ಬನ್ನೇರುಘಟ್ಟದಲ್ಲಿ ನಿಲ್ಲದ ಗಣಿ ಹಾವಳಿ


Team Udayavani, Oct 15, 2018, 12:43 PM IST

bannerugatta.jpg

ಬೆಂಗಳೂರು: ಕಳೆದ ಎರಡು ವರ್ಷದಲ್ಲಿ ಬೆಂಗಳೂರಿನಲ್ಲಿ ಅರಣ್ಯ ಪ್ರಮಾಣ ಹೆಚ್ಚಿದ್ದರೂ ಅಕ್ರಮ ಗಣಿಗಾರಿಕೆ, ಮತ್ತು ಜಲ್ಲಿ ಕ್ರಷರ್‌ಗಳಿಗೆ ಕಡಿವಾಣ ಬೀಳದ ಕಾರಣ ಪರಿಸರದ ಮೇಲಿನ ಹಾನಿ ಮುಂದುವರಿದಿದೆ. ಕಳೆದೆರಡು ವರ್ಷಗಳಲ್ಲಿ ಬೆಂಗಳೂರು ನಗರ ಪ್ರದೇಶದ ಅರಣ್ಯ ಹೆಚ್ಚಳವಾಗಿ 234 ಚದರ ಕಿ.ಮೀ.ಗಳಷ್ಟಿದೆ.

ಅರಣ್ಯ ಇಲಾಖೆ ಮಾಹಿತಿಯಂತೆ ಬನ್ನೇರುಘಟ್ಟ ವನ್ಯಜೀವಿ ವಲಯ ಹೊರತುಪಡಿಸಿ 4795.12 ಹೆಕ್ಟೇರ್‌ನಷ್ಟು ಅಧಿಸೂಚಿತ ಅರಣ್ಯವಿದೆ. ಇನ್ನು ಬನ್ನೇರುಘಟ್ಟ ವನ್ಯಜೀವಿ ವಲಯ 260 ಚದರ ಕಿ.ಮೀ.ನಷ್ಟು ವ್ಯಾಪಿಸಿದ್ದು, ಇಲ್ಲಿಯೂ ಮರಗಳ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.

ಆದರೆ, ಅಲ್ಲಿ ಗಣಿಗಾರಿಕೆ, ಜಲ್ಲಿ ಕ್ವಾರಿ, ಎಂ ಸ್ಯಾಂಡ್‌ ನಿರ್ಮಾಣ ಘಟಕಗಳಿಂದಾಗಿ ಪರಿಸರದ ಮೇಲೆ ಪ್ರತೀಕೂಲ ಪರಿಣಾಮ ಉಂಟಾಗುತ್ತಿದೆ. ಜತೆಗೆ ಅರಣ್ಯ ಸಂಪತ್ತು ನಾಶವಾಗುತ್ತಿದ್ದು, ಪ್ರಾಣಿಗಳಿಗೂ ತೊಂದರೆಯಾಗುತ್ತಿದೆ ಎಂಬ ಆರೋಪವಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹೇಳುವಂತೆ ಬನ್ನೇರುಘಟ್ಟ ವನ್ಯಜೀವಿ ವಲಯ ಹೊರತುಪಡಿಸಿ ಇಲಾಖೆಯ ಅಧಿಸೂಚಿತ ಅರಣ್ಯದಲ್ಲಿ ಯಾವುದೇ ಗಣಿಗಾರಿಕೆ ಅಥವಾ ಕ್ರಷರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ.

ಆದರೆ, ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಇದು ನಡೆಯುತ್ತಿದ್ದು, ಈ ಬಗ್ಗೆ ಪರಿಸರ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಆದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವಿನ ಸಮನ್ವಯತೆ ಕೊರತೆಯಿಂದಾಗಿ ಗಣಿಗಾರಿಕೆಗೆ ನಿಯಂತ್ರಣ ಹೇರುವುದು ಸಾಧ್ಯವಾಗುತ್ತಿಲ್ಲ.

ಬನ್ನೇರುಘಟ್ಟವೇ ಸಮಸ್ಯೆ: ಬನ್ನೇರುಘಟ್ಟ ಅರಣ್ಯ ಪ್ರದೇಶವನ್ನು (260 ಚದರ ಕಿ.ಮೀ.) ರಾಷ್ಟ್ರೀಯ ಉದ್ಯಾನ, ವನ್ಯಜೀವಿ ವಲಯ (ಪರಿಸರ ಸೂಕ್ಷ್ಮ ವಲಯ) ಎಂದು ಘೋಷಿಸಲಾಗಿದೆ. ಈ ಪ್ರದೇಶದ ಒಂದು ಕಿ.ಮೀ. ವ್ಯಾಪ್ತಿಯನ್ನು ಸುರಕ್ಷಿತ ವಲಯ ಮತ್ತು 10 ಕಿ.ಮೀ. ವ್ಯಾಪ್ತಿಯನ್ನು ಬಫ‌ರ್‌ ಝೋನ್‌ ಎಂದು ಗುರುತಿಸಲಾಗಿದೆ.

