21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

Team Udayavani, Mar 19, 2019, 12:30 AM IST

sslc-exam.jpg

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಮಾ.21ರಿಂದ ಆರಂಭವಾಗಿದ್ದು, 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 2847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ರಾಜ್ಯದ 5,202 ಸರ್ಕಾರಿ ಪ್ರೌಢಶಾಲೆ, 3,244 ಅನುದಾನಿತ, 6004 ಅನುದಾನ ರಹಿತ ಸೇರಿ 14,450 ಪ್ರೌಢಶಾಲೆಗಳ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸರ್ಕಾರಿ 1140 ಮತ್ತು ಅನುದಾನಿತ 1124,ಖಾಸಗಿ 583 ಕೇಂದ್ರಗಳು ಹಾಗೂ 46 ಸೂಕ್ಷ್ಮ, 7 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರ ಸಹಿತವಾಗಿ 2,847 ಕೇಂದ್ರಗಳಿಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷೆಗೆ ಬೇಕಾದ ಎಲ್ಲ ರೀತಿಯ ಭದ್ರತಾ ಕ್ರಮವನ್ನು ಜಿಲ್ಲಾಡಳಿತ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫ‌ರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಮಂಡಳಿ ಅಧ್ಯಕ್ಷೆ ವಿ. ಸುಮಂಗಳಾ ಮಾತನಾಡಿ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಹಾಗೂ ಕೆಎಸ್‌ ಆರ್‌ಟಿಸಿ ವತಿಯಿಂದ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರ ತೋರಿಸಿ ಪ್ರಯಾಣ ಮಾಡಬಹುದು. ಏ.10ರಿಂದ ರಾಜ್ಯದ 230 ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಲಿದೆ. 77,754 ಮೌಲ್ಯಮಾಪಕರು ಆನ್‌ಲೈನ್‌ ಪೋರ್ಟಿಂಗ್‌ ಮೂಲಕ ಅಂಕಗಳನ್ನು ನಮೂದಿಸಲಿದ್ದಾರೆ ಎಂದು ಹೇಳಿದರು.

ಪರೀಕ್ಷೆ ಸುಗಮ: ಪರೀಕ್ಷಾ ಸಿದ್ಧತೆಯ ಅಂಗವಾಗಿ ಪ್ರಶ್ನೆ ಪತ್ರಿಕೆ ಶೇಖರಿಸಿಡುವ ಎಲ್ಲ ಖಜಾನೆಗಳಲ್ಲಿ ಭದ್ರತಾ ಕೊಠಡಿಗಳು, ಜಿಲ್ಲಾ ಖಜಾನೆಗಳನ್ನು ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳ ಲೈವ್‌ ವಿಡಿಯೋಗಳನ್ನು ಮಂಡಳಿಯ ಕಂಟ್ರೋಲ್‌ ರೂಂನಿಂದ ವೀಕ್ಷಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಅಕ್ರಮಗಳ ತಡೆಗಟ್ಟಲು ಅಧಿಕಾರಿ ಮತ್ತು ಸಿಬ್ಬಂದಿಗೆ ಗುರುತಿನ ಚೀಟಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ ವಾಚ್‌ಗೆ ನಿಷೇಧಿಸಲಾಗಿದ್ದು, ಅನಲಾಗ್‌(ಸಾಮಾನ್ಯ) ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷೆ ಬರೆಯಲು ಅವಕಾಶ ಇದೆ.

ಪರೀಕ್ಷೆಗೆ 10 ಸಾವಿರ
ವಿದ್ಯಾರ್ಥಿಗಳು ಅನರ್ಹ?

ವರ್ಷಪೂರ್ತಿ ಸರಿಯಾಗಿ ತರಗತಿಗಳಿಗೆ ಹೋಗದೇ ಹಾಜರಾತಿ ಕೊರತೆ ಎದುರಿಸುತ್ತಿರುವ 10 ಸಾವಿರ ವಿದ್ಯಾರ್ಥಿಗಳು ಮಾ.21ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅನರ್ಹರಾಗಿದ್ದಾರೆ. ವರ್ಷದ ಒಟ್ಟು ಹಾಜರಾತಿಯಲ್ಲಿ ಕನಿಷ್ಠ ಶೇ.75ರಷ್ಟು ಹಾಜರಾತಿ ಹೊಂದಿರಬೇಕು. ನಿರ್ದಿಷ್ಟ ಪ್ರಮಾಣಕ್ಕಿಂತ ಕಡಿಮೆ ಹಾಜರಾತಿ ಇರುವ 10,572 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ವಿಶಿಷ್ಟಚೇತನರು ಹಾಜರಿ
4651 ವಿಶಿಷ್ಟಚೇತನ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,451 ವಿದ್ಯಾರ್ಥಿಗಳಿಗೆ ಭಾಷಾ ವಿನಾಯಿತಿ ನೀಡಲಾಗಿದೆ. 480 ಅರ್ಹರಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯಗಳನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ. ಮಾನ್ಯತೆ ನವೀಕರಿಸದ ಖಾಸಗಿ ಶಾಲೆಗಳ 20 ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ವರ್ಗಾವಣೆ
ಮಾಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಳಾ ತಿಳಿಸಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.