ಶಾಸಕ ಶಿವಣ್ಣ ಮನೆ ಮೇಲೆ ಐಟಿ ಇಲಾಖೆ ದಾಳಿ

Team Udayavani, Apr 17, 2018, 12:04 PM IST

shivanna.jpg

ಆನೇಕಲ್‌: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ರಾತ್ರಿಯೇ ಕಾಂಗ್ರೆಸ್‌ ಶಾಸಕ ಬಿ.ಶಿವಣ್ಣ ಮನೆ ಮೇಲೆ ಐಟಿ ಇಲಾಖೆ ದಾಳಿ ನಡೆಸಿದೆ. ಭಾನುವಾರ ಮಧ್ಯರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೂರು ಕಾರುಗಳು ಚಂದಾಪುರದ ಬಳಿಯಿರುವ ಸೂರ್ಯಸಿಟಿಯ ಆನೇಕಲ್‌ ಶಾಸಕ ಬಿ.ಶಿವಣ್ಣನವರ ಮನೆ ಮುಂದೆ ದಾಳಿಗಾಗಿ ಸಿದ್ಧವಾಗಿದ್ದವು. ನಾಲ್ಕು ಜನ ಅಧಿಕಾರಿಗಳ ತಂಡ ಮಧ್ಯರಾತ್ರಿಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿರಂತರವಾಗಿ ಶೋಧ ನಡೆಸಿ ಒಂದು ಸೂಟ್‌ಕೇಸ್‌ನೊಂದಿಗೆ ತೆರಳಿದ್ದಾರೆ.

ಅಧಿಕಾರಿಗಳು ಶಾಸಕರ ಮನೆ ಜಾಲಾಡುತ್ತಿದ್ದಂತೆ ಸುದ್ದಿ ಕಾಡ್ಗಿಚ್ಚಿನಂತೆ ತಾಲೂಕಿನಾದ್ಯಂಥ ಹಬ್ಬಿತು. ಸಾವಿರಾರು ಸಂಖ್ಯೆಯಲ್ಲಿನ ಕಾರ್ಯಕರ್ತರು ಶಾಸಕ ಶಿವಣ್ಣ ಅವರ ಮನೆ ಮುಂದೆ ಜಮಾಯಿಸಿದರು. ಕಾರ್ಯಕರ್ತರು ಆಗಮಿಸುತ್ತಿದ್ದಂತೆ ಪೊಲೀಸರು ಸರ್ಪಗಾವಲು ಹಾಕಿ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೇಂದ್ರ ಸರ್ಕಾರ ಮತ್ತು ಆನೇಕಲ್‌ ಮಾಜಿ ಸಚಿವ ಎ.ನಾರಾಯಣಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದಂತೆ ಶಾಸಕ ಬಿ.ಶಿವಣ್ಣ ಮನೆಯಿಂದ ಹೊರ ಬಂದು ಘೋಷಣೆಗಳನ್ನು ಹಾಕದಂತೆ ಮನವಿ ಮಾಡಿದರು. ಆದರೆ ಕಾರ್ಯಕರ್ತರು ಮಾತ್ರ ಸಮಾಧಾನವಾಗದೇ ಘೋಷಣೆಗಳನ್ನು ಹಾಕುತ್ತಲೇ ಇದ್ದರು.