ನಿಯಮಾವಳಿ ಪ್ರಕಾರ ಸುರಕ್ಷಿತ ವಲಯ ಅಥವಾ ಬಫ‌ರ್‌ ಝೋನ್‌ನಲ್ಲಿ ಯಾವುದೇ ಗಣಿಗಾರಿಕೆ ಅಥವಾ ಕ್ರಷರ್‌ಗಳಿಗೆ ಅವಕಾಶ ಇಲ್ಲ. ಆದರೆ, ಬನ್ನೇರುಘಟ್ಟ ಸುತ್ತಮುತ್ತ ಇರುವ 10ಕ್ಕೂ ಹೆಚ್ಚು ಗಣಿಗಾರಿಕೆ, 10ಕ್ಕೂ ಹೆಚ್ಚು ಜಲ್ಲಿ ಕ್ರಷರ್‌ ಅಥವಾ ಎಂ ಸ್ಯಾಂಡ್‌ ಘಟಕಗಳ ಪೈಕಿ ಕೆಲವು ಬಫ‌ರ್‌ ಝೋನ್‌ ವ್ಯಾಪ್ತಿಯೊಳಗೆ ಬರುತ್ತದೆ ಎನ್ನುತ್ತಾರೆ ಅಧಿಕಾರಿಗಳು.

ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕಿನ ಜಿಗಣಿ ಮತ್ತು ಕಸಬ ಹೋಬಳಿಗೆ ಒಳಪಡುವ ಶಿವನಹಳ್ಳಿ, ರಾಗಿಹಳ್ಳಿ, ಕಾಡುಜಕ್ಕನಹಳ್ಳಿ, ಜಗ್ಗನದೊಡ್ಡಿ, ಇಂಡಲವಾಡಿ ಗ್ರಾಮಗಳು ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುತ್ತಿದ್ದು, ಇಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ. ಆದರೂ ಈ ಎಲ್ಲ ಪ್ರದೇಶಗಳಲ್ಲಿ ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದೆ.

ಈ ಮಧ್ಯೆ 1,538 ಹೆಕ್ಟೇರ್‌ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂದು ಐಐಎಸ್‌ಸಿ ವರದಿ ನೀಡಿದೆ. ಈ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡದಂತೆ ಅರಣ್ಯ ಇಲಾಖೆ ಸ್ಥಳೀಯ ಅಧಿಕಾರಿಗಳು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಾಕಷ್ಟು ಪತ್ರ ಬರೆದರೂ ಗಣಿಗಾರಿಕೆಗೆ ಕಡಿವಾಣ ಬಿದ್ದಿಲ್ಲ. ಗಣಿಗಾರಿಕೆ ಎಷ್ಟೊಂದು ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದರೆ ಕೆಲವೆಡೆ ಅರಣ್ಯ ಗಡಿಗಳೇ ಮಾಯವಾಗಿವೆ.

ಅರಣ್ಯ ಇಲಾಖೆ ಹೇಳುವುದೇನು?: ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬೇಡಿ ಎಂದು ಈಗಾಗಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪತ್ರ ಬರೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಹೊಸ ಗಣಿಗಾರಿಕೆಗೆ ಅವಕಾಶ ನೀಡುತ್ತಿಲ್ಲ. ಆದರೆ, ಈ ಹಿಂದೆ ಅನುಮತಿ ನೀಡಿದ ಗಣಿಗಾರಿಕೆ ಮುಂದುವರಿದಿದ್ದು, ಇದರಿಂದ ಸಮಸ್ಯೆಯಾಗುತ್ತಿದೆ. ಆದರೆ, ಗಣಿಗಾರಿಕೆ ನಡೆಯುವ ಪ್ರದೇಶಗಳು ನಿಗದಿತ ಪ್ರದೇಶಕ್ಕಿಂತ ವಿಸ್ತಾರವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಗಣಿಗಾರಿಕೆ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿದೆ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಹೇಳುವುದೇನು?: ಗಣಿಗಾರಿಕೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ನಿರಾಕ್ಷೇಪಣಾ ಪತ್ರ ಆಧರಿಸಿ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳುತ್ತಾರೆ. ನಿರಾಕ್ಷೇಪಣಾ ಪತ್ರ ಇಲ್ಲದಿದ್ದರೆ ಗಣಿಗಾರಿಕೆಗೆ ಅನುಮತಿ ನೀಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನೇರವಾಗಿ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ.

