ಬೂತ್ ಮಟ್ಟದ ಪ್ರಚಾರ ಸಮಿತಿಗೆ ನೇಮಕ
Team Udayavani, Jan 25, 2018, 6:30 AM IST
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ತಳಮಟ್ಟದವರೆಗೂ ತಮ್ಮದೇ ಆದ ಪಡೆ ಇರಬೇಕೆಂಬ ಕಾರಣಕ್ಕೆ ಕೆಪಿಸಿಸಿ
ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೂತ್ ಮಟ್ಟದಲ್ಲಿಯೂ ಪ್ರಚಾರ ಸಮಿತಿಗೆ ಅಧ್ಯಕ್ಷರ ನೇಮಕ ಮಾಡಲು ತೀರ್ಮಾನಿಸಿದ್ದಾರೆ.
ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರ ಪ್ರಚಾರಗಳನ್ನು ಹೊರತು ಪಡಿಸಿ, ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ರಾಜ್ಯ ಹಾಗೂ ಸ್ಥಳೀಯ ನಾಯಕರನ್ನು ಬಳಸಿಕೊಂಡು ಪ್ರತ್ಯೇಕವಾಗಿ ಪ್ರಚಾರ ಸಭೆ ಸಮಾರಂಭಗಳನ್ನು ಏರ್ಪಡಿಸಲು ತೀರ್ಮಾನಿಸಿದ್ದಾರೆ.
ಈ ಕುರಿತು ಬುಧವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರ ಸಭೆ ನಡೆಸಿ, ಯಾರೂ ವಿವಾದಾತ್ಮಕ
ಹೇಳಿಕೆ ನೀಡದಂತೆ ಸೂಚಿಸಿದ್ದಾರೆ. ನಾಲ್ಕೂವರೆ ವರ್ಷದಲ್ಲಿ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆ
ಗಳನ್ನು ಬೀದಿ ನಾಟಕ, ಸೋಶಿಯಲ್ ಮೀಡಿಯಾ ಹಾಗೂ ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಲು ಸರ್ಕಾರದ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