ಅಲ್ಪಸಂಖ್ಯಾತ ಸ್ಥಾನಮಾನ:ವಿಚಾರಣೆ ಮುಂದೂಡಿಕೆ
Team Udayavani, Sep 27, 2018, 6:25 AM IST
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.10ಕ್ಕೆ ಮುಂದೂಡಿತು.
ಈ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, “ಇದೊಂದು ಗಂಭೀರ ಹಾಗೂ ಅಷ್ಟೇ ಸೂಕ್ಷ್ಮ ಪ್ರಕರಣ ಆಗಿರುವುದರಿಂದ ಕೇಂದ್ರ ಸರ್ಕಾರ ಸಾಕಷ್ಟು ಮುತವರ್ಜಿಯಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ. ಹಾಗಾಗಿ,ಇನ್ನಷ್ಟು ಸಮಯಾವಕಾಶ ಬೇಕು’ ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿತು. ಶಶಿಧರ ಶಾನುಭೋಗ,ಸತೀಶ್ ಹಾಗೂ ಎನ್.ಪಿ.ಅಮೃತೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
2017ರ ಡಿ.22ರ ರಾಜ್ಯ ಅಲ್ಪಸಂಖ್ಯಾತ ಆಯೋಗದ ಕ್ರಮ ಸಂವಿಧಾನ ಬಾಹಿರ. ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ
ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ ಮಾಡಿರುವ ಆಯೋಗದ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು