಸಣ್ಣದಾದ ಗಟ್ಟಿಗಳನ್ನು ಮಾಡಿಸಿದ್ದಾನೆ. ಅದಕ್ಕೆ ಚಿನ್ನಲೇಪವನ್ನು ಮಾಡಿಸಿದ್ದಾನೆ. ಈ ನಕಲಿ ಚಿನ್ನದ ಬಿಸ್ಕತ್‌ಗಳನ್ನು ಐಎಂಎ ಜ್ಯುವೆಲರಿ ಶಾಪ್‌ನಲ್ಲಿಟ್ಟುಕೊಂಡಿದ್ದ. ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಲು ಬರುವವರಿಗೆ ಈ ನಕಲಿ ಚಿನ್ನವನ್ನು ತೋರಿಸಿ ನೀವು ಹೂಡುವ ಹಣ ಚಿನ್ನದ ವಹಿವಾಟಿಗೆ ಬಳಕೆಯಾಗಲಿದೆ ಎಂದು ನಂಬಿಸಿ ಕೋಟ್ಯಾಂತರ ರೂ. ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದ. ನಕಲಿ ಚಿನ್ನದ ವಿಚಾರ ಮನ್ಸೂರ್‌ ಖಾನ್‌ ಹಾಗೂ ನಿರ್ದೇಶಕ ವಸೀಂಗೆ ಹೊರತುಪಡಿಸಿ ಮತ್ಯಾರಿಗೂ ಈ ವಿಚಾರ ಗೊತ್ತಿರಲಿಲ್ಲ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಆ.30ರವರೆಗೆ ವಸೀಂ ಕಸ್ಟಡಿಗೆ: ಐಎಂಎ ನಿರ್ದೇಶಕರಲ್ಲಿ ಒಬ್ಬನಾದ ವಸೀಂ ಈ ಹಿಂದೆಯೂ ಎಸ್‌ಐಟಿಯಿಂದ ಬಂಧಿತನಾಗಿದ್ದ. ಆದರೆ, ನಕಲಿ ಚಿನ್ನದ ಬಗ್ಗೆ ಮಾಹಿತಿ ನೀಡಿರಲಿಲ್ಲ. ತನಿಖೆ ಮುಂದುವರಿದಂತೆ ಮನ್ಸೂರ್‌ ಸೂಚನೆ ಮೇರೆಗೆ ರಿಚ್‌ಮಂಡ್‌ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ಚಿನ್ನ ಬಚ್ಚಿಟ್ಟಿದ್ದ ಮಾಹಿತಿ ಆಧರಿಸಿ ಪುನಃ ಬಂಧಿಸಿದ್ದು, ನಕಲಿ ಚಿನ್ನ ಜಪ್ತಿ ಮಾಡಲಾಗಿದೆ.

ಆರೋಪಿಗಳಿಬ್ಬರೂ ಇನ್ನೂ ಹಲವು ಅಕ್ರಮಗಳನ್ನು ಎಸಗಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಹೆಚ್ಚಿನ ವಿಚಾರಣೆ ಸಲುವಾಗಿ ನ್ಯಾಯಾಲಯದ ಅನುಮತಿ ಪಡೆದು ವಸೀಂನನ್ನು ಆ.30ರವರೆಗೆ ಕಸ್ಟಡಿಗೆ ಪಡೆಯಲಾಗಿದೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ನಕಲಿ-ಅಸಲಿ: “ನನ್ನ ಬಳಿ ಚಿನ್ನದ ಗಟ್ಟಿಗಳಿವೆ’ ಎಂದು ಮನ್ಸೂರ್‌ ಖಾನ್‌ ತನ್ನ ಬಂಧನಕ್ಕೆ ಮುಂಚೆ ವೀಡಿಯೋದಲ್ಲಿ ಹೇಳಿಕೆ ನೀಡಿದ್ದ. ಇದೀಗ ನಕಲಿ ಚಿನ್ನ ಸಿಕ್ಕಿರುವ ವಿಚಾರ ಗ್ರಾಹಕರಲ್ಲಿ ಶಂಕೆ ಮೂಡುವಂತೆ ಮಾಡಿದೆ. ಅಸಲಿ ಚಿನ್ನ ಜಪ್ತಿಯಾದರೆ ಹೂಡಿಕೆ ಹಣ ವಾಪಸ್‌ ಬರುವ ನಿರೀಕ್ಷೆ ಇತ್ತು. ಆದರೆ ಇದೀಗ ನಕಲಿ ಚಿನ್ನ ಆಗಿರುವುದರಿಂದ ಹಣ ವಾಪಸ್‌ ಬರುತ್ತದೋ, ಇಲ್ಲವೋ ಎಂಬ ಆತಂಕ ಹೆಚ್ಚಾಗಿದೆ. ಅಸಲಿ ಚಿನ್ನವನ್ನು ಬೇರೆಡೆ ಸಾಗಿಸಿ ನಕಲಿ ಚಿನ್ನ ಏಕೆ ಇಟ್ಟಿರಬಾರದು ಎಂಬ ಶಂಕೆಯೂ ಹೂಡಿಕೆದಾರರಲ್ಲಿ ವ್ಯಕ್ತವಾಗಿದೆ ಎನ್ನಲಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-8

ಆಶ್ರಯ ಫಲಾನುಭವಿಗಳಿಗೂ ಕೋವಿಡ್ 19 ಕಾಟ

bng-tdy-7

ಕೋವಿಡ್ 19 ಪರಿಸ್ಥಿತಿ ನಿರ್ವಹಣೆಗೆ ಮಾಹಿತಿ ಸಂಗ್ರಣೆ

ಬಿಸಿಲ ಬೇಗೆಯ ನಗರಕ್ಕೆ  ತಂಪೆರೆದ ಮಳೆ

ಬಿಸಿಲ ಬೇಗೆಯ ನಗರಕ್ಕೆ ತಂಪೆರೆದ ಮಳೆ

9 ನಿಮಿಷದಲ್ಲಿ 1,200 ಮೆ.ವ್ಯಾ. ವಿದ್ಯುತ್‌ ಉಳಿಕೆ

9 ನಿಮಿಷದಲ್ಲಿ 1,200 ಮೆ.ವ್ಯಾ. ವಿದ್ಯುತ್‌ ಉಳಿಕೆ

ಮೆಟ್ರೋ ಬೋಗಿಗಳ ಪೂರೈಕೆಗೆ ಚೀನಾ ವಿಘ್ನ

ಮೆಟ್ರೋ ಬೋಗಿಗಳ ಪೂರೈಕೆಗೆ ಚೀನಾ ವಿಘ್ನ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಕೋವಿಡ್ ವೈರಸ್ ಸೋಂಕು ಪತ್ತೆಯಲ್ಲಿ PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?