ಸುಮಾರು ಆರು ಗಂಟೆಗಳ ಸತತವಾಗಿ ದಾಖಲಾತಿಗಳನ್ನು ಮತ್ತು ಮನೆಯಲ್ಲಿ ಶಾಸಕರ ಮೊಬೈಲ್‌, ಸಿಸಿಟೀವಿ ಕ್ಯಾಮೆರಾ ಹಾರ್ಡ್‌ ಡಿಸ್ಕ್ ವಶಕ್ಕೆ ತೆಗೆದುಕೊಂಡು ಹೋಗಿದ್ದಾರೆನ್ನಲಾಗಿದೆ. ಸುಮಾರು ಮಧ್ಯಾಹ್ನ 12ಗಂಟೆಗೆ ಶಾಸಕ ಬಿ.ಶಿವಣ್ಣನವರ ಮನೆಯಿಂದ ಅಧಿಕಾರಿಗಳು ಹೊರ ನಡೆಯುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಶಿವಣ್ಣನವರ ಪರ ಘೋಷಣೆಗಳನ್ನು ಹಾಕಿ ಸಂಭ್ರಮಿಸಿದರು. ಶಿವಣ್ಣನವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿ, ಮತ್ತೆ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಮಾನಸಿಕವಾಗಿ ಕುಗ್ಗಿಸಲು ತಂತ್ರ: ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ.ಶಿವಣ್ಣ ಇದೊಂದು ರಾಜಕೀಯ ಪ್ರೇರಿತ ದಾಳಿ. ನನ್ನನ್ನು ಮಾನಸಿಕವಾಗಿ ಕುಗ್ಗಿಸಲು ಈ ರೀತಿ ತಂತ್ರ ಅನುಸರಿಸಿದ್ದಾರೆಂದು ಆರೋಪಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಆಡಳಿತದಲ್ಲಿದ್ದಾಗ ಈ ರೀತಿಯ ಹೆದರಿಸುವ ಕೆಲಸ ಮಾಡಿರಲಿಲ್ಲ. ಆದರೆ ಬಿಜೆಪಿ ಐಟಿ ಅಧಿಕಾರಿಗಳನ್ನು ಮುಂದೆ ಬಿಟ್ಟು ಇಷ್ಟು ದಿನ ನನ್ನ ಮೇಲೆ ತನಿಖೆ ಮಾಡಬಹುದಿತ್ತು. ಚುನಾವಣೆ ಸಮಯಕ್ಕೆ ಇಂತಹ ದಾಳಿ ಮಾಡುವುದು ರಾಜಕೀಯ ಪ್ರೇರಿತವಾಗಿದೆ ಎಂದರು.

ಅಧಿಕಾರಿಗಳು ಕೆಲವೊಂದು ಪ್ರಶ್ನೆಗಳನ್ನು ನನ್ನ ಬಳಿ ಕೇಳಿದ್ದಾರೆ. ಅದಕ್ಕೆಲ್ಲ ಸೂಕ್ತವಾದ ಉತ್ತರ ಕೊಟ್ಟಿದ್ದೇನೆ. ಕೆಲವೊಂದು ದಾಖಲೆಗಳನ್ನು ಅವರು ಪಡೆದುಕೊಂಡಿದ್ದಾರೆ. ನನ್ನಿಂದ ತಪ್ಪಾಗಿದ್ದರೆ ಶಿಕ್ಷೆಯಾಗಲಿ. ಚುನಾವಣೆಯಲ್ಲಿ ಜನತೆ ತೀರ್ಮಾನ ಮಾಡುತ್ತಾರೆ. ನೇರವಾಗಿ ಸ್ಪರ್ಧಿಸಬೇಕಾದವರು ಹಿಂಬದಿಯ ರಾಜಕಾರಣ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷ ಸಾಧಿಸುತ್ತಿದೆ ಎಂದರು.

ಟಾಪ್ ನ್ಯೂಸ್

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆ ಸ್ವರ್ಣ ಸಮರ್ಪಣೆಗೆ ಚಾಲನೆ

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Shobha

Lokasabha Poll: ಎಸ್‌ಟಿಎಸ್‌ ಕ್ಷೇತ್ರದಲ್ಲಿ ಲೀಡ್‌ ಕೊಟ್ಟು ಪಾಠ ಕಲಿಸಿದ್ದೀರಿ- ಶೋಭಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆ ಸ್ವರ್ಣ ಸಮರ್ಪಣೆಗೆ ಚಾಲನೆ

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.