ಮೋದಿ, ಶಾ ರಾಜ್ಯ ಪ್ರವಾಸ ಮುಂದಕ್ಕೆ?
Team Udayavani, Aug 7, 2018, 7:15 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಪ್ರವಾಸ
ಮುಂದಕ್ಕೆ ಹೋಗುವ ಸಾಧ್ಯತೆಯಿದೆ.
ಆಗಸ್ಟ್ ಕೊನೆಯ ವಾರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಾಜ್ಯ ಪ್ರವಾಸ ನಿಗದಿಯಾಗಿತ್ತಾದರೂ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3ನೇ ವಾರಕ್ಕೆ ಮುಂದೂಡಿಕೆಯಾಗಬಹುದು ಎಂದು ಹೇಳಲಾಗಿದೆ.
ಹಾವೇರಿ ಅಥವಾ ಚಿಕ್ಕೋಡಿಯಲ್ಲಿ ರೈತ ಸಮಾವೇಶ ನಡೆಸಿ ಪ್ರಧಾನಿ ಮೋದಿ ಅವರನ್ನು ಕರೆಸಿ ಲೋಕಸಭೆ
ಚುನಾವಣೆಗೆ ಚಾಲನೆ ನೀಡಲು ಬಿಜೆಪಿ ತೀರ್ಮಾನಿಸಿತ್ತು. ಅದಕ್ಕೆ ಮುಂಚೆ ಅಮಿತ್ ಶಾ ಭೇಟಿಯ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಮುಂದೂಡಲಾಗಿತ್ತು. ನಂತರ ನರೇಂದ್ರ ಮೋದಿಯವರ ಕಾರ್ಯಕ್ರಮ ನಿಗದಿಯಾಗಿತ್ತಾದರೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಯಾಗಿರುವುದರಿಂದ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಬರಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