ಸದ್ಯ ಇಲ್ಲಿ ಯಾವುದೇ ಗಣಿಗಾರಿಕೆಗೆ ಅನುಮತಿ ನೀಡುತ್ತಿಲ್ಲ. ಅರಣ್ಯ ಇಲಾಖೆ ಪತ್ರ ಮತ್ತು ನಿಯಮಾವಳಿ ಆಧರಿಸಿ ಈಗಾಗಲೇ ಹಲವು ಗಣಿಗಾರಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಕೆಲವು ಗಣಿಗಾರಿಕೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಪ್ರಕರಣ ನ್ಯಾಯಾಲಯದಲ್ಲಿದೆ: ಬನ್ನೇರುಘಟ್ಟ ಪ್ರದೇಶದ ಪರಿಸರ ಸೂಕ್ಷ್ಮ ವಲಯದ ಸುತ್ತ ಗಣಿಗಾರಿಕೆ ಸ್ಥಗಿತಗೊಳಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಆದೇಶ ಹೊರಡಿಸಿದೆಯಾದರೂ ಅದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಲಾಗಿದೆ. ತಮಗೆ 10ರಿಂದ 20 ವರ್ಷ ಅವಧಿಗೆ ಗಣಿಗಾರಿಕೆಗೆ ಅನುಮತಿ ನೀಡಲಾಗಿದ್ದು, ಅವಧಿ ಮುಗಿಯುವ ಮುನ್ನವೇ ಗಣಿಗಾರಿಕೆ ಸ್ಥಗಿತಗೊಳಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಆದೇಶ ಹೊರಡಿಸಿದೆ.

ಆದ್ದರಿಂದ ಸ್ಥಗಿತ ಆದೇಶ ರದ್ದುಗೊಳಿಸಬೇಕು ಎಂದು ಐದು ಗಣಿ ಕಂಪನಿಗಳು ಕೋರ್ಟ್‌ ಮೊರೆ ಹೋಗಿದ್ದು, ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಹೀಗಾಗಿ ಗಣಿಗಾರಿಕೆ ಮುಂದುವರಿದಿದೆ ಎನ್ನುತ್ತಾರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಅಧಿಕಾರಿಗಳು.

ಗಣಿಗಾರಿಕೆ ರದ್ದು ಕೋರಿ 2013ರಿಂದಲೇ ಪತ್ರ: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪರಿಸರ ಸೂಕ್ಷ್ಮ ವಲಯದಲ್ಲಿ ಕಲ್ಲು ಗಣಿಗಾರಿಕೆ ತಡೆಗಟ್ಟುವ ಬಗ್ಗೆ 2013ರಲ್ಲೇ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದರು.

ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಉದ್ಯಾನ ಮತ್ತು ಅಭಯಾರಣ್ಯದ 10 ಕಿ.ಮೀ. ಅಂತರದವರೆಗೆ ಅರಣ್ಯೇತರ ಚಟುವಟಿಕೆಗಳನ್ನು ನಿರ್ಬಂಧಿಸುವುದು ವನ್ಯಜೀವಿಗಳ ಆವಾಸ ಸ್ಥಾನದ ರಕ್ಷಣೆ ದೃಷ್ಟಿಯಿಂದ ಅಗತ್ಯವಾಗಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಪ್ರದೇಶವು ಮುಖ್ಯವಾಗಿ ಅನೆಗಳ ನಿರಂತರ ಚಲನ ವಲನಗಳ ಪ್ರದೇಶವಾಗಿದ್ದು (ಆನೆ ಕಾರಿಡಾರ್‌),

ಈ ಪ್ರದೇಶ ಆನೇಕಲ್‌ ತಾಲೂಕು ಮತ್ತು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲೂ ವಿಸ್ತಾರವಾಗಿದೆ. ಆದ್ದರಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪ್ರದೇಶದ ಗಡಿಯಿಂದ ಹೊರಗೆ ಕಲ್ಲು ಗಣಿ ಮತ್ತು ಕಲ್ಲುಪುಡಿ ಘಟಕಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು.

ಅಲ್ಲದೆ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ (ಬಫ‌ರ್‌ ಝೋನ್‌) ಅರಣ್ಯೇತರ ಚಟುವಟಿಕೆಗಳಾದ ಗಲ್ಲು ಗಣಿ ಮತ್ತು ಕಲ್ಲು ಪುಡಿ ಘಟಕಗಳ ಚಟುವಟಿಕೆಗಳಿಗೆ ಸಂಬಂಧಿಸಿದ ವನ್ಯಜೀವಿ ಪ್ರಾಧಿಕಾರಗಳಿಂದ ಪರಿಸರ ಅನುಮತಿ ಹೊಂದಬೇಕಾಗಿದೆ. ಅದರಂತೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದೂ ಮನವಿ ಮಾಡಿದ್ದರು. ಇದಾದ ಬಳಿಕ ಇಂತಹ ಕೆಲವು ಪತ್ರಗಳನ್ನು ಬರೆಯಲಾಗಿದೆಯಾದರೂ ಗಣಿಗಾರಿಕೆ ಮಾತ್ರ ಸ್ಥಗಿತಗೊಂಡಿಲ್ಲ.

