ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಚಿವ ಕೋಟ: ಇಲಾಖೆ ಯೋಜನೆಗಳ ಕುರಿತು ಚರ್ಚೆ
ಕರಾವಳಿ ಭಾಗದ ಅಭಿವೃದ್ಧಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಪ್ರಧಾನಿ ಸೂಚನೆ
Team Udayavani, Dec 14, 2022, 4:40 PM IST
ಬೆಂಗಳೂರು: ನವದೆಹಲಿಯ ಸಂಸತ್ ಭವನದಲ್ಲಿಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರೊಂದಿಗೆ ಭೇಟಿಯಾದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಪ್ರಧಾನಿಯವರಿಗೆ ಮತ್ಸ್ಯ ದೇವತೆ ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ತಮ್ಮ ಇಲಾಖೆಯ ವಿವಿಧ ಯೋಜನೆಗಳು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಕುರಿತು ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಇಲಾಖೆಗೆ ಸಂಬಂಧಿಸಿದ ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಕರಾವಳಿ ಭಾಗದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳು, ಮೀನುಗಾರರ ಕಲ್ಯಾಣ ಸಂಬಂಧಿತ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ ನೀಡುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳಿಗಾಗಿ ಕೇಂದ್ರದ ಬಳಿ ಬೇಡುವುದಿಲ್ಲ: ಒಮರ್ ಅಬ್ದುಲ್ಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್