ಜಲವಿವಾದಗಳ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಭೆ ಕರೆದ ಸಚಿವ ರಮೇಶ್ ಜಾರಕಿಹೊಳಿ
ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.
Team Udayavani, Feb 25, 2021, 5:22 PM IST
ಬೆಂಗಳೂರು : ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಚರ್ಚಿಸಲು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು, ಶುಕ್ರವಾರ (ಫೆ.26) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.