ಮಂತ್ರಿಮಾಲ್‌ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ!


Team Udayavani, Jan 6, 2017, 11:28 AM IST

massage-p[arlour.jpg

ಬೆಂಗಳೂರು: ನಗರದ ಮಲ್ಲೇಶ್ವರದಲ್ಲಿರುವ ಪ್ರತಿಷ್ಠಿತ ಮಂತ್ರಿ ಮಾಲ್‌ನ ಮಸಾಜ್‌ ಪಾರ್ಲರ್‌ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿ, ಮೂವರು ವಿದೇಶಿ ಯುವತಿಯರನ್ನು ರಕ್ಷಿಸಿದ್ದಾರೆ.

ಪಾರ್ಲರ್‌ನ ವ್ಯವಸ್ಥಾಪಕಿ ಶೋಭಾ (25), ಸಹಾಯಕ ವ್ಯವಸ್ಥಾಪಕಿ ಶೆಹನಾಜ್‌ ಹಾಗೂ ಕೆಲಸಗಾರ ಶರೀಫ್ಸಾಬ್‌ ನಾದಾರ್‌ ಬಂಧಿತರು. ಆರೋಪಿಗಳಿಂದ 50,890 ರೂ. ನಗದು ಹಾಗೂ ಸ್ವೆ„ಪಿಂಗ್‌ ಉಪಕರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಅಮಿತ್‌ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಸಿಸಿಬಿ ಅಧಿಕಾರಿ ತಿಳಿಸಿದ್ದಾರೆ.

ಪಾರ್ಲರ್‌ ಮಾಲೀಕ ಗುಜರಾತ್‌ ಮೂಲದ ಸಿನ್ಹಾ ಎಂಬುವನು ಎಂದು ಗೊತ್ತಾಗಿದೆ. ಸ್ಯಾಂಡ್‌ ವಿಚ್‌ ಎಂಬಾತನೊಂದಿಗೆ ಸೇರಿ ದೇಶಾದ್ಯಂತ ಇಂಥ ಹಲವು ಪಾರ್ಲರ್‌ಗಳನ್ನು ನಡೆಸುತ್ತಿದ್ದಾನೆ. ದಾಳಿ ವೇಳೆ ಆತ ಪಾರ್ಲರ್‌ನಲ್ಲಿರಲಿಲ್ಲ ಎಂದು ಅಧಿಕಾರಿ ತಿಳಿಸಿದರು.

ಮಂತ್ರಿಮಾಲ್‌ನ ಎರಡನೇ ಮಹಡಿಯಲ್ಲಿ ಆರೋಪಿಗಳು “ಸ್ಪಾ ನೇಷನ್‌’ ಎಂಬ ಹೆಸರಿನಲ್ಲಿ ಪಾರ್ಲರ್‌ ನಡೆಸಲು ಅನುಮತಿ ಪಡೆದಿದ್ದರು. ಕಾನೂನು ಬಾಹಿರವಾಗಿ “ಬಾಡಿ ಟು ಬಾಡಿ ಮಸಾಜ್‌’ ಹ್ಯಾಪಿ ಎಂಡಿಂಗ್‌’ ಮತ್ತು ಹ್ಯಾಂಡ್‌ಜಾಬ್‌ ಹೆಸರಿನಲ್ಲಿ ಹಲವು ವರ್ಷಗಳಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿದರು. 

ಪಾರ್ಲರ್‌ಗೆ ವಿದ್ಯಾರ್ಥಿಗಳು ಹಾಗೂ ಹಣವಂತ ಸಾಫ್ಟ್ವೇರ್‌ ಎಂಜಿನಿಯರ್‌ಗಳು ಹೆಚ್ಚಾಗಿ ಬರುತ್ತಿದ್ದರು. ಮಸಾಜ್‌ವೊಂದಕ್ಕೆ ಆರೋಪಿಗಳು 10 ರಿಂದ 20 ಸಾವಿರ ರೂ.ನಿಗದಿ ಮಾಡಿದ್ದರು. ಆರೋಪಿಗಳು ಕೆಲಸ ಹಾಗೂ ಪ್ರವಾಸಿ ವೀಸಾದಡಿ ನಗರಕ್ಕೆ ಬರುತ್ತಿದ್ದ ರಷ್ಯಾ, ಥೈಲ್ಯಾಂಡ್‌, ಉಕ್ರೇನ್‌ ಸೇರಿದಂತೆ ಹಲವು ದೇಶಗಳ ಯುವತಿಯರನ್ನು ಸಂಪರ್ಕಿಸುತ್ತಿದ್ದರು.

ಆರೋಪಿಗಳು ಹಣದ ಆಮಿಷವೊಡ್ಡಿ ಅವರನ್ನು ಪಾರ್ಲರ್‌ಗೆ ಕರೆ ತಂದು ವೇಶ್ಯಾವಾ ಟಿಕೆಗೆ ದೂಡುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿ ವೇಳೆ ಥೈಲ್ಯಾಂಡ್‌ ಮೂಲದ 2 ಯುವತಿಯರು ಹಾಗೂ ರಷ್ಯಾದ ದೇಶದ ಯುವತಿಯೊಬ್ಬಳನ್ನು ರಕ್ಷಿಸಲಾಗಿದೆ. ಮಸಾಜ್‌ ಪಾರ್ಲರ್‌ಗೆ ಕಾಯಂ ಗ್ರಾಹಕರಿದ್ದರು.

ಅವರೆಲ್ಲ ಸದಸ್ಯತ್ವ ಕಾರ್ಡ್‌ ಸಹ ಮಾಡಿಸಿದ್ದರು. ಜತೆಗೆ ಸ್ವೆ„ಪಿಂಗ್‌ ಉಪಕರಣದ ಮೂಲಕ ಹಣ ಪಡೆದುಕೊಳ್ಳುತ್ತಿದ್ದರು. ದಾಳಿ ವೇಳೆ ಎರಡು ಸದಸ್ಯತ್ವ ಕಾರ್ಡ್‌ ಹಾಗೂ ಸ್ವೆ„ಪಿಂಗ್‌ ಉಪಕರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.