ಕೇಂದ್ರದವರೆಗೂ ದೂರು ಹೋಗಿತ್ತು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸುವ ಕುರಿತು ಕೇಂದ್ರ ಸರ್ಕಾರದವರೆಗೂ ದೂರು ಹೋಗಿತ್ತು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸುರಕ್ಷತಾ ವಲಯದಲ್ಲಿರುವ ರಾಗಿಹಳ್ಳಿ ಬಳಿ ನಿಯಮಗಳನ್ನು ಗಾಳಿಗೆ ತೂರಿ ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವನ್ಯಜೀವಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ವೃಕ್ಷಾ ಪ್ರತಿಷ್ಠಾನ ಕೇಂದ್ರ ಪರಿಸರ ಸಚಿವ ಡಾ.ಹರ್ಷವರ್ಧನ ಅವರಿಗೆ ದೂರು ನೀಡಿತ್ತು.

ರಾಗಿಹಳ್ಳಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇಲ್ಲಿ ಕಲ್ಲು ಪುಡಿಮಾಡುವ ಘಟಕ ಆರಂಭಿಸಲು ಪರವಾನಗಿ ಕೋರಿ ಅರ್ಜಿ ಸಲ್ಲಿಸುವಾಗ ಮಾಲೀಕರು ಅರಣ್ಯ ಇಲಾಖೆಗೆ ತಪ್ಪು ಮಾಹಿತಿ ನೀಡಿ¨ªಾರೆ. ಈ ಪ್ರದೇಶದಲ್ಲಿ ಕಾಡು ಇಲ್ಲ ಎಂದು ಅವರು ತಿಳಿಸಿದ್ದರು. ಅಧಿಕಾರಿಗಳು ಸರಿಯಾಗಿ ಪರಿಶೀಲನೆ ನಡೆಸದೆಯೇ ಈ ಘಟಕಕ್ಕೆ ಅನುಮತಿ ನೀಡಿದ್ದರು. ಈ ಪ್ರದೇಶದಲ್ಲಿ ಕಲ್ಲು ಸಾಗಿಸುವ ವಾಹನಗಳು ಹಗಲು ರಾತ್ರಿ ಸಂಚರಿಸುತ್ತಿರುತ್ತವೆ.

ಇದರಿಂದ ವನ್ಯಜೀವಿಗಳಿಗೆಅಪಾಯ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ. ಬನ್ನೇರುಘಟ್ಟ ವನ್ಯಜೀವಿ ವಲಯ ಹಾಗೂ ಹಾರೊಹಳ್ಳಿ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ಕಲ್ಲುಗಣಿಗಾರಿಕೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನುಮತಿ ನೀಡಿದೆ. ಇದರಲ್ಲಿ ಎರಡು ಗಣಿಗಳಿಗೆ 20 ವರ್ಷಗಳ ಅವಧಿಗೆ 2006-07ನೇ ಸಾಲಿನಲ್ಲೇ ಅನುಮತಿ ನೀಡಲಾಗಿದೆ. ರಾಗಿಹಳ್ಳಿಯ ಘಟಕಕ್ಕೆ 2013ರಲ್ಲಿ ಅನುಮತಿ ಕೊಡಲಾಗಿದೆ. ಇವುಗಳನ್ನು ರದ್ದುಪಡಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. 

ಬನ್ನೇರುಘಟ್ಟ ವ್ಯಾಪ್ತಿಯ ಸುರಕ್ಷತಾ ವಲಯದಲ್ಲಿ ಗಣಿಗಾರಿಕೆ ತಡೆಗಟ್ಟು ರಕ್ಷಿತಾರಣ್ಯ ಕಾಪಾಡಲು ಅರಣ್ಯ ಇಲಾಖೆ ಬದ್ಧವಾಗಿದೆ. ಈ ಕುರಿತು ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಗಣಿಗಾರಿಕೆಯಿಂದ ಬನ್ನೇರುಘಟ್ಟದ ಪರಿಸರಕ್ಕೆ ಹಾನಿಯಾಗಲು ಅವಕಾಶ ನೀಡುವುದಿಲ್ಲ.
-ಆರ್‌.ಶಂಕರ್‌, ಅರಣ್ಯ ಸಚಿವ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